ತನಿಖೆ ಪ್ರಗತಿಯಲ್ಲಿದೆ…
ಕೊಲೆಗಾರನ ಥ್ರಿಲ್ಲರ್ ಸ್ಟೋರಿ
Team Udayavani, Aug 30, 2019, 5:30 AM IST
ಕನ್ನಡದಲ್ಲಿ ‘ತನಿಖೆ’ ಎಂಬ ಸಿನಿಮಾವೊಂದು ಬಂದಿರೋದು ನಿಮಗೆ ಗೊತ್ತಿರಬಹುದು. ಈಗ ಅದೇ ಹೆಸರಿನಲ್ಲಿ ಮತ್ತೂಂದು ಸಿನಿಮಾ ಬರುತ್ತಿದೆ. ಹಾಗಂತ ಹಳೆಯ ‘ತನಿಖೆ’ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕನಕಪುರದಲ್ಲಿ ಎಂಬತ್ತು ವರ್ಷಗಳ ಹಿಂದೆ ನಡೆದ ಘಟನೆಯನ್ನಾಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ.
ಈ ಚಿತ್ರವನ್ನು ಜಿ.ಎಸ್.ಕಲಿಗೌಡ ನಿರ್ದೇಶಿಸುತ್ತಿದ್ದಾರೆ. ಜೊತೆಗೆ ನಿರ್ಮಾಣದಲ್ಲೂ ಕೈ ಜೋಡಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಅವರು, ಕೆಟ್ಟ ವ್ಯಕ್ತಿಯೊಬ್ಬ ಎಲ್ಲರನ್ನೂ ಸಾಯಿಸುತ್ತಾ ಕೊನೆಗೆ ಸನ್ಮಾರ್ಗಕ್ಕೆ ಬಂದು ಕಾಡಿಗೆ ಹೋಗುತ್ತಾನೆ. ಈ ಕೇಸ್‌ನ ಬೆನ್ನು ಬಿದ್ದ ಪೊಲೀಸರು ಆತನನ್ನು ಮನವೊಲಿಸಿ ಕರೆತರುತ್ತಾರೆ. 20 ಕೊಲೆಗಳನ್ನು ಮಾಡಿರುವ ಆತ ಯಾರು, ಆತನ ಹಿನ್ನೆಲೆ ಏನು ಎಂಬ ಅಂಶದೊಂದಿಗೆ ಈ ಚಿತ್ರ ಸಾಗುತ್ತದೆ ಎನ್ನುತ್ತಾರೆ.
ಚಿತ್ರದಲ್ಲಿ ಆರ್.ಡಿ.ಅನಿಲ್ ನಾಯಕರಾಗಿ ನಟಿಸುತ್ತಿದ್ದಾರೆ. ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಬಿಕ್, ಸಂತೋಷ್ ಜಯಕುಮಾರ್, ಚಂದನಾ, ಮುನಿರಾಜು ಸೇರಿದಂತೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮೈಸೂರು, ಪಾಂಡವಪುರ, ಕನಕಪುರ, ರಾಮನಗರ, ಚನ್ನಪಟ್ಟಣ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.
ಚಿತ್ರಕ್ಕೆ ಕ್ರಿಸ್ಟೋಫರ್ ಲೀ ಸಂಗೀತವಿದೆ. ಶ್ಯಾಮ್ ಸಿಂಧನೂರು ಛಾಯಾಗ್ರಹಣ, ಅಲ್ಟಿಮೇಟ್ ಶಿವು ಸಾಹಸ ಚಿತ್ರಕ್ಕಿದೆ.ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.