ಕೋಟಿ ರೂ. ವೆಚ್ಚದಲ್ಲಿ ಅಮಾನಿ ಕೆರೆ ಅಭಿವೃದ್ಧಿ


Team Udayavani, Sep 2, 2019, 3:32 PM IST

hasan-tdy-1

ಚನ್ನರಾಯಪಟ್ಟಣ ಅಮಾನಿಕೆರೆಗೆ ಶಾಸಕ ಬಾಲಕೃಷ್ಣ, ಬಾಗಿನ ಅರ್ಪಿಸಿದರು.

ಚನ್ನರಾಯಪಟ್ಟಣ: ಪಟ್ಟಣದ ಅಮಾನಿ ಕೆರೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಹೊರವಲಯದಲ್ಲಿರುವ ಅಮಾನಿಕೆರೆ ಭೂಮಿ ಕ್ಷೇಮಾಭಿವೃದ್ಧಿ ಸಂಘದಿಂದ ಬಾಗಿನ ಅರ್ಪಿಸಿ ಮಾತ ನಾಡಿದ ಅವರು, ಪಟ್ಟಣದ ಚರಂಡಿ ನೀರು ಕೆರೆಗೆ ಹೋಗದಂತೆ ತಡೆಯ ಲಾಗಿದೆ. ಸಾರ್ವಜನಿಕರ ಉಪಯೋಗ ಕ್ಕಾಗಿ 2 ಸೋಪಾನಕಟ್ಟೆ ನಿರ್ಮಾಣ ಮಾಡಲಾಗುವುದು. ಕೆರೆ ಸ್ವಚ್ಛತೆ ಅಗತ್ಯ ಇರುವ ಎಲ್ಲಾ ಕಾಮಗಾರಿ ಮಾಡಿಸ ಲಾಗುವುದು ಎಂದರು.

ಕೆರೆ ಒತ್ತುವರಿ ತೆರವು: ಯಾವುದೇ ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೇ ತೆರವು ಗೊಳಿಸಲಾಗುವುದು. ಕೆರೆ ಉಳಿದರೆ ಮಾತ್ರ ನೀರಿನ ಸಮಸ್ಯೆ ಹೋಗಲಾಡಿ ಸಲು ಸಾಧ್ಯವಾಗುತ್ತದೆ. ಜೀವಜಲದ ಸಂಗ್ರಹ ತಾಣವಾಗಿರುವ ಕೆರೆಗಳ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಸ್ಥಳೀಯರ ಸಹ ಕಾರ ಬಹುಮುಖ್ಯ ಎಂದರು.

90 ಕೆರೆಗಳಿಗೆ ಹೇಮಾವತಿ ನೀರು: ಹೇಮಾವತಿ ನಾಲೆ ಮೂಲಕ ಕೆರೆ ತುಂಬಿ ಸುವ ಯೋಜನೆಯಡಿ ತಾಲೂಕಿನ 90 ಕೆರೆಗಳಿಗೆ ನೀರು ಹರಿಸಲಾಗಿದೆ. ನಾಲೆ ನೀರನ್ನು ಉಪಯೋಗಿಸಿ ಕೊಂಡು ಜೋಳ ಹಾಗೂ ರಾಗಿ ಬೆಳೆ ಮಾಡಲು ರೈತರು ಮುಂದಾಗಬೇಕು. ನವಿಲೆ, ಬಾಗೂರು ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ಹರಿ ಸಲಾಗುತ್ತಿದೆ. 2 ದಿನದಲ್ಲಿ ಬಾಗೂರು ಕೆರೆ ಕೋಡಿ ಬೀಳಲಿದೆ. ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಇನ್ನೊಂದು ತಿಂಗಳಲ್ಲಿ ಕಾರ್ಯರಂಭ ಮಾಡಲಿದೆ ಎಂದು ತಿಳಿಸಿದರು.

ಕುರುವಂಕ ಹಾಗೂ ಗೊಲ್ಲರಹೊಸಹಳ್ಳಿ ಗ್ರಾಮದ ಕೆರೆಗೂ ಹೇಮಾವತಿ ಎಡದಂಡೆ ನಾಲೆಯಿಂದ ನೀರು ಹರಿಸಿದ್ದು, ಆ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಸಂತೆಶಿವರ ಹಾಗೂ ಅಗ್ರಹಾರ ಬೆಳಗುಲಿ ಗ್ರಾಮದ ಕೆರೆಗಳು ಇದೇ ಮೊದಲ ಬಾರಿಗೆ ತುಂಬಿವೆ ಎಂದರು.

ನೀರಿನ ವಿಷಯದಲ್ಲಿ ರಾಜಕೀಯ ಬೇಡ: ಕತ್ತರಿಘಟ್ಟ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ್‌ ಗುರೂಜಿ ಮಾತನಾಡಿ, ರೈತರು ಹಾಗೂ ನೀರಾವರಿ ವಿಷಯವಾಗಿ ರಾಜಕೀಯ ಮಾಡದೇ ಉತ್ತಮ ಆಡಳಿತ ನಡೆಸುವ ಶಾಸಕರು ನಮ್ಮಲ್ಲಿದ್ದಾರೆ. ತಾಲೂಕಿನ ಗ್ರಾಮೀಣ ಭಾಗದ ಕರೆಗಳು ತುಂಬಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದರು.

ತಹಶೀಲ್ದಾರ್‌ ಜೆ.ಬಿ.ಮಾರುತಿ, ಪುರಸಭೆ ಸಿಒ ಕುಮಾರ್‌, ಪುರಸಭಾ ಸದಸ್ಯ ಗಣೇಶ್‌, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ.ಮಹೇಶ್‌, ಭೂಮಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಕುಮಾರ್‌, ಕಾರ್ಯದರ್ಶಿ ನಾಗರಾಜ್‌ ಹಾಜರಿದ್ದರು.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.