ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕರ ಹೈಜಾಕ್
Team Udayavani, Aug 30, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಈಗ ಕೆಎಂಎಫ್ ಅಧ್ಯಕ್ಷರ ಹುದ್ದೆ ಪಡೆಯಲು ಮಂಡಳಿಯ ನಿರ್ದೇಶಕರನ್ನು ಆಪರೇಷನ್ ಕಮಲ ಮಾಡಲು ಮುಂದಾಗಿದೆ. ಆ.31 ರಂದು ಕೆಎಂಎಫ್ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಯ ಲಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಅವರನ್ನು ನಾಮ ನಿರ್ದೇಶನ ಮಾಡಲಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಅಗತ್ಯ ಇರುವ ನಿರ್ದೇಶಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದಾ ರೆಂದು ಹೇಳಲಾಗುತ್ತಿದೆ. 16 ಸದಸ್ಯರಿರುವ ಕರ್ನಾಟಕ ಹಾಲು ಮಹಾ ಮಂಡಳದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಜೊತೆ ಗುರುತಿಸಿಕೊಂಡಿದ್ದ 6 ನಿರ್ದೇಶಕರನ್ನು ಮುಂಬೈಗೆ ಕರೆದು ಕೊಂಡು ಹೋಗಲಾಗಿದೆ ಎಂದು ಹೇಳಲಾಗುತ್ತಿದ್ದು,
ಕಾಂಗ್ರೆಸ್‌ನ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಜೊತೆಗಿದ್ದ ಐವರು ನಿರ್ದೇಶಕರು ಬಾಲಚಂದ್ರಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಆ.31 ರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲು ಬಾಲಚಂದ್ರ ಕಸರತ್ತು ನಡೆಸಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.