ಪಿಒಪಿ ಮೂರ್ತಿ ಮಾರಾಟಗಾರರಿಗೆ ಅಧಿಕಾರಿಗಳ ಎಚ್ಚರಿಕೆ

Team Udayavani, Aug 30, 2019, 11:46 AM IST

kopala-tdy-1

ಕಾರಟಗಿ: ಪಿಒಪಿ ಮೂರ್ತಿಗಳನ್ನು ಪುರಸಭೆ ಸಿಬ್ಬಂದಿ ವಶಕ್ಕೆ ಪಡೆದರು.

ಕಾರಟಗಿ: ಪುರಸಭೆ ಸಿಬ್ಬಂದಿ ಹಾಗೂ ಪೊಲೀಸ್‌ ಸಿಬ್ಬಂದಿ ಗುರುವಾರ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟದಲ್ಲಿ ತೊಡಗಿದ್ದವರನ್ನು ಪತ್ತೆ ಹಚ್ಚಿ, ಪಿಒಪಿ ಮೂರ್ತಿ ಮಾರಾಟ ಮಾಡದಂತೆ ಎಚ್ಚರಿಸಿದರು.

ನವಲಿ ವೃತ್ತದಲ್ಲಿ ಪ್ಲಾಸ್ಟರ್‌ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶನನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ ಪಿಒಪಿ ಮೂರ್ತಿಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಮೂರ್ತಿಗಳನ್ನು ಬೇರೆಡೆ ಸ್ಥಳಾಂತರಿಸಲೂ ಸೂಚಿಸಿದರು.

ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕಿ ಅಕ್ಷತಾ ಮಾತನಾಡಿ, ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಬೇಕು. ಪಿಒಪಿ ಮೂರ್ತಿಗಳನ್ನು ತಯಾರಿಸಿ ಅಥವಾ ಬೇರೆಡೆಯಿಂದ ತಂದು ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜಿಸುವಂತೆ ಸರಕಾರ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಿಂದ ಸಾರ್ವಜನಿಕವಾಗಿ ಮಾಹಿತಿ ನೀಡಲಾಗಿದೆ. ಪಿಒಪಿ ಗಣಪತಿ ಮೂರ್ತಿಗಳನ್ನು ತೆಗೆದುಕೊಂಡು ಹೋಗಿ ಪೂಜಿಸಿದವರ ಮೇಲೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪಟ್ಟಣದಲ್ಲಿ ಗಣೇಶ ಮೂರ್ತಿಗಳ ಮಾರಾಟ ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪಿಒಪಿ ಮೂರ್ತಿ ಪತ್ತೆ ಹಚ್ಚಿ ಸೂಕ್ತ ಮಾಹಿತಿ ನೀಡಿದ್ದೇವೆ. ಮಣ್ಣಿನ ಮೂರ್ತಿಯನ್ನೇ ಪೂಜಿಸಬೇಕು. ಮಣ್ಣಿನ ಮೂರ್ತಿ ಪೂಜಿಸುವುದೇ ಶ್ರೇಷ್ಠವಾದದ್ದು, ಅಲ್ಲದೇ ಪರಿಸಕ್ಕೂ ಯಾವುದೇ ಹಾನಿಯಾಗುವುದಿಲ್ಲ ಎಂದು ಹೇಳಿದರು.

ಈ ಬಾರಿ ನಾವು ಪಿಒಪಿ ಮೂರ್ತಿಗಳನ್ನು ತರಿಸಿಲ್ಲ. ಅಲ್ಲದೇ ರಾಜ್ಯದ ಪ್ರಮುಖ ನಗರಗಳಲ್ಲಿ ನೆರೆ ಹಾವಳಿ ಬಂದಿದ್ದರಿಂದ ಈ ಬಾರಿ ಹಬ್ಬದಾಚರಣೆಯಲ್ಲೂ ಆಡಂಬರವಿಲ್ಲ. ಪ್ರತಿ ಬಾರಿಗಿಂತ ಈ ಬಾರಿ ಹಬ್ಬದ ವಿಶೇಷತೆ ಹೆಚ್ಚಾಗಿ ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನೇ ಮಾರಾಟ ಮಾಡುತ್ತಿದ್ದೇವೆ ಎಂದು ಗಣಪತಿ ತಯಾರಕರಾದ ಪದ್ಮಾವತಿ ಶುಭಾಶ ರಾವ್‌ ಚಿತ್ರಗಾರ ತಿಳಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.