ಚೌತಿ-ಮೊಹರಂ ಶಾಂತಿಯಿಂದ ಆಚರಿಸಿ


Team Udayavani, Aug 31, 2019, 10:53 AM IST

bg-tdy-3

ರಾಮದುರ್ಗ: ತಾಪಂ ಸಭಾ ಭವನದಲ್ಲಿ ಚೌತಿ ಹಾಗೂ ಮೊಹರಂ ನಿಮಿತ್ತ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್‌ ಮಾತನಾಡಿದರು.

ರಾಮದುರ್ಗ: ಗಣೇಶ ಉತ್ಸವ ಆಚರಣೆ ಸಂದರ್ಭದಲ್ಲಿ ಪ್ರತಿಷ್ಠಾಪನಾ ಕಮಿಟಿ ಪದಾಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಸುರಕ್ಷಿತವಾಗಿ ಹಬ್ಬ ಆಚರಣೆ ಮಾಡಲು ಸಹಕರಿಸಿದಲ್ಲಿ ಸಾರ್ವಜನಿಕ ಸ್ನೇಹಿಯಾಗಿ ಪೊಲೀಸ್‌ ಇಲಾಖೆ ಕೆಲಸ ಮಾಡಲಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್‌ ಹೇಳಿದರು.

ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಗಣೇಶ ಉತ್ಸವ ಹಾಗೂ ಮೊಹರಂ ಪ್ರಯುಕ್ತ ಏರ್ಪಡಿಸಿದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆ ಹಾವಳಿಯಿಂದ ಸಂಕಷ್ಠದಲ್ಲಿರುವ ಎಲ್ಲರನ್ನು ಜೊತೆಗೆ ಕರೆದುಕೊಂಡು ಹಬ್ಬ ಆಚರಣೆ ಮಾಡಿ, ಪ್ರವಾಹ ಪೀಡಿತರಿಗೆ ಉತ್ಸವ ಕಮಿಟಿ ಸಹಾಯ ಮಾಡಲು ಮುಂದಾದಲ್ಲಿ ವಿಶೇಷವಾಗಿ ಹಬ್ಬ ಆಚರಿಸಿದಂತಾಗುತ್ತದೆ ಎಂದರು.

ಗಣೇಶ ಮಂಟಪ ಸ್ಥಾಪನೆ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕದ ಬಗೆಗೆ ಜಾಗೃತೆ ವಹಿಸಬೇಕು. ನಿಷ್ಕಾಳಜಿ ವಹಿಸಿ ಶಾರ್ಟ್‌ ಸರ್ಕ್ನೂಟ್ ಸಂಭವಿಸಿದಲ್ಲಿ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಹೆಸ್ಕಾಂ ಇಲಾಖೆಯ ಅಧಿಕೃತ ಪರವಾಣಿಗೆ ಪಡೆದು ವಿದ್ಯುತ್‌ ಸಂಪರ್ಕ ಪಡೆದುಕೊಂಡು ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಳ್ಳಬೇಕು. 50-60 ಡೆಸಿಬಲ್ಗಿಂದ ಅಧಿಕವಿರುವ ಸೌಂಡ್ಸ್‌ಗಳ ಬಳಕೆಯಿಂದ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳಿಗೆ ಹೃದಯ ಸಂಬಂಧಿತ ತೊಂದರೆಗೆ ಕಾರಣವಾಗಲಿದೆ. ಎಲ್ಲ ಕೋಮಿನ ಜನತೆಗೆ ಒಟ್ಟಿಗೆ ಪಾಲ್ಗೊಂಡು ಸೌಹಾರ್ಧತೆಯಿಂದ ಮೊಹರಂ ಹಾಗೂ ಗಣೇಶ ಉತ್ಸವ ಆಚರಿಸಬೇಕು ಎಂದು ಹೇಳಿದರು.

ಬೆಳಗಾವಿ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹಬ್ಬದ ಆಚರಣೆ ಸಂದರ್ಭದಲ್ಲಿ ಆಚರಣೆ ಹಿನ್ನಲೆ ಅರಿತು ಆಚರಿಸಬೇಕು. ನಾವು ಮಾಡುವ ಯಾವುದೇ ಆಚರಣೆಗಳಿಂದ ಸಮಾಜದಲ್ಲಿರುವ ಮತ್ತೂಬ್ಬರಿಗೆ ತೊಂದರೆಯಾಗದಂತೆ ನಿಘಾ ವಹಿಸಬೇಕು ಸಲಹೆ ನೀಡಿದರು.

ಈ ವೇಳೆ ಗ್ರೇಡ-2 ತಹಶೀಲ್ದಾರ್‌ ಎಸ್‌.ಕೆ. ತಂಗೊಳಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಮಿಲಾನಟ್ಟಿ, ಡಿವೈಎಸ್‌ಪಿ ಬಿ.ಎಸ್‌ ಪಾಟೀಲ, ಸಿಪಿಐ ಲಖನ್‌ ಮಸಗುಪ್ಪಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಸ್‌. ಕರ್ಕಿ ಸೇರಿದಂತೆ ಇತರರಿದ್ದರು. ಶಿಕ್ಷಕ ಗಣೇಶ ಗೋಕಾವಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.