ನೋಟುಗಳ ಬಳಕೆ ಶೇ.17ರಷ್ಟು ಹೆಚ್ಚಳ
Team Udayavani, Aug 30, 2019, 5:42 AM IST
ಮುಂಬೈ: ನಗದು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಡಿಜಿಟಲ್ ಪಾವತಿ ಸಂಸ್ಕೃತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ, ನೋಟುಗಳ ಚಲಾವಣೆಯ ಪ್ರಮಾಣ ಹಿಂದಿಗಿಂತ ಶೇ. 17ರಷ್ಟು ವೃದ್ಧಿಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೇಳಿದೆ.
ತಾನು ಸಿದ್ಧಪಡಿಸಿರುವ 2019ರ ವಾರ್ಷಿಕ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖೀಸಿರುವ ಆರ್‌ಬಿಐ, 2016ರಲ್ಲಿ ಕೈಗೊಳ್ಳಲಾಗಿದ್ದ ನೋಟು ಅಮಾನ್ಯ ನಿರ್ಧಾರದ ನಂತರ 2,000 ರೂ. ಹಾಗೂ 500 ರೂ. ನೋಟುಗಳನ್ನು ಬಿಡುಗಡೆ ಮಾಡಲಾಗಿತ್ತು. ಇವುಗಳಲ್ಲಿ 500 ರೂ. ನೋಟುಗಳ ಚಲಾವಣೆಯು ದೇಶದ ಒಟ್ಟಾರೆ ನಗದು ಚಲಾವಣೆಯಲ್ಲಿ ಶೇ. 51ರಷ್ಟು ಪಾಲು ಹೊಂದಿದೆ. ಚಲಾವಣೆಯಲ್ಲಿರುವ ಒಟ್ಟು ನೋಟುಗಳಲ್ಲಿ 500 ರೂ. ಮೌಲ್ಯದ ನೋಟುಗಳ ಸಂಖ್ಯೆ 10,800 ಕೋಟಿಯಷ್ಟು ಇದೆ” ಎಂದು ಸಂಸ್ಥೆ ವಿವರಿಸಿದೆ.
ಗಣನೀಯ ಹೆಚ್ಚಳ: ದೇಶದ ಬ್ಯಾಂಕಿಂಗ್ ವ್ಯವಸ್ಥೆಯ ವಿರುದ್ಧದ ಮೋಸದ ಜಾಲವು ಶೇ. 74ರಷ್ಟು ಹೆಚ್ಚಾಗಿದ್ದು, 2018-19ನೇ ವರ್ಷದಲ್ಲಿ 71,543 ಕೋಟಿ ರೂ.ಗಳಷ್ಟು ಅವ್ಯವಹಾರಗಳು ನಡೆದಿವೆ ಎಂದು ಆರ್‌ಬಿಐ ಕಳವಳ ವ್ಯಕ್ತಪಡಿಸಿದೆ. ತನ್ನ ವಾರ್ಷಿಕ ವರದಿಯಲ್ಲಿ ಈ ವಿಚಾರ ಉಲ್ಲೇಖೀಸಿರುವ ಸಂಸ್ಥೆ, ಅವ್ಯವಹಾರ ನಡೆದ ನಂತರ ಸರಾಸರಿ 22 ತಿಂಗಳುಗಳಾದ ಮೇಲೆ ಅವು ಬೆಳಕಿಗೆ ಬರುತ್ತಿದೆ. 2018-19 ಅವಧಿಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲೇ ಅತಿ ಹೆಚ್ಚು ಮೋಸದ ಪ್ರಕರಣಗಳು ನಡೆದಿದ್ದು, ಆನಂತರದ ಸ್ಥಾನಗಳಲ್ಲಿ ಖಾಸಗಿ ಬ್ಯಾಂಕುಗಳು ಹಾಗೂ ವಿದೇಶಿ ಬ್ಯಾಂಕುಗಳಿವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.