ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಜಿಂಕೆ ಸಾವು
Team Udayavani, Aug 30, 2019, 7:12 PM IST
ಬೆಳಗಾವಿ: ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಜಿಂಕೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ರಸ್ತೆ ದಾಟಿ ಅರಣ್ಯ ಪ್ರದೇಶಕ್ಕೆ ಹೊರಟಿದ್ದ ಜಿಂಕೆಗೆ ವಾಹನವೊಂದು ಜೋರಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಜಿಂಕೆ ರಸ್ತೆ ಪಕ್ಕದಲ್ಲಿ ಬಿದ್ದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಿಂಕೆಯನ್ನು ಸ್ಥಳೀಯರು ಉಳಿಸಲು ಪ್ರಯತ್ನಿಸಿದರು. ನೀರು ಕುಡಿಸಿ ಕೂಡಲೇ ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದರು.
ಸುಮಾರು ಎರಡು ಗಂಟೆಗಳ ಕಾಲ ಗಾಯಗೊಂಡ ಜಿಂಕೆ ಒದ್ದಾಡಿದರೂ ಅದನ್ನು ಉಳಿಸಲು ಸಾಧ್ಯವಾಗಲಿಲ್ಲ. ಜಿಂಕೆ ಮೃತಪಟ್ಟ ಬಳಿಕ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಂದಾಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಜನರು ಜಿಂಕೆಯ ಸ್ಥಿತಿ ಕಂಡು ಮರುಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಸ್ಥಳಕ್ಕೆ ಕಾಕತಿ ಪೊಲೀಸರು ಆಗಮಿಸಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.