ದೋಷರಹಿತ ಮತದಾರರ ಪಟ್ಟಿಗೆ ಸಹಕರಿಸಿ
Team Udayavani, Sep 2, 2019, 1:36 PM IST
ಚಿತ್ರದುರ್ಗ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಾಲನೆ ನೀಡಿದರು.
ಚಿತ್ರದುರ್ಗ: ಜಿಲ್ಲೆಯಲ್ಲಿ ಸೆ. 1 ರಿಂದ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಆರಂಭವಾಗಿದ್ದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಇನ್ನಿತರೆ ವಿವರಗಳು ಸರಿ ಇದೆಯೇ ಎಂಬುದನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಭಾನುವಾರ ನಗರದ ತರಾಸು ರಂಗಮಂದಿರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಮತದಾರರ ಪಟ್ಟಿಯನ್ನು ದೋಷ ರಹಿತ ಮಾಡಲು ಚುನಾವಣಾ ಆಯೋಗ ಮುಂದಾಗಿದ್ದು, ಎಲ್ಲ ಮತದಾರರ ವಿವರ ಸಮರ್ಪಕವಾಗಿರಬೇಕು ಎನ್ನುವ ಉದ್ದೇಶದಿಂದ, ಸೆ. 1 ರಿಂದ 30 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಲಿದೆ. ಈ ಅವಕಾಶ ಬಳಸಿಕೊಂಡು ಜಿಲ್ಲೆಯ ಎಲ್ಲ ಮತದಾರರೂ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ, ತಂದೆ ಹೆಸರು, ವಾರ್ಡ್ ಇನ್ನಿತರೆ ಎಲ್ಲ ವಿವರಗಳೂ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಂಡು ಖಾತ್ರಿ ಪಡಿಸಿಕೊಳ್ಳಬೇಕು. ಮತದಾರರ ಸಹಾಯವಾಣಿ 1950 ಮೂಲಕವೂ ಮತದಾರರ ಪಟ್ಟಿಯಲ್ಲಿನ ತಮ್ಮ ವಿವರ ಪಡೆದು, ಮತಗಟ್ಟೆ ಅಧಿಕಾರಿಗಳು (ಬಿಎಲ್ಒ) ಮನೆ ಭೇಟಿ ಸಂದರ್ಭದಲ್ಲಿ ವಿವರ ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ವಿಶೇಷವಾಗಿ ಮತದಾರರ ಸ್ಲಿಪ್ ಸಿದ್ಧಪಡಿಸಲಾಗಿದ್ದು, ಎಲ್ಲ ಮತದಾರರೂ ಈ ಸ್ಲಿಪ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರು, ವಿವರ ಸರಿ ಇದ್ದರೆ ಸರಿಯಿದೆ ಎಂಬುದಾಗಿ ಹಾಗೂ ತಪ್ಪಿದ್ದಲ್ಲಿ ಅದನ್ನು ಸರಿಪಡಿಸಿ ಸ್ಲಿಪ್ ಭರ್ತಿ ಮಾಡಿ ಡ್ರಾಪ್ ಬಾಕ್ಸ್‌ನಲ್ಲಿ ಹಾಕಬೇಕು. ಎಲ್ಲಾ ಮತಗಟ್ಟೆಗಳಲ್ಲಿ, ಸರ್ಕಾರಿ ಕಚೇರಿಗಳು, ತಹಶೀಲ್ದಾರರ ಕಚೇರಿಯಲ್ಲಿಯೂ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಲ್ಲ ಮತದಾರರೂ ಈ ವಿಶೇಷ ಪರಿಶೀಲನಾ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ಮಾತನಾಡಿ, ಮತದಾರರು ಮತ ಚಲಾವಣೆ ಮಾಡುವುದಷ್ಟೇ ಅಲ್ಲ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿವರ ಸರಿ ಇದೆಯೇ ಇಲ್ಲವೇ ಎಂಬುದನ್ನು ಈಗಲೇ ಸರಿಪಡಿಸಿಕೊಂಡು, ಮುಂದಿನ ದಿನಗಳಲ್ಲಿ ದೋಷರಹಿತ ಮತದಾರರ ಗುರುತಿನ ಚೀಟಿ ಲಭ್ಯವಾಗುವಂತೆ ಮಾಡಿಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯ ಎಂದರು.
ಉಪವಿಭಾಗಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ವೆಂಕಟೇಶಯ್ಯ, ನಗರಸಭೆ ಪೌರಾಯುಕ್ತ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಏರ್ಪಡಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಡಮರುಗ ಬಾರಿಸುವ ಮೂಲಕ ವಿಶಿಷ್ಟವಾಗಿ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾ ತರಾಸು ರಂಗಮಂದಿರದವರೆಗೆ ಸಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.