ಸಿರಿಧ್ಯಾನ ಸೇವನೆಯಿಂದ ಉತ್ತಮ ಆರೋಗ್ಯ

Team Udayavani, Sep 4, 2019, 11:12 AM IST

br-tdy-2

ದೇವನಹಳ್ಳಿ: ಆರೋಗ್ಯಕ್ಕೆ ಪೂರಕವಾದ ಸಿರಿಧಾನ್ಯಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಶಾಸಕ ಎಲ್.ಎನ್‌. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ನಗರದ ಬಜಾರ್‌ ರಸ್ತೆಯಲ್ಲಿ ಸಿರಿಧಾನ್ಯ ಉತ್ಪನ್ನಗಳ ಮಾರಾಟ ಶಾಖೆ ಉದ್ಘಾಟಿಸಿ ಮಾತನಾಡಿದರು.

ಸಿರಿ ಧಾನ್ಯಗಳಾದ ಸಾವೆ, ಸಜ್ಜೆ, ನವಣೆ, ಜೋಳ, ರಾಗಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದರು. ಇವುಗಳನ್ನು ಸೇವಿಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಆರೋಗ್ಯವಂತರಾಗಿರುತ್ತಿದ್ದರು. ಈಗ ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಫಾಸ್ಟ್‌ ಫುಡ್‌, ಜಂಕ್‌ ಫುಡ್‌ ಬಳಕೆ ಪ್ರಸ್ತುತ ಗ್ರಾಮೀಣ ಪ್ರದೇಶಕ್ಕೂ ವಿಸ್ತಾರವಾಗಿರುವರಿಂದ ಹಳ್ಳಿಗರ ಆರೋಗ್ಯವೂ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮನೆಗಳಲ್ಲಿ ಸಿದ್ಧ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಮಕ್ಕಳ ಜೊತೆಗೆ ಕುಟುಂಬದ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಲಕ್ಷಾಂತರ ರೂ. ಆಸ್ಪತ್ರೆಗೆ ಖರ್ಚು ಮಾಡಬೇಕಿದೆ. ಹೀಗಾಗಿ ಆರೋಗ್ಯದಾಯಕ ಸಿರಿಧಾನ್ಯಗಳನ್ನು ಹೆಚ್ಚು ಬಳಸಬೇಕು. ಆಹಾರ ಪದಾರ್ಥಗಳಲ್ಲಿ ರುಚಿ ಹೆಚ್ಚಿಸುವ ರಾಸಾಯನಿಕ ಪದಾರ್ಥಗಳ ಅಂಶ ಹೆಚ್ಚಿದೆ. ಇದು ಆರೋಗ್ಯದ ಮೇಲೆ ದುಷ್ಪರಿಣಮಾ ಬೀರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ವಸಹಾಯ ಸಂಘ ರಚಿಸಿ, ಲಕ್ಷಾಂತರ ಮಹಿಳೆಯರಿಗೆ ನೆರವಾಗುವುದರ ಜೊತೆಗೆ ಸಿರಿಧಾನ್ಯಗಳ ಘಟಕ ಸ್ಥಾಪಿಸಿರುವುದು ಉತ್ತಮ ಕಾರ್ಯ ಎಂದು ಹೇಳಿದರು.

ಜಿಲ್ಲಾ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ವಸಂತ ಸಾಲಿಯಾನ ಮಾತನಾಡಿ, ರಾಜ್ಯದಲ್ಲಿ 1400 ಸಿರಿಧಾನ್ಯ ಮಳಿಗೆ ಪ್ರಾರಂಭಿಸಲಾಗಿದೆ. ಅದೇ ರೀತಿ ಜಿಲ್ಲೆಯಲ್ಲೂ 5 ಮಳಿಗೆ ತೆರೆಯುವ ಯೋಜನೆ ಇದೆ. ಇದು 2ನೇ ಮಳಿಗೆಯಾಗಿದೆ. ಈಗಾಗಲೇ 17 ಮಳಿಗೆ ಸ್ಥಾಪನೆಗೆ ಜಾಗ ಗುರ್ತಿಸಲಾಗಿದೆ. ಧರ್ಮಸ್ಥಳ ಗ್ರಾಮೀಣ ಸಂಸ್ಥೆಯ 2 ಸಾವಿರ ಸ್ವಸಹಾಯ ಗುಂಪುಗಳ ಸಹಯೋಗದಲ್ಲಿ ಬೆಳ್ತಂಗಡಿ ಹಾಗೂ ಧಾರವಾಡದ ಘಟಕದಲ್ಲಿ ತಯಾರಾದ ಉತ್ಪನ್ನಗಳನ್ನು ಗ್ರಾಹಕರಿಗೆ ನೇರವಾಗಿ ತಲುಪಿಸಲು ಈ ಮಳಿಗೆ ತೆರೆಯಲಾಗುತ್ತಿದೆ ಎಂದು ಹೇಳಿದರು.

ಪುರಸಭೆ ಸದಸ್ಯ ಜಿ.ಎ.ರವೀಂದ್ರ, ಕೋಡಿ ಮಂಚೇನಹಳ್ಳಿ ಎಸ್‌. ನಾಗೇಶ್‌, ತಾಲೂಕು ಸೊಸೈಟಿ ನಿರ್ದೇಶಕ ಡೇರಿ ನಾಗೇಶ್‌ ಬಾಬು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ಅಕ್ಷತಾ ರೈ, ಪದಾಧಿಕಾರಿಗಳಾದ ವಿಶ್ವನಾಥ್‌, ಯೋಗೇಶ್‌, ಪ್ರವೀಣ್‌, ಲಕ್ಷ್ಮೀ ನಾರಾಯಣ್‌ ಇದ್ದರು.

ಟಾಪ್ ನ್ಯೂಸ್

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.