ರಂಗದ ಮೇಲೆ ನಾಯಕಿ
ಮತ್ತೊಂದು ಕ್ರೈಂ ಥ್ರಿಲ್ಲರ್ ಹಿಂದೆ ಬಂದ ದಯಾಳ್
Team Udayavani, Sep 7, 2019, 3:03 AM IST
ನಿರ್ದೇಶಕ ದಯಾಳ್ ಪದ್ಮನಾಭನ್ ಮತ್ತೊಂದು ಕ್ರೈಂ-ಥ್ರಿಲ್ಲರ್ ಕಹಾನಿಯನ್ನು ಪ್ರೇಕ್ಷಕರ ಮುಂದೆ ತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೌದು, ಕೆಲ ತಿಂಗಳ ಹಿಂದಷ್ಟೇ “ರಂಗನಾಯಕಿ’ ಚಿತ್ರವನ್ನು ಶುರು ಮಾಡಿದ್ದ ದಯಾಳ್, ಈಗ ಸದ್ದಿಲ್ಲದೆ ಆ ಚಿತ್ರದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ, ಇತ್ತೀಚೆಗೆ ಟ್ರೇಲರ್ ಮೂಲಕ ಅದನ್ನು ಹೊರತಂದಿದ್ದಾರೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಹಿರಿಯ ನಟಿ ತಾರಾ ಅನುರಾಧ, ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ಅರ್ಚನಾ ಜೋಯಿಸ್, ನಟ ಒರಟ ಪ್ರಶಾಂತ್, ನಿರ್ಮಾಪಕ ಭಾ.ಮಾ ಹರೀಶ್ ಮುಂತಾದವರು ಅತಿಥಿಗಳಾಗಿ ಆಗಮಿಸಿ “ರಂಗನಾಯಕಿ’ಯ ಮೊದಲ ಟ್ರೇಲರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. “ರಂಗನಾಯಕಿ’ ಚಿತ್ರದಲ್ಲಿ ನಟಿ ಅದಿತಿ ಪ್ರಭುದೇವ, ಶ್ರೀನಿ, ತ್ರಿವಿಕ್ರಮ್, ಸುಂದರ್, ಚಂದ್ರಚೂಡ್ ಮೊದಲಾದವರು ಅಭಿನಯಿಸಿದ್ದಾರೆ.
ಚಿತ್ರದ ಹಾಡುಗಳಿಗೆ ಕದ್ರಿ ಮಣಿಕಾಂತ್ ಸಂಗೀತ ಸಂಯೋಜಿಸಿದ್ದು, ಮಾಮೂಲಿ ಹಾಡುಗಳಿಗಿಂತ ಭಿನ್ನವಾಗಿರುವ “ಕೃಷ್ಣ ನೀ ಬೇಗನೇ ಬಾರೋ…’, “ಸೀತಾ ಕಲ್ಯಾಣ ವೈಭವ’ ಮೊದಲಾದ ಸಾಹಿತ್ಯದ ಸಾಲುಗಳನ್ನು ಬಳಸಿಕೊಳ್ಳಲಾಗಿದೆ. ನಾರಾಯಣ್ ನಿರ್ಮಾಣದ “ರಂಗನಾಯಕಿ’ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣವಿದ್ದು, ಅವಿನಾಶ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಸದ್ಯಕ್ಕೆ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮುಂದಿನ ತಿಂಗಳು “ರಂಗನಾಯಕಿ’ಯನ್ನು ಥಿಯೇಟರ್‌ಗೆ ತರುವ ಯೋಚನೆಯಲ್ಲಿದೆ. ಸದ್ಯ ಬಿಡುಗಡೆಯಾಗಿರುವ “ರಂಗನಾಯಕಿ’ಯ ಟ್ರೇಲರ್ ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ಚಿತ್ರ ತೆರೆಮೇಲೆ ಎಷ್ಟು ಪರಿಣಾಮಕಾರಿಯಾಗಿ ಬಂದಿದೆ ಅನ್ನೋದು ಬಿಡುಗಡೆಯಾದ ಮೇಲಷ್ಟೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.