ಅಭಿವೃದ್ಧಿಗೆ ಶಾಸಕ ಎ.ಮಂಜು ನಿರ್ಲಕ್ಷ್ಯ: ಕೃಷ್ಣಮೂರ್ತಿ

ಸೆ.4 ರಂದು ಬೆಂಗಳೂರಿನಲ್ಲಿ 510 ನೇ ಜಯಂತಿ ಆಚರಣೆ, ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆ ಬಿಡುಗಡೆ

Team Udayavani, Sep 4, 2019, 12:03 PM IST

rn-tdy-1

ನಾಡಪ್ರಭು ಕೆಂಪೇಗೌಡ ಪ್ರತಿಮೆ ಬಳಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಕೆಂಪೇಗೌಡ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಮಾಗಡಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಎ.ಮಂಜುಗೆ 40 ಸಾವಿರ ಮತ ಮತ ಹಾಕಿಸಿ ಗೆಲ್ಲಿಸಿದ್ದೇನೆ. ಆದರೆ ಅವರು ನಮ್ಮನ್ನು ನಿರ್ಲಕ್ಷಿಸಿದ್ದಾರೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಕೆಂಪೇಗೌಡ ಪ್ರಾಧಿಕಾರದ ನಿರ್ದೆಶಕ ಎಚ್.ಎಂ.ಕೃಷ್ಣಮೂರ್ತಿ ಆರೋಪಿಸಿದರು.

ಪಟ್ಟಣದ ನಾಡಪ್ರಭು ಕೆಂಪೇಗೌಡ ಪ್ರತಿಮೆ ಬಳಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನನ್ನ ಪರವಾದ 40 ಸಾರ ಮತವನ್ನು ಶಾಸಕ ಎ. ಮಂಜುಗೆ ಹಾಕಿಸಿ ಗೆಲ್ಲಿಸಲು ಸಹಕರಿಸಿದ್ದೇನೆ. ಜೊತೆಗೆ ಪುರಸಭಾ ಚುನಾವಣೆ ವೇಳೆ ಅನಾರೋಗ್ಯದಿಂದ ನಾನು ಬಳಲುತ್ತಿದ್ದರೂ, ಶಾಸಕ ಎ.ಮಂಜು ಪರ ಚುನಾವಣೆ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೇನೆ ಎಂದರು.

ತಾಲೂಕಿನ ಅಭಿವೃದ್ಧಿ ಬಗ್ಗೆ ನಿಲಕ್ಷ್ಯ: ಸರ್ಕಾರ ಮತ್ತು ಬಿಬಿಎಂಪಿ ಕೋಟ್ಯಾಂತರ ರೂ. ಹಣ ಬಿಡು ಗಡೆ ಮಾಡಿದರೂ, ಆ ಹಣವನ್ನು ತಂದು ಅಭಿವೃದ್ದಿ ಪಡಿಸುವ ಚಿಂತನೆ ಮಾಡಿಲ್ಲ. ನಾನು ಪ್ರತಿವರ್ಷ ಆಯೋಜಿಸುವ ಕೆಂಪೇಗೌಡ ಜಯಂತಿ, ಉಚಿತ ಆರೋಗ್ಯ ಶಿಬಿರ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಶಾಸಕ ಎ.ಮಂಜು ಅವರು ಭಾಗಿಯಾಗದೆ ತಾಲೂಕಿನ ಅಭಿವೃದ್ದಿ ಬಗ್ಗೆ ನಿರ್ಲಕ್ಷಿಸಿದ್ದಾರೆ ಎಂದರು.

ಕೆಂಪೇಗೌಡ ಕೋಟೆ ಅನಾಥ: ನಾಡಪ್ರಭು ಕೆಂಪೇ ಗೌಡ ಕಟ್ಟಿದ ಕೋಟೆ ಅಭಿವೃದ್ಧಿ ಕಾಣದೆ ಅನಾಥ ವಾಗಿದೆ. ಕೆಂಪಾಪುರ ಗ್ರಾಮದ ಕೆಂಪೇಗೌಡ ಸಮಾಧಿ ಅಭಿವೃದ್ಧಿಯಾಗಿಲ್ಲ. ಕನಿಷ್ಠ ಪಕ್ಷ ಗ್ರಾಮದ ಹಿರಿಯರನ್ನು ಗುರುತಿಸಿ ಅವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಿಲ್ಲ. ಕೆಂಪೇಗೌಡರು ನಿರ್ಮಿಸಿರುವ ನೂರಾರು ಕೆರೆ, ಕಟ್ಟೆ, ಕಲ್ಯಾಣಿಗಳನ್ನು ದುರಸ್ಥಿಪಡಿಸಿ ಜೀಣ್ರೋದ್ಧಾರ ಮಾಡಲು ಮುಂದಾಗಲಿಲ್ಲ.ಕೆಂಪಾಪುರದ ಗ್ರಾಮ ಜನರನ್ನು ಒಪ್ಪಿಸಿ ಭೂಸ್ವಾಧೀನಪಡಿಸಿಕೊಂಡು ಗ್ರಾಮವನ್ನು ಅಭಿವೃದ್ದಿಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಸರ್ಕಾರವನ್ನು ಒತಾ್ತುಸಿದರು.

ಕೆಂಪೇಗೌಡ ಸಮಾಧಿ ಸ್ಥಳದಿಂದ ಜ್ಯೋತಿ: ಬುಧವಾರದಂದು ಬೆಂಗಳೂರಿನ ರಾಜಕುಮಾರ್‌ ಗಾಜಿನ ಮನೆಯಲ್ಲಿ ನಡೆಯುವ 510ನೇ ಕೆಂಪೇ ಗೌಡ ಜಯಂತೋತ್ಸವಕ್ಕೆ ತಾಲೂಕಿನ ಕೆಂಪಾಪುರದ ಕೆಂಪೇಗೌಡ ಸಮಾಧಿ ಸ್ಥಳದಿಂದ ಭವ್ಯ ಮರವಣಿಗೆ ಯಲ್ಲಿ ಜ್ಯೋತಿ ಕೊಂಡೊಯ್ಯುವುದು. ಎಂದು ತಿಳಿಸಿದರು.

ಬೆಂಗಳೂರಿನ ಲಾಲ್ಬಾಗ್‌ನ ರಾಜಕುಮಾರ್‌ ಗಾಜಿನ ಮನೆಯಲ್ಲಿ ನಡೆಯಲಿರುವ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾಗವಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ, ಸೇರಿದಂತೆ ಅನೇಕ ಸಚಿವರು, ಶಾಸಕರು, ಬಿಬಿಎಂಪಿ ಮೇಯರ್‌ ಸೇರಿದಂತೆ ಜಿಲ್ಲಾಧಿಕಾರಿ, ಚಿಂತಕರು, ಸಂಶೋಧಕರು, ಸಾತಿಗಳು ಭಾಗವಹಿಸ ಲಿದ್ದು, ತಾಲೂಕಿನ ಜನತೆಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಿ ಕಾರ್ಯಕ್ರಮ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.