ಕರಾವಳಿಯ ಮೂವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
Team Udayavani, Sep 5, 2019, 5:20 AM IST
ಪುಂಜಾಲಕಟ್ಟೆ/ ಸುಳ್ಯ/ ಕಾರ್ಕಳ: ಬಂಟ್ವಾಳ ತಾಲೂಕು ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಶೇಖ್ ಆದಂ ಸಾಹೇಬ್ ನೆಲ್ಯಾಡಿ, ಸುಳ್ಯ ತಾಲೂಕು ಆಲೆಟ್ಟಿ (ನಾರ್ಕೋಡು) ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ ಡಿ. ರಂಗನಾಥ್ ಮತ್ತು ಕಾರ್ಕಳ ತಾಲೂಕು ಬಜಗೋಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಕೆರ್ವಾಶೆ ಅವರು ಈ ಸಾಲಿನ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಶಿಕ್ಷಕರ ಸಂಕ್ಷಿಪ್ತ ಪರಿಚಯ ಇಲ್ಲಿದೆ.
ಶೇಖ್ ಆದಂ ಸಾಹೇಬ್
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ವಗ್ಗ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಇಂಗ್ಲಿಷ್ ಭಾಷಾ ಶಿಕ್ಷಕ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಅವರು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮಕ್ಕಳು ಮತ್ತು ತಾನು ಸೇವೆ ಸಲ್ಲಿಸಿದ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ.
21 ವರ್ಷಗಳಿಂದ ಮುಖ್ಯ ಶಿಕ್ಷಕ ಹುದ್ದೆ ಸಹಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ.
ಇಂಗ್ಲಿಷ್ ಭಾಷಾ ಸ್ನಾತಕೋತ್ತರ ಪದವೀಧರರಾದ ಅವರು 1998ರಲ್ಲಿ ಗುರುಕಂಬಳ ಎ.ಕೆ.ಯು. ಹೆಣ್ಣುಮಕ್ಕಳ ಪಿಯು ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಶಿಕ್ಷಣ ವೃತ್ತಿ ಆರಂಭಿಸಿ 2004ರಿಂದ ವಗ್ಗ ಸ. ಪ್ರೌ. ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ 2012ರಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪ್ರತಿಭಾ ಪುರಸ್ಕಾರ, ವಲಯ ಮಟ್ಟದ ಪ್ರತಿಭಾ ಕಾರಂಜಿ, ಗೇಮ್ಸ್, ಶಾಲಾ ಬೆಳ್ಳಿ ಹಬ್ಬ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ತಾ| ಮಟ್ಟದ ಸ್ಕೌಟ್ಸ್ ಗೈಡ್ಸ್ ರ್ಯಾಲಿ, ಆರೋಗ್ಯ ಶಿಬಿರ ಮೊದಲಾದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ದಾನಿಗಳ ಸಹಕಾರದಿಂದ ಶೌಚಾಲಯ, ಇಂಟರ್‌ಲಾಕ್, ಸಿಸಿ ಕೆಮರಾ, ಶುದ್ಧೀಕರಿಸಿದ ಕುಡಿಯುವ ನೀರು, ಗೇಟ್, ಕಂಪ್ಯೂಟರ್, ಆವರಣ ಗೋಡೆ, ಸುಣ್ಣ ಬಣ್ಣ, ಬೋರ್‌ವೆಲ್, ಸೋಲಾರ್ ವ್ಯವಸ್ಥೆಯ ಸ್ಮಾರ್ಟ್ ಕ್ಲಾಸ್, ಸೌಂಡ್ ಸಿಸ್ಟಮ್, ಸಭಾಭವನ ವಿಸ್ತರಣೆ, ಬಾಲಕಿಯರ ಶೌಚಾಲಯಕ್ಕೆ ನ್ಯಾಪ್‌ಕಿನ್ ಬರ್ನರ್ ಅಳವಡಿಕೆ, ಶಾಲಾವನ, ಉತ್ತಮ ವಾಚನಾಲಯ, ಮಗು ಸ್ನೇಹಿ ವಾತಾವರಣದಿಂದ ವಗ್ಗ ಸರಕಾರಿ ಪ್ರೌಢಶಾಲೆಯ ಶಾಲೆಯ ಸಮಗ್ರ ಅಭಿವೃದ್ಧಿ ಸಾಧಿಸಿದ್ದಾರೆ.
ಉಮೇಶ್ ಕೆರ್ವಾಶೆ
ಕಾರ್ಕಳ: ಬಜಗೋಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಕೆರ್ವಾಶೆ ಕಳೆದ 28 ವರ್ಷಗಳಿಂದ ಆ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾರ್ಕಳ ತಾಲೂಕಿನ ಕೆರ್ವಾಶೆಯ ವರಾಗಿರುವ ಅವರು ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಉಮೇಶ್ ಅವರ ಶ್ರದ್ಧೆ, ಸರಳತೆ, ಕಾರ್ಯಶೈಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಶಾಲೆಗೆ ಗೈರಾಗುವ ವಿದ್ಯಾರ್ಥಿಗಳ ಮನವೊಲಿಸಿ
ಶಾಲೆಗೆ ಹಾಜರಾಗುವಂತೆ ಮಾಡಿರು ತ್ತಾರೆ. ಮಲ್ಲಿಕಾ ವಿಕಾಸ ಶೆಟ್ಟಿ ಅವರನ್ನು ಅಂತಾರಾಷ್ಟ್ರೀಯ ವಾಲಿಬಾಲ್ ಪಟು ಆಗಿ ರೂಪಿಸುವಲ್ಲಿ ಇವರ ಶ್ರಮವೂ ಇದೆ.
ಸಾರ್ವಜನಿಕರಿಗೆ ಯೋಗ ತರಬೇತಿ, ಮಕ್ಕಳಿಗೆ ನಾಯಕತ್ವ ಶಿಬಿರ ನಡೆಸಿರುತ್ತಾರೆ. ಶಾಲಾ ಕಬಡ್ಡಿ ತಂಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದ ಅವರು 2002-03ರಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಸೇವಾದಳ ಜಿಲ್ಲಾ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಯಿಂದ ಪುರಸ್ಕೃತರಾಗಿರುತ್ತಾರೆ.
ಸುವರ್ಣ ಮಹೋತ್ಸವ ಮತ್ತು ವಜ್ರಮಹೋತ್ಸವದ ಸಂದರ್ಭದಲ್ಲಿ ಹಳೆವಿದ್ಯಾರ್ಥಿಗಳಿಂದ ದೇಣಿಗೆ, ಕ್ರೀಡಾ ಸಾಮಗ್ರಿ, ಲ್ಯಾಪ್‌ಟಾಪ್ ಸಂಗ್ರಹಿಸಿರುತ್ತಾರೆ.
ಒಳಾಂಗಣ ಕ್ರೀಡಾಂಗಣ ನಿರ್ಮಾಣದಲ್ಲೂ ಉಮೇಶ್ ಕೆರ್ವಾಶೆ ಸಹಕರಿಸಿದ್ದಾರೆ.
ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಪರಿಶ್ರಮಕ್ಕೆ ದೊರೆತ ಫಲ ಇದಾಗಿದ್ದು, ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಸಂತೋಷವಿದೆ ಎಂದು ಉಮೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ಪದ್ಮಾ ಡಿ. ರಂಗನಾಥ್
ಸುಳ್ಯ: ಆಲೆಟ್ಟಿ (ನಾರ್ಕೋಡು) ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ ಡಿ. ರಂಗನಾಥ್ ಅವರು ಅಂಬೆಟಡ್ಕ ನಿವಾಸಿ. ಕಳೆದ 36 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಾಗಪಟ್ಟಣ, ಪಡ³ನಂಗಡಿ, ಮಂಡೆಕೋಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಆಲೆಟ್ಟಿ (ನಾರ್ಕೋಡು) ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯಾಗಿದ್ದಾರೆ.
ಶಿಕ್ಷಕಿಯಾಗಿ ಶಾಲಾ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕೊಡುಗೆ ನೀಡಿರುವ ಅವರಿಗೆ ಈಗಾಗಲೇ ತಾಲೂಕು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗಳು ಲಭಿಸಿವೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೊಡ ಮಾಡುವ ರಾಜ್ಯ ವಿಶೇಷ ಶಿಕ್ಷಕ ಪ್ರಶಸ್ತಿಯು ಲಭಿಸಿದೆ.
ಇವರ ಪತಿ ನಾಗಪಟ್ಟಣ ಕೆಎಸ್‌ಡಿಸಿ ಮ್ಯಾನೇಜರ್ ಆಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.