ಪ್ಲಾಸ್ಟಿಕ್ ಬಳಕೆ ನಿಷೇಧ ವಾಗ್ಧಾನ ಮಾಡಿದರೆ ಕಂಪ್ಯೂಟರ್: ಜೋಶಿ
Team Udayavani, Aug 31, 2019, 10:16 AM IST
ಹುಬ್ಬಳ್ಳಿ: ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಮಾಡಲಾಯಿತು.
ಹುಬ್ಬಳ್ಳಿ: ಶಾಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಬಗ್ಗೆ ವಾಗ್ಧಾನ ಮಾಡಿದರೆ ಕಂಪ್ಯೂಟರ್ ಕೊಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸರಕಾರಿ ಮಾದರಿ ಗಂಡುಮಕ್ಕಳ ಶಾಲೆ ಸಂಖ್ಯೆ-3 ಹಾಗೂ ಸರಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆ ಸಂಖ್ಯೆ-5ರಲ್ಲಿ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ನೆರೆಪೀಡಿತ ಪ್ರದೇಶಗಳ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ ಮಾಡಿ ಅವರು ಮಾತನಾಡಿದರು.
ಪ್ಲಾಸ್ಟಿಕ್‌ನಿಂದ ಮಾರಕ ಪರಿಣಾಮಗಳಾಗುತ್ತಿವೆ. ದನಕರುಗಳು ಪ್ಲಾಸ್ಟಿಕ್ ತಿಂದು ಜೀವ ಕಳೆದುಕೊಳ್ಳುತ್ತಿವೆ. ಶಿಕ್ಷಕರು ಮಕ್ಕಳಿಗೆ ಪ್ಲಾಸ್ಟಿಕ್‌ನಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಿಳಿಸಿಕೊಡಬೇಕು. ಮಕ್ಕಳು ಪ್ಲಾಸ್ಟಿಕ್ ಬಳಕೆ ಮಾಡದಂತೆ ಪಾಲಕರಿಗೆ ತಿಳಿಸಬೇಕು ಎಂದರು.
ಈಗಾಗಲೇ ಶಾಲೆಗೆ ಒಂದು ಸ್ಮಾರ್ಟ್ ಬೋರ್ಡ್ ನೀಡಲಾಗಿದ್ದು, ಮುಂದಿನ ವರ್ಷ ಶಾಲೆಗೆ ಇನ್ನೊಂದು ಕಂಪ್ಯೂಟರ್ ನೀಡಲಾಗುವುದು. ಮಕ್ಕಳಿಗೆ ಕಂಪ್ಯೂಟರ್ ಕಲಿಸಲು ಶಿಕ್ಷಕರು ಆಸಕ್ತಿ ವಹಿಸಬೇಕು ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಶಿವು ಮೆಣಸಿನಕಾಯಿ, ನಾರಾಯಣ ಜರತಾರಘರ, ಡಿ.ಕೆ. ಚವ್ಹಾಣ, ಸುಧೀರ ಸರಾಫ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಮಹೇಶ ಟೆಂಗಿನಕಾಯಿ, ಶಂಕ್ರಪ್ಪ ಛಬ್ಬಿ, ಶಂಕ್ರಪ್ಪ ಬಿಜವಾಡ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.