ಸಮನ್ವಯ ಸಾಧಿಸಿ ಕಾರ್ಯಕ್ರಮ ರೂಪಿಸಿ
•ಬೇಟಿ ಬಚಾವೋ-ಬೇಟಿ ಪಡಾವೋ ಹೆಚ್ಚಿನ ಜಾಗೃತಿಗೆ ಡಿಸಿ ಸೂಚನೆ
Team Udayavani, Sep 2, 2019, 3:00 PM IST
ವಿಜಯಪುರ: ನಗರದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಭೆ ಜರುಗಿತು.
ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಕುರಿತು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ 2019-20ನೇ ಸಾಲಿನ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಎಂಬ ಮಹತ್ವದ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆ ಆಯ್ಕೆಯಾಗಿದ್ದು ಮಹತ್ವದ ಈ ಯೋಜನೆ ಕುರಿತು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಅಗತ್ಯವಿದೆ. ಶಾಲೆಯಿಂದ ಹೊರಗುಳಿದ ಹೆಣ್ಣು ಮಗು ಹಾಗೂ ಅವರ ಕೌಟುಂಬಿಕ ಸ್ಥಿತಿಗಗಳ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ, ವಿವಿಧ ಯೋಜನೆಗಳಲ್ಲಿ ಕುಟುಂಬದ ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಕೆಲಸ ಮಾಡಬೇಕಿದೆ ಎಂದರು.
ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಜಿಲ್ಲೆಯಲ್ಲಿ 4.75 ಲಕ್ಷ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದು, ಇದರಲ್ಲಿ ಶಾಲೆಯಿಂದ ಹೊರಗುಳಿದ ಹೆಣ್ಣು ಮಗುವಿನ ಬಗ್ಗೆ ನಿರಂತರ ಪರಿಶೀಲನೆ ನಡೆಸಬೇಕು. 1-10ನೇ ತರಗತಿವರೆಗೆ ಮಗು ಶಾಲೆಯಲ್ಲಿ ಓದುತ್ತಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ-ನ್ಯಾಯಾಧೀಶ ರವೀಂದ್ರ ಕಾರಭಾರಿ ಮಾತನಾಡಿ, ಜೆಜೆ ಆ್ಯಕ್ಟ್ ಪೋಕ್ಸೊ ಕಾಯ್ದೆ ಕುರಿತು ಸೂಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರೊಂದಿಗೆ ಸಮನ್ವಯತೆ ಸಾಧಿಸಿ ಜಾಗೃತಿ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ, ತಾಲೂಕು, ಗ್ರಾಮ, ವಾರ್ಡ್ ಮಟ್ಟದಲ್ಲಿ ವಿಶೇಷ ಕಾರ್ಯಪಡೆ ಸಮಿತಿ ಸಭೆ, ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ, ಗ್ರಾಪಂಮಟ್ಟದ ಚುನಾಯಿತ ಪ್ರತಿನಿಧಿಗಳಿಗೆ, ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರ, ರಾಷ್ಟ್ರೀಯ-ಅಂತಾರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಹಮ್ಮಿಕೊಳ್ಳುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಸಿ.ಬಿ. ಕುಂಬಾರ ಮಾಹಿತಿ ನೀಡಿದರು.
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ ಮತ್ತಿತರ ಸೌಲಭ್ಯ ಕಲ್ಪಿಸುವ ಜೊತೆಗೆ ಸಂತ್ರಸ್ತರಿಂದ ಸಲ್ಲಿಕೆಯಾದ ಅರ್ಜಿಗೆ ತಕ್ಷಣ ಸ್ಪಂದಿಸಿ 24 ಗಂಟೆಯಲ್ಲಿ 25 ಸಾವಿರ ರೂ. ಪರಿಹಾರ ಧನ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
ದೌರ್ಜನ್ಯಕ್ಕೊಳಗಾದ 18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಸಂಬಂಧಪಟ್ಟಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಚಾರ್ಜ್‌ಶಿಟ್ ಮಾಹಿತಿ, ತನಿಖಾ ಹಂತದ ಮಾಹಿತಿಯನ್ನು ವಾರದಲ್ಲಿ ಸಲ್ಲಿಸಬೇಕು. 18 ವರ್ಷ ಮೇಲ್ಪಟ್ಟ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ವಿವರಿಸಬೇಕು. ವಿಲೇವಾರಿಯಾಗದ ವಿವಿಧ ಹಂತದಲ್ಲಿರುವ ಪ್ರಕರಣಗಳ ಕುರಿತು ಮಾಹಿತಿ ನೀಡುವಂತೆ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನೈಸರ್ಗಿಕ ನ್ಯಾಯಕ್ಕಾಗಿ ಬಾಲ್ಯ ವಿವಾಹ ತಡೆಯುವ ಕಾರ್ಯ ನಿರ್ವಹಣೆ ಕುರಿತು ಜಿಲ್ಲಾ ಸಮನ್ವಯ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಾಲ್ಯ ವಿವಾಹ ಕಂಡುಬಂದಲ್ಲಿ ಸಮಿತಿಗೆ ದೂರು ನೀಡಿದರೆ, ತಪ್ಪಿತಸ್ಥರ ವಿರುದ್ಧ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಪಂ ಸಿಇಒ ವಿಕಾಸ ಸುರಳಕರ ತಿಳಿಸಿದರು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ-ದಮನಿತ ಮಹಿಳೆಯರ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ನಿವೇಶನ ಮಂಜೂರಾತಿ ಕುರಿತು ನಿವೇಶನ ಸಹಿತ, ನಿವೇಶನ ರಹಿತರ ಕುರಿತು ಮಾಹಿತಿ ಸಂಗ್ರಹಿಸಬೇಕು. ಪ್ರತಿ ತಾಪಂ ಇಒಗಳ ವ್ಯಾಪ್ತಿಯಲ್ಲಿ ನಿವೇಶನ ಲಭ್ಯತೆ ಅಧರಿಸಿ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಡಾ| ಔದ್ರಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಹೇಂದ್ರ ಕಾಪ್ಸೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶರಣಪ್ಪ ಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸಿ.ಬಿ. ಕುಂಬಾರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋದ್ದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಸನ್ನ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಿರ್ಮಲಾ ಸುರಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.