ಜವಾಬ್ ಆಶ್ರಯದಲ್ಲಿ ಕರ್ಣಪರ್ವ ಯಕ್ಷಗಾನ ತಾಳಮದ್ದಳೆ
Team Udayavani, Aug 30, 2019, 1:16 PM IST
ಮುಂಬಯಿ, ಆ. 29: ಜುಹೂ-ಅಂಧೇರಿ-ವರ್ಸೋವಾ-ವಿಲೇಪಾರ್ಲೆ ಅಸೋಸಿಯೇಶನ್ ಆಫ್ ಜವಾಬ್ ಆಶ್ರಯದಲ್ಲಿ ಜವಾಬ್ ವಿಶ್ವಸ್ತ ಹಾಗೂ ಮಾಜಿ ಅಧ್ಯಕ್ಷ ರಘು ಎಲ್. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಇವರ ಸಂಯೋಜನೆಯಲ್ಲಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಕರ್ಣಪರ್ವ ಯಕ್ಷಗಾನ ತಾಳಮದ್ದಳೆಯು ಆ. 18ರಂದು ಅಪರಾಹ್ನ 2.30ರಿಂದ ಅಂಧೇರಿ ಪಶ್ಚಿಮದ ಸ್ಟಾರ್ ಬಜಾರ್ ಎದುರುಗಡೆಯಿರುವ ಪೆಪಿಲಾನ್ ಪಾರ್ಕ್ ಬ್ಯಾಂಕ್ವೆಟ್ ಹಾಲ್, ಲಿಂಕ್‌ರೋಡ್ ಅಂಧೇರಿ ಇಲ್ಲಿ ಜರಗಿತು.
ಜವಾಬ್‌ನ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜವಾಬ್‌ನ ಉಪಾಧ್ಯಕ್ಷ ಸಿಎ ಐ. ಆರ್. ಶೆಟ್ಟಿ, ಗೌರವ ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ಕೆ., ಕೋಶಾಧಿಕಾರಿ ಅಶೋಕ್ ಕುಮಾರ್ ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಟಿ. ವಿಶ್ವನಾಥ ಶೆಟ್ಟಿ, ಜತೆ ಕೋಶಾಧಿಕಾರಿ ಎಚ್. ಶೇಖರ್ ಹೆಗ್ಡೆ, ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಜವಾಬ್‌ನ ಮಾಜಿ ಅಧ್ಯಕ್ಷ ರಘು ಎಲ್. ಶೆಟ್ಟಿ ಅವರು ಉಪಸ್ಥಿತರಿದ್ದರು.
ಭಾಗವತರಾಗಿ ದೇವಿಪ್ರಸಾದ್ ಆಳ್ವ ತಲಪಾಡಿ, ಮದ್ದಳೆಯಲ್ಲಿ ಪ್ರಶಾಂತ್ ಶೆಟ್ಟಿ ವಗೆನಾಡು, ಚೆಂಡೆಯಲ್ಲಿ ರೋಹಿತ್ ಉಚ್ಚಿಲ್ ಸಹಕರಿಸಿದರು. ಅರ್ಥದಾರಿಗಳಾಗಿ ಪ್ರೊ| ಭಾಸ್ಕರ್ ರೈ ಕುಕ್ಕುವಳ್ಳಿ, ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಸದಾಶಿವ ಆಳ್ವ ತಲಪಾಡಿ, ಪ್ರಸಾದ್ ಸವಣೂರು, ನ್ಯಾಯವಾದಿ ಗುಣಕರ್ ಶೆಟ್ಟಿಮೊದಲಾದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜವಾಬ್ ಪರಿವಾರದ ಮಹಿಳೆಯರು, ಜವಾಬ್‌ನ ಮಾಜಿ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಕಲಾವಿದರು ಮತ್ತು ಅರ್ಥದಾರಿಗಳನ್ನು ಜವಾಬ್ ವತಿಯಿಂದ ಪುಷ್ಪ ಗೌರವ ನೀಡಿಗೌರವಿಸಲಾಯಿತು. ಪ್ರಾಯೋಜಕರಾದ ರಘು ಎಲ್. ಶೆಟ್ಟಿ ಹಾಗೂ ಸಂಯೋಜಕ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರನ್ನು ಜವಾಬ್ ವತಿಯಿಂದ ಅಭಿನಂದಿಸಲಾಯಿತು.
ಜವಾಬ್‌ನ ಗೌರವ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು, ಕಲಾಪೋಷಕರು, ವಿಶ್ವಸ್ತರು, ಮಾಜಿ ಅಧ್ಯಕ್ಷರು, ಕಾರ್ಯಕಾರಿ ಸಮಿತಿಸದಸ್ಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.