ಪ್ರವಾಹ ಪರಿಹಾರಕ್ಕೆ 27 ಕೋಟಿ ಬಿಡುಗಡೆ


Team Udayavani, Sep 4, 2019, 11:58 AM IST

mysuru-tdy-2

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ದಿಂದ ಹಾನಿಗೊಳಗಾಗಿರುವ ರಸ್ತೆ ಹಾಗೂ ಸೇತುವೆಗಳ ಕಾಮಗಾರಿಗಳಿಗೆ ಒಟ್ಟು 82 ಕೋಟಿ ರೂ. ಬೇಕಾಗಿದೆ. ಈಗಾ ಗಲೇ 27 ಕೋಟಿ ರೂ.ಅನುದಾನ ಬಿಡುಗಡೆ ಮಾಡ ಲಾಗಿ ದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.

ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳವಾರ ಪ್ರವಾಹ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಪ್ರವಾಹದಿಂದ ದುರಸ್ತಿಗೆ ಒಳಗಾಗಿವೆ. ನಂಜನಗೂಡು ಮಾರ್ಗದಲ್ಲಿ ಹೆಚ್ಚಿನ ಸಮಸ್ಯೆಯಾಗಿದ್ದು, ರಸ್ತೆಯನ್ನು ಎತ್ತರಿಸಬೇಕಾಗಿದೆ ಹಾಗೂ ತಿ.ನರಸೀಪುರ ಮಾರ್ಗದಲ್ಲಿ ಕಾಮಗಾರಿ ಮಾಡಬೇಕಾಗಿರುವುದರಿಂದ ಸುಮಾರು 8 ಕೋಟಿ ರೂ. ಬೇಕಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್‌ ಮಾಹಿತಿ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 7 ರಸ್ತೆಗಳು ದುರಸ್ತ್ತಿಯಾಗಿದ್ದು, ಕಾಮಗಾರಿಗಳಿಗೆ 3.80 ಕೋಟಿ ರೂ., ತಿ.ನರಸೀಪುರ ಕ್ಷೇತ್ರದಲ್ಲಿ ರಸ್ತೆಗಳ ಕಾಮಗಾರಿಗೆ 1.52 ಕೋಟಿ ರೂ., ವರುಣಾ ಕ್ಷೇತ್ರಕ್ಕೆ 6.48 ಕೋಟಿ ರೂ. ಬೇಕಾ ಗುತ್ತದೆ ಎಂದು ಮೈಸೂರು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಸಭೆಗೆ ಮಾಹಿತಿ ನೀ

ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ರಾಜ್ಯದಲ್ಲಿ ಒಟ್ಟು ರಸ್ತೆ, ಸೇತುವೆ ಹಾಗೂ ಸಾರ್ವಜನಿಕ ಕಟ್ಟಡಗಳ ಕಾಮಗಾರಿಗಳಿಗೆ 8 ಸಾವಿರ ಕೋಟಿ ರೂ.ಬೇಕಾಗಿದ್ದು, ತುರ್ತು ಕಾಮಗಾರಿಗಾಗಿ 500 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯ ಸರ್ಕಾರ ಶಾಲಾ ಮಕ್ಕಳ ಕೌಶಲ್ಯ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಕೌಶಲ್ಯ ತರಬೇತಿ ನೀಡಬೇಕು ಹಾಗೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆಹಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಪ್ರದೇಶಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುವುದರಿಂದ ಮತ್ತಷ್ಟು ಹಾಸ್ಟೆಲ್ಗಳನ್ನು ಪ್ರಾರಂಭಿಸಬೇಕು.ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನಗಳನ್ನು ಪಡೆದುಕೊಂಡು ಮಾಹಿತಿ ನೀಡಿದರೆ ವಿದ್ಯಾರ್ಥಿನಿಲಯ ಕಾಮಗಾರಿಗೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ಎಷ್ಟು ಭವನಗಳು ಕಾಮಗಾರಿ ಪ್ರಗತಿಯಲ್ಲಿವೆ ಎಂಬುದನ್ನು ಪಟ್ಟಿ ಮಾಡಿ,ಅದಕ್ಕೆ ಬೇಕಾಗಿರುವ ಅನುದಾನದ ವಿವರವನ್ನು ಮುಂದಿನ ಸಭೆಯಲ್ಲಿ ಮಾಹಿತಿ ನೀಡಿದರೆ ಭವನಗಳ ಕಾಮಗಾರಿ ಪೂರ್ಣಗೊಳಿಸಲು ಅನುದಾನ ನೀಡುವುದಾಗಿ ತಿಳಿಸಿದರು.

ನಗರ ಹಾಗೂ ಗ್ರಾಮಾಂತರ ಪ್ರದೇಶದ ಕೆಲವು ಭಾಗದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆಯಿದ್ದು, ಜಿಲ್ಲಾಡಳಿತದಿಂದ ಕೂಡಲೇ ಖರಾಬ್‌ ಭೂಮಿಯನ್ನು ಸ್ಮಶಾನಕ್ಕೆ ಮಂಜೂರು ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಇಲಾಖೆಗಳು ಸ್ಥಳಾಂತರವಾಗಬೇಕು ಎಂದರು.

ಅಂಬೇಡ್ಕರ್‌ ನಿಗಮದ ವತಿಯಿಂದ 5 ಐರಾವತ ಟ್ಯಾಕ್ಸಿಗಳನ್ನು ಫ‌ಲಾನುಭವಿಗಳಿಗೆ ವಿತರಣೆ ಮಾಡಿದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.