“ಕಾಶ್ಮೀರ ವಿಷಯದಲ್ಲಿ ಪಾಕ್ ಕಾಂಗ್ರೆಸ್ನ ಧ್ವನಿ ಒಂದೇ’
Team Udayavani, Sep 1, 2019, 3:04 AM IST
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಪಡಿಸಿದಾಗ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ಭಾಷೆ ಒಂದೇ ಆಗಿತ್ತು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ನ್ನು ಕಟುವಾಗಿ ಟೀಕಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಾದವನ್ನೇ ಕಾಂಗ್ರೆಸ್ ಪುನರುಚ್ಚರಿಸುತ್ತಿದೆ.
ಹೀಗಾಗಿ, ಕಾಂಗ್ರೆಸ್ ಹಾಗೂ ಪಾಕಿಸ್ತಾನದ ನಡುವಿನ ಹೇಳಿಕೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಭಾರತದ ವಿರುದ್ಧವೇ ಈ ಇಬ್ಬರ ಹೇಳಿಕೆ ಬರುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪಾಕಿಸ್ತಾನದವರು ಆಗಾಗ ಪ್ರಸ್ತಾಪಿಸುತ್ತಿದ್ದಾರೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ ಅವರ ನಿಲುವು ಏನೆಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತ ಬಂದಿದೆ. ಇನ್ನಾದರೂ ಅದು ಬುದ್ಧಿ ಕಲಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಜೋಶಿ ಕುಟುಕಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.