ಮತದಾರರ ಪಟ್ಟಿ ಪರಿಶೀಲನೆಗೆ ಡೀಸಿ ಚಾಲನೆ
Team Udayavani, Sep 4, 2019, 11:16 AM IST
ಚಾಮರಾಜನಗರ: ಭಾರತ ಚುನಾವಣೆ ಆಯೋಗದ ನಿರ್ದೇಶನದಂತೆ ಈ ತಿಂಗಳ ಪೂರ್ತಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಮತದಾರರ ಪಟ್ಟಿಯ ಪರಿಶೀಲನೆ (ಇವಿಪಿ) ದೃಢೀಕರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದ ಜಿಲ್ಲಾಧಿಕಾರಿ ಕಾವೇರಿ, ಈ ಸಂದರ್ಭದಲ್ಲಿ ಮಾತನಾಡಿ, 2020ರ ಜನವರಿ 1ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ, ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸೆ.1 ರಿಂದ ಸೆ. 30 ರವರೆಗೆ ಮತಪಟ್ಟಿಯ ಪರಿಶೀಲನೆ (ಇವಿಪಿ) ದೃಢೀಕರಣ ಕಾರ್ಯ ನಡೆಸಲಾಗುತ್ತಿದೆ ಎಂದರು.
ಸೆ.30 ರವರೆಗಿನ ಅವಧಿಯಲ್ಲಿ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕರಣ ಮಾಡಿಕೊಳ್ಳಲು ಸುವರ್ಣಾವಕಾಶ ದೊರೆತಿದೆ. ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ನೂತನ ಹೆಸರು ಸೇರ್ಪಡೆಗೆ ಬೇಕಾದ ದಾಖಲಾತಿಗಳು: ಮತದಾರರ ಹೆಸರು ಸೇರ್ಪಡೆಗಾಗಿ ನಮೂನೆ 6ರ ಅರ್ಜಿ ಜತೆ, ಹುಟ್ಟಿದ ದಿನಾಂಕ, ವಯಸ್ಸಿನ, ವಿಳಾಸ ದೃಢೀಕರಣ, ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋ ಹಾಜರುಪಡಿಸಬೇಕಾಗುತ್ತದೆ. ಸ್ಥಳ ಬದಲಾವಣೆ ಮತ್ತು ಮರಣ ಪ್ರಕರಣಗಳಿಗೆ ಸಂಬಂಧಿಸಿದಂತೆ, ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು, ತಂದೆಯ ಹೆಸರು, ಲಿಂಗ, ಹುಟ್ಟಿದ ದಿನಾಂಕ, ವಿಳಾಸ, ಫೋಟೋ ತಿದ್ದುಪಡಿಗಾಗಿ ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಒಂದು ಮತಗಟ್ಟೆಯಿಂದ ಮತ್ತೂಂದು ಮತಗಟ್ಟೆಗೆ ಬದಲಾವಣೆ ಮಾಡಲು ನಮೂನೆ-8ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರು ಮಾಹಿತಿ ನೀಡಿದರು.
ಒಂದು ಮೂಲ ದಾಖಲೆಯಿದ್ದರೆ ದೃಢೀಕರಣ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ, ತಿದ್ದುಪಡಿ, ಪರಿಶೀಲನೆ ಮತ್ತು ದೃಢೀಕ ರಣ ಗಳಿಗೆ ಸಂಬಂಧಿಸಿದಂತೆ ಭಾರತೀಯ ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸರ್ಕಾರಿ, ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪುಸ್ತಕ, ರೈತರ ಗುರುತಿನ ಚೀಟಿ ಈ ದಾಖಲೆಗಳಲ್ಲಿ ಯಾವು ದಾದರೂ ಒಂದು ದಾಖಲೆಯೊಂದಿಗೆ ನಾಗರಿಕರು ಹತ್ತಿರದಲ್ಲಿರುವ ಸಾಮಾನ್ಯ ಸೇವಾ ಕೇಂದ್ರ (ಹೋಬಳಿ ಮಟ್ಟದಲ್ಲಿರುವ ನಾಡಕಚೇರಿ ಗಳು), ಮತದಾರರ ನೋಂದಣಾಧಿಕಾರಿ ಕಚೇರಿಯ ಮತದಾರರ ಪೂರಕ ಕೇಂದ್ರ (ಉಪ ವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್ Ã ಕಚೇರಿ) ಅಟಲ್ಜೀ ಜನಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯಿತಿ) ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ, ಮತದಾರರ ಪಟ್ಟಿಯನ್ನು ±ರಿಶೀಲಿಸಿ ದೃಢೀಕರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವೆಬ್‌ಸೈಟ್‌ನಲ್ಲೂ ದೃಢೀಕರಿಸಿಕೊಳ್ಳಬಹುದು: ಮತದಾರರ ಸಹಾಯವಾಣಿ, ಮೊಬೈಲ್ ಆ್ಯಪ್, ಹೊಸ ಎನ್‌ವಿಎಸ್‌ಪಿ ಪೋರ್ಟಲ್ www.nvsp.in, 1950 -ಮತದಾರರ ಸಹಾಯವಾಣಿ, ವೆಬ್‌ಸೈಟ್ ಮೂಲಕ ಮತದಾರರ ಪಟ್ಟಿಯನ್ನು ಪರಿಶೀಲಿಸಿ ದೃಢೀಕರಿಸಿಕೊಳ್ಳಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದರು.
ಭಾರತ ಚುನಾವಣೆ ಆಯೋಗ ಯಾವುದೇ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಈ ವಿಶೇಷ ಕಾರ್ಯ ಕ್ರಮವನ್ನು ಹಮ್ಮಿಕೊಂಡಿದೆ. ಜಿಲ್ಲೆಯ ಶೇ. 100ರಷ್ಟು ಮತದಾರರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿ, ದೃಢೀಕರಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ನೀಡಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸೆಪ್ಟೆಂಬರ್ 30ರವರೆಗೆ ಅವಕಾಶ: ಸೆ.30ರವರೆಗೆ ನಡೆಯಲಿರುವ ಮತದಾರರ ಪಟ್ಟಿ ಪರಿಶೀಲನೆ ಕಾರ್ಯಕ್ರಮ ಸದುಪಯೋಗಪಡಿಸಿಕೊಂಡು, ಶೇ.100 ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಸಹಕರಿಸುವ ಮೂಲಕ ಭಾರತ ಚುನಾವಣಾ ಆಯೋಗದ ಮಹತ್ವಾಕಾಂಕ್ಷೆಯ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕಾವೇರಿ ಅವರು ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಶಿರಸ್ತೆದಾರ್ ಶಂಕರರಾವ್, ಮತ್ತಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.