ಡಿಕೆಶಿಗೆ ಸಮನ್ಸ್ ನೀಡಿದ ಇಡಿ ಅಧಿಕಾರಿಗಳು
Team Udayavani, Aug 29, 2019, 11:14 PM IST
ಬೆಂಗಳೂರು: ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ ಶಿವಕುಮಾರ್ ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಆದಾಯ ತೆರಿಗೆ ಇಲಾಖೆಯ (ಐಟಿ) ದಾಳಿ ವೇಳೆ ದಿಲ್ಲಿಯ ಮನೆಗಳಲ್ಲಿ ಸಿಕ್ಕಿದ್ದ ಬೇನಾಮಿ ಹಣ ಹಾಗೂ ಆಸ್ತಿಗಳ ದಾಖಲೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಆಪ್ತರೆನ್ನಲಾದ ಇತರ ಆರೋಪಿಗಳಾದ ಸಚಿನ್ ನಾರಾಯಣ, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಹಾಗೂ ರಾಜೇಂದ್ರ ಅವರ ಅರ್ಜಿಗಳನ್ನೂ ಹೈಕೋರ್ಟ್ ವಜಾಗೊಳಿಸಿದೆ.
ಶಿವಕುಮಾರ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿ ಗುರುವಾರ ತೀರ್ಪು ಪ್ರಕಟಿಸಿದ ನ್ಯಾ| ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಲ್ಲ ಅರ್ಜಿಗಳನ್ನು ವಜಾಗೊಳಿಸಿ ಆದೇಶ ನೀಡಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಈಗಾಗಲೇ “ಇಸಿಐಆರ್’ (ಜಾರಿ ಪ್ರಕರಣ ತನಿಖಾ ವರದಿ) ದಾಖಲಿಸಿಕೊಂಡಿದೆ.
ಇದೊಂದು ತನಿಖೆಗೆ ಯೋಗ್ಯವಾದ ಪ್ರಕರಣವಾಗಿದೆ. ಅಲ್ಲದೆ ಆದಾಯ ತೆರಿಗೆ ಪ್ರಧಾನ ನಿರ್ದೇಶಕರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಹಂತದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದು ಅಥವಾ
ಸಮನ್ಸ್‌ಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿಯನ್ನು ಮಾನ್ಯ ಮಾಡುವುದು ಸಮರ್ಥನೀಯವಲ್ಲ. ಹಾಗಾಗಿ ಅರ್ಜಿಗಳನ್ನು ವಜಾ ಗೊಳಿಸಲಾಗುತ್ತಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಯಾವಾಗ, ಎಲ್ಲಿಗೆ ವಿಚಾರಣೆಗೆ ಕರೆದರೂ ನಾನು ಹಾಜರಾಗುತ್ತೇನೆ. ಉಳಿದ ವಿಚಾರಗಳನ್ನು ನಾಳೆ ಮಾತನಾಡುತ್ತೇನೆ.
-ಡಿ.ಕೆ. ಶಿವಕುಮಾರ್, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.