ಗೈರಾದ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹ
ವೈದ್ಯಕೀಯ ರಜೆ ಮೇಲೆ ಶಿಕ್ಷಕಿ ಗೈರು • ಮಕ್ಕಳ ಶಿಕ್ಷಣಕ್ಕೆ ಹಿನ್ನಡೆ; ಪಾಲಕರ ಆಕ್ರೋಶ
Team Udayavani, Sep 1, 2019, 11:09 AM IST
ಬಳಗಾನೂರು: ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ್ದ ಬಿಇಒ ವೃಷಭೇಂದ್ರಯ್ಯಸ್ವಾಮಿಗೆ ಗೈರಾದ ಶಿಕ್ಷಕಿ ಮೇಲೆ ಕ್ರಮ ಕೈಗೊಳ್ಳುವಂತೆ ಪಾಲಕರು ಆಗ್ರಹಿಸಿದರು.
ಬಳಗಾನೂರು: ಪಟ್ಟಣದ ಸರಕಾರಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ವೃಷಭೇಂದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ವಿದ್ಯಾರ್ಥಿಗಳ ಪಾಲಕರು ಮುತ್ತಿಗೆ ಹಾಕಿ, ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಕೆಲವೇ ದಿನ ಶಾಲೆಗೆ ಹಾಜರಾಗಿ ಅನಾರೋಗ್ಯ ರಜೆ ಪಡೆದಿರುವ ಶಿಕ್ಷಕಿ ಶಾಂತಾ ಜೋಗಿನಕಟ್ಟಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶಿಕ್ಷಕಿ ಶಾಂತಾ ಜೋಗಿನಕಟ್ಟಿ ಶಾಲೆಗೆ ನೇಮಕವಾದಾಗಿನಿಂದಲೂ ಇಲ್ಲಿ ಕಾರ್ಯ ನಿರ್ವಹಿಸದೆ ಉಪಾಯವಾಗಿ ವೈದ್ಯಕೀಯ ರಜೆಯನ್ನು ಅಂಚೆಯೊಂದಿಗೆ ಕಳಿಸುವ ಮೂಲಕ ರಜೆ ಪಡೆದು ಸರಕಾರದ ಸೌಲಭ್ಯ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸತತ ಗೈರಾದ ಶಿಕ್ಷಕಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇಲ್ಲದಿದ್ದರೆ ಶಾಲೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಶಾಲೆಯಲ್ಲಿ ಖಾಲಿ ಇರುವ ಮುಖ್ಯಗುರು ಹುದ್ದೆ ಭರ್ತಿ ಮಾಡಬೇಕು. ಗೈರಾದ ಶಿಕ್ಷಕಿ ಬದಲಿಗೆ ಅತಿಥಿ ಶಿಕ್ಷಕರು ಅಥವಾ ಎರವಲು ಶಿಕ್ಷಕರನ್ನು ನಿಯೋಜಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಇಒ ವೃಷಭೇಂದ್ರಯ್ಯಸ್ವಾಮಿ, ಎರವಲು ಅಥವಾ ಅತಿಥಿ ಶಿಕ್ಷಕರ ನೇಮಕಕ್ಕೆ ಪ್ರಭಾರಿ ಮುಖ್ಯಗುರು ಸುವರ್ಣ ಕಟ್ಟಿಮನಿ ಅವರಿಗೆ ಸೂಚಿಸಲಾಗಿದೆ. ಗೈರಾದ ಶಿಕ್ಷಕಿ ಶಾಂತಾ ಜೋಗಿನಕಕಟ್ಟೆ ಅವರ ಮೇಲೆ ಕ್ರಮಕ್ಕೆ ಉಪ ನಿರ್ದೇಶಕರಿಗೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಭಾರಿ ಮುಖ್ಯಗುರು ಸುವರ್ಣ ಕಟ್ಟಿಮನಿ, ಶಿಕ್ಷಣಾಧಿಕಾರಿಗಳ ನಿರ್ದೇಶನದಂತೆ ಗೈರಾದ ಶಿಕ್ಷಕಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಖಂಡರಾದ ವಿರುಪಣ್ಣ ಗುತ್ತೇದಾರ, ಎಚ್.ಮಹಾಬಳೇಶ, ಎಚ್. ಪಂಪಾಪತಿ, ಅಮರಪ್ಪ ಉದ್ಬಾಳ, ಅಮರಪ್ಪ ಜವಳಗೇರಾ, ಗಣೇಶ ಡಿಶ್, ನಂದಪ್ಪ ಗೋಡಿಕಾರ, ಮಹೇಶ ಕೊಂಡಕುಂದಿ, ಜಡಿಯಪ್ಪ ಗದ್ದಿ, ಬಸವರಾಜ, ಮಲ್ಲರೆಡ್ಡಿ, ಶರಣಪ್ಪ ಕುಂಬಾರ, ಮಲ್ಲಯ್ಯಸ್ವಾಮಿ ಇತರರು ಇದ್ದರು. ಪ್ರಭಾರಿ ದೈಹಿಕ ಶಿಕ್ಷಣ ಪರೀವೀಕ್ಷಕ ಮಲ್ಲನಗೌಡ ಗುಡಗಲದಿನ್ನಿ, ಬಿಆರ್‌ಸಿ ಕೃಷ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.