ಮಳಿಗೆಗೆ ಕನ್ನ ಕೊರೆದು ಚಿನ್ನಾಭರಣ ಕಳವು
Team Udayavani, Sep 4, 2019, 4:42 AM IST
ಮಂಗಳೂರು: ಚಿನ್ನಾಭರಣ ಮಳಿಗೆಗೆ ಕನ್ನ ಕೊರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಸೆಂಟ್ರಲ್ ಮಾರುಕಟ್ಟೆ ಬಳಿಯ ಭವಂತಿ ಸ್ಟ್ರೀಟ್‌ನಲ್ಲಿ ನಡೆದಿದೆ. ಅರುಣ್ ಜ್ಯುವೆಲ್ಲರ್ ಕಳವು ನಡೆದಿರುವ ಚಿನ್ನಾಭರಣ ಮಳಿಗೆಯಾಗಿದೆ. ರವಿವಾರ ತಡರಾತ್ರಿಯಿಂದ ಮಂಗಳವಾರ ಬೆಳಗ್ಗೆಯ ನಡುವಿನ ಸಮಯದಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಮಳಿಗೆಯ ಮಾಲಕ ಅನಿಲ್ ಶೇಟ್ ಅವರು ರವಿವಾರ ಮಧ್ಯಾಹ್ನದ ಬಳಿಕ ಬಂದ್ ಮಾಡಿ ತೆರಳಿದ್ದು ಸೋಮವಾರ ರಜೆಯ ಹಿನ್ನೆಲೆಯಲ್ಲಿ ಮಳಿಗೆ ತೆರೆದಿರಲಿಲ್ಲ. ಮಂಗಳವಾರ ಬೆಳಗ್ಗೆ ಮಳಿಗೆಯ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ.ಸುಮಾರು 3 ಕಿಲೋ ಚಿನ್ನಾಭರಣಗಳು ಕಳವು ಆಗಿರಬಹುದು ಎಂದು ಅಂದಾಜಿಸಲಾಗಿದ್ದು ಪೊಲೀಸರಿಂದ ತನಿಖೆ ಮುಂದುವರಿದಿದೆ.
ಮಳಿಗೆಯ ಹಿಂಬದಿಯಲ್ಲಿ ಗೋಡೆಗೆ ಸುಮಾರು ಎರಡು ಅಡಿ ಸುತ್ತಳತೆಯಲ್ಲಿ ಕನ್ನ ಕೊರೆದು ಕಳ್ಳರು ಒಳನುಗ್ಗಿದ್ದಾರೆ . ಬಳಿಕ ಮಳಿಗೆಯ ಒಳಗೆ ಇರುವ ಸೇಫ್‌ಲಾಕರ್‌ನ್ನು ಗ್ಯಾಸ್ ಕಟ್ಟರ್ ಬಳಸಿ ತುಂಡುಮಾಡಿದ್ದು ಅದರ ಒಳಗಿಟ್ಟಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ.
ಮಳಿಗೆಯ ಹಿಂದುಗಡೆ ಇರುವ ಕಂಪೌಂಡ್‌ನ ಮೇಲೆ ಏರಿರುವ ಕಳ್ಳರು ಹಿಂಬದಿಗೆ ಬಂದು ಕೃತ್ಯವೆಸಗಲಾಗಿದೆ. ಮಂಗಳವಾರ ಬೆಳಗ್ಗೆ ಸಿಬಂದಿ ಮಳಿಗೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಕಳವು ಕೃತ್ಯಕ್ಕೆ ಬಳಸಿದ ಗ್ಯಾಸ್ ಸಿಲಿಂಡರ್, ಪೈಪ್ ಹಾಗೂ ಸಾಧನಗಳನ್ನು ಸ್ಥಳದಲ್ಲೇ ಕಳ್ಳರು ಪರಾರಿಯಾಗಿದ್ದಾರೆ. ಬೆರಳಚ್ಚು ತಜ್ಞರು ಆಗಮಿಸಿ ಫಿಂಗರ್ ಪ್ರಿಂಟ್ಸ್ ಪಡೆದುಕೊಂಡಿದ್ದಾರೆ. ಮಳಿಗೆಯಲ್ಲಿನ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.