ಮಾಜಿ ಸಚಿವ ಡಿಕೆಶಿಗೆ ಒಳಿತಿಗೆ ಪ್ರಾರ್ಥಿಸಿ ಅಭಿಮಾನಿಗಳಿಂದ ವಿಶೇಷ ಪೂಜೆ
Team Udayavani, Sep 1, 2019, 1:50 PM IST
ಚಿಕ್ಕಬಳ್ಳಾಪುರ: ನಗರದ ಸೂಲಾಲಪ್ಪನ ದಿನ್ನೆಯ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಾಜಿ ಸಚಿವರು ಡಿ.ಕೆ.ಶಿವಕುಮಾರ್ ರವರಿಗೆ ಒಳಿತು ಬಯಸಿ ಎಂದು ಡಿಕೆಶಿ ಅಭಿಮಾನಿಗಳಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್ ಮಾತನಾಡಿ ಡಿ.ಕೆ.ಶಿವಕುಮಾರ್ ರವರು ರಾಜ್ಯದಲ್ಲೇ ಒಬ್ಬ ದಿಟ್ಟ ನೇರ ನುಡಿಯ ರಾಜಕಾರಣಿಯಾಗಿದ್ದು ಹಲವಾರು ಸವಾಲುಗಳನ್ನು ಎದುರಿಸಿ ಧೀಮಂತ ನಾಯಕರಾಗಿದ್ದಾರೆ. ಆದರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ವಿರುದ್ಧ ಧ್ವನಿ ಎತ್ತಿದ ನಾಯಕರಲ್ಲಿ ಡಿಕೆಶಿ ಮೊದಲಿಗರು ,ಡಿಕೆಶಿ ರಾಜಕೀಯವಾಗಿ ಬೆಳೆದು ಬಿಟ್ಟರೆ ಬಿಜೆಪಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉಳಿಗಾಲವೇ ಇರಲ್ಲ ಎಂದು ಭಾವಿಸಿರುವ ಬಿಜೆಪಿ ನಾಯಕರು ಇ.ಡಿ ಮತ್ತು ಐ.ಟಿ ಅಧಿಕಾರಿಗಳನ್ನು ಬಳಸಿಕೊಂಡು ಡಿ.ಕೆ.ಶಿವಕುಮಾರ್ ರವರನ್ನು ರಾಜಕೀಯವಾಗಿ ತುಳಿಯಲು ಮುಂದಾಗಿದ್ದಾರೆ ಇದು ಅವರ ಕೆಟ್ಟ ನೀಚ ರಾಜಕೀಯ ವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಇಂತಹ ಅದೆಷ್ಟೋ ನಾಯಕರಿಗೆ ರಾಷ್ಟ್ರದಲ್ಲಿ ಹಾಗೂ ಬೇರೆ ಬೇರೆ ರಾಜ್ಯಗಳಲ್ಲಿ ಬೆದರಿಕೆ ಹಾಕಿ ಬಿಜೆಪಿ ಪಕ್ಷಕ್ಕೆ ಸೆಳೆದಿದ್ದಾರೆ ಎಂದು ಕಿಡಿ ಕಾರಿದರು.
ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ಮಾತನಾಡಿ, ಡಿ.ಕೆ.ಶಿವಕುಮಾರ್ ರವರು ಒಬ್ಬ ಜಾತ್ಯಾತೀತ ನಾಯಕರಾಗಿ ನಮ್ಮ ರಾಜ್ಯದಲ್ಲಿ ಹೊರಹೊಮ್ಮಿದ್ದಾರೆ. ಇವರ ಏಳ್ಗೆಯನ್ನು ಸಹಿಸದೇ ಬಿಜೆಪಿ ನಾಯಕರು ಡಿಕೆಶಿಯವರನ್ನು ರಾಜಕೀಯವಾಗಿ ಮುಗಿಸಲು ಪಿತೂರಿ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಇಂತಹ ಕೆಟ್ಟ ರಾಜಕೀಯ ಚಾಳಿಯನ್ನು ಬಿಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗವುದು ಎಂದು ಎಚ್ಚರಿಸಿದರು.
ಬಂಧನವಾದರೆ ಉಗ್ರ ಹೋರಾಟದ ಎಚ್ಚರಿಕೆ
ಒಂದು ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಅಕ್ರಮವಾಗಿ ಬಂಧಿಸಲು ಮುಂದಾದರೆ ಯಾವುದೇ ಸಮಯದಲ್ಲಿ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಪ್ರತಿಭಟಿಸಲು ಮುಂದೆ ಬರಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಬಾಲಕುಂಟಹಳ್ಳಿ ಮುನಿಯಪ್ಪ,ಜಯರಾಂ, ಶ್ರೀಧರ್, ಜಯರಾಂ, ಲಕ್ಷ್ಮಣ್, ಜನಾರ್ಧನ್,ಸುನಿಲ್ ಜೀವನ್ ಇನ್ನೂ ಹಲವಾರು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.