ಹುಲಿ ದಾಳಿಗೆ ರಾಸು ಬಲಿ: ಕಾರ್ಯಾಚರಣೆ
Team Udayavani, Sep 7, 2019, 3:00 AM IST
ಹುಣಸೂರು: ನಾಗರಹೊಳೆ ಉದ್ಯಾನದಂಚಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರಿದಿದ್ದು, ಮತ್ತೊಂದು ಜಾನುವಾರು ಬಲಿಯಾಗಿದೆ. ತಾಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹೆಬ್ಬನಕುಪ್ಪೆಯ ತರಗನ್ ಎಸ್ಟೇಟ್‌ನಲ್ಲಿ ಎಸ್ಟೇಟ್ ಮಾಲೀಕರಿಗೆ ಸೇರಿದ ಜಾನುವಾರು ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು-ತಿಂದು ಹಾಕಿದೆ.
ಘಟನೆ ವಿವರ: ಜಾನುವಾರುಗಳನ್ನು ಎಸ್ಟೇಟ್‌ನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಒಂದು ಜಾನುವಾರು ಹೊರತು ಪಡಿಸಿ, ಉಳಿದೆಲ್ಲ ಜಾನುವಾರುಗಳು ಗುರುವಾರ ಸಂಜೆ ವಾಪಸ್ಸಾಗಿದ್ದವು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಆರ್‌ಎಫ್‌ಒ ಹನುಮಂತರಾಯ ಹಾಗೂ ಸಿಬ್ಬಂದಿ ಎಸ್ಟೇಟ್‌ನಲ್ಲಿ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಿದ ವೇಳೆ ಹುಲಿ ದಾಳಿ ನಡೆಸಿದ್ದು, ಜಾನುವಾರ ಸಾವಿಗೀಡಾಗಿರುವುದು ಪತ್ತೆಯಾಗಿದೆ.
ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ: ಇದೀಗ ಸ್ಥಳದಲ್ಲಿ ನಾಲ್ಕು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ, ಹುಲಿಯೋ, ಹುಲಿ ಮರಿಯೋ ಎಂಬುದನ್ನು ತಿಳಿದು ಸೆರೆ ಹಿಡಿಯಲು ಬೋನ್ ಇಡಲಾಗುವುದು ಎಂದು ಅರಣ್ಯಾಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ವರ್ಷದಿಂದ ಹುಲಿ ಉಪಟಳ: ಕಳೆದ ಒಂದು ವರ್ಷದಿಂದೀಚೆಗೆ ಆಡು-ಕುರಿ ಸೇರಿದಂತೆ 15ಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ತೆಗೆದುಕೊಂಡಿದೆ. ಈ ಭಾಗದಲ್ಲಿ ಜನರು ಓಡಾಡಲು ಹೆದರುತ್ತಿದ್ದು, ಹುಲಿ ಸೆರೆ ಹಿಡಿದು ಆತಂಕವನ್ನು ದೂರಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.