ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಶಾಶ್ವತ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ
Team Udayavani, Aug 31, 2019, 1:31 PM IST
ಮಂಗಳೂರು: ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಪಚ್ಚನಾಡಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡಿದ್ದರಿಂದ ನೆರೆ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಚ್ಚನಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ತ್ಯಾಜ್ಯ ಹಾಕುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಮೊದಲೇ ರಿಟೈನಿಂಗ್ ಹಾಲ್ ಹಾಕಿದ್ದರೆ ಈ ರೀತಿ ಹಾನಿ ಆಗುತ್ತಿರಲಿಲ್ಲ. ಈಗಾಗಲೇ 27 ಮನೆಗಳಿಗೆ ಹಾನಿಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಈ ಜಾಗವನ್ನು ಒತ್ತುವರಿ ಮಾಡಿ ಶಾಶ್ವತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಡಿಕೆಶಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಕಾನೂನು ಪ್ರಕಾರ ಹೋರಾಟ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರು ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿದ್ದಾರೆ . ಕೆಪಿಸಿಸಿ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ಏನು ಇಲ್ಲ ಎಂದು ಇದೇ ವೇಳೆ ತಿಳಿಸಿದರು .
ಬೆಳ್ತಂಗಡಿಗೆ ಆಗಮಿಸಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಕಚೇರಿಗೆ ತೆರಳಿ, ಆ ಬಳಿಕ ಪ್ರವಾಹ ಪೀಡಿತ ಚಾರ್ಮಾಡಿ ಪ್ರದೇಶಕ್ಕೆ ತೆರಳಲಿದ್ದಾರೆ. ಮಾಜಿ ಶಾಸಕ ಕೆ.ವಸಂತ ಬಂಗೇರ, ಮಾಜಿ ಸಚಿವ ಬಿ.ರಮಾನಾಥ ರೈ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.