ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬರಸಿಡಿಲು

ಇಂಗು ಗುಂಡಿಗೆ ಸ್ನಾನಕ್ಕೆ ಇಳಿದು ಶಾಲಾ ಬಾಲಕನ ಸಾವು

Team Udayavani, Sep 7, 2019, 5:00 AM IST

v-9

ಕಾಣಿಯೂರು: ಕಾಣಿಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್‌ (15) ಶವ ಕಾಲೇಜಿನ ಪಕ್ಕದ ಇಂಗು ಗುಂಡಿಯಲ್ಲಿ ಗುರವಾರ ರಾತ್ರಿ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿದ್ದು, ವಿದ್ಯಾರ್ಥಿ ಸ್ನಾನಕ್ಕೆ ಇಳಿದು ಮುಳುಗಿ ಮೃತಪಟ್ಟಿರುವುದು ದೃಢಪಟ್ಟಿದೆ.

ಚಾರ್ವಾಕ ಗ್ರಾಮದ ಬೊಮ್ಮೊಳಿಕೆ ನಿವಾಸಿ ಲಕ್ಷ್ಮಣ ಗೌಡರ ಪುತ್ರ ಗೌತಮ್‌ ಹಾಗೂ ಆತನ ಇಬ್ಬರು ಸ್ನೇಹಿತರು ಸ್ನಾನಕ್ಕೆ ಇಳಿದಾಗ ಇಬ್ಬರು ನೀರಲ್ಲಿ ಮುಳುಗಿದ್ದಾರೆ. ಈ ವೇಳೆ ಈಜು ಬರುತ್ತಿದ್ದ ಬಾಲಕನೋರ್ವ ಒಬ್ಬ ಹುಡುಗನನ್ನು ರಕ್ಷಣೆ ಮಾಡಿದ್ದು, ಗೌತಮ್‌ನ ಪ್ರಾಣವುಳಿಸಲು ಸಾಧ್ಯವಾಗಿಲ್ಲ ಎನ್ನುವ ವಿಚಾರ ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.

ಶಾಲೆಯಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನ ಸಮಾರಂಭದ ಮಧ್ಯೆ ಈ ವಿದ್ಯಾರ್ಥಿಗಳು ನೀರು ತುಂಬಿದ್ದ ಇಂಗು ಗುಂಡಿಯಲ್ಲಿ ಈಜಾಡಲು ಹೋಗಿದ್ದರು. ಈ ವೇಳೆ ಮುಳುಗಿದ ಗೌತಮ್‌ನ ರಕ್ಷಣೆ ಸಾಧ್ಯವಾಗದೆ ವಾಪಸಾದ ಇಬ್ಬರು ವಿದ್ಯಾರ್ಥಿಗಳು ಮೌನ ವಹಿಸಿದ್ದರು ಎನ್ನುವುದು ಗೊತ್ತಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸುಳ್ಯ ಸಿಪಿಐ ಸತೀಶ್‌ ಕುಮಾರ್‌, ಬೆಳ್ಳಾರೆ ಠಾಣೆ ಎಸ್‌ಐ ಈರಯ್ಯ ಹಾಗೂ ಬಿಇಒ ವಿಷ್ಣು ಪ್ರಸಾದ್‌ ಪರಿಶೀಲನೆ ನಡೆಸಿ, ಇಂಗು ಗುಂಡಿಯ ಬಳಿ ತೆರಳುವ ದಾರಿಯನ್ನು ತತ್‌ಕ್ಷಣ ಮುಚ್ಚಬೇಕು. ಕಾಲೇಜಿನ ಆವರಣಕ್ಕೆ ತಡೆಗೋಡೆ ನಿರ್ಮಿಸಬೇಕು. ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ್‌, ತಾ.ಪಂ. ಉಪಾಧ್ಯಕ್ಷೆ ಲಲಿತಾ ಈಶ್ವರ್‌, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಮಾಧವಿ ಕೋಡಂದೂರು ಉಪಸ್ಥಿತರಿದ್ದರು. ಗುರುವಾರ ರಾತ್ರಿ ಪತ್ತೆಯಾದ ಗೌತಮ್‌ನ ಪಾರ್ಥಿವ ಶರೀರವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ, ಕಾಣಿಯೂರು ಸರಕಾರಿ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬೊಮ್ಮೊಳಿಕೆ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಹೇಳಿಕೊಳ್ಳುವ ಆದಾಯವಿಲ್ಲ
ಗೌತಮ್‌ ಕುಟುಂಬ ಬಡತನದಲ್ಲಿದೆ. ಹೇಳಿಕೊಳ್ಳುವ ಆದಾಯವಿಲ್ಲ. ಲಕ್ಷ್ಮಣ ಗೌಡರಿಗೆ ಇಬ್ಬರು ಮಕ್ಕಳು. ದೀಕ್ಷಿತ್‌ ಹಾಗೂ ಗೌತಮ್‌. ಲಕ್ಷ್ಮಣ ಗೌಡರಿಗೆ ಎರಡು ವರ್ಷಗಳ ಹಿಂದೆ ಬೆನ್ನುಹುರಿಯ ಶಸ್ತ್ರಚಿಕಿತ್ಸೆ ನಡೆದಿದ್ದು, ಲಕ್ಷಾಂತರ ರೂ. ಸಾಲದಲ್ಲಿದ್ದಾರೆ. ದುಡಿಯುವಷ್ಟು ಚೈತನ್ಯವಿಲ್ಲ. ಇವರ ಚಿಕಿತ್ಸೆಗೆ ಗ್ರಾ.ಪಂ. ಸದಸ್ಯ ಗಣೇಶ್‌ ಉದನಡ್ಕ ಧನ ಸಹಾಯ ಮಾಡಿದ್ದರು. ಪತ್ನಿ ಹೈನುಗಾರಿಕೆ ಹಾಗೂ ಬೀಡಿ ಕಟ್ಟುತ್ತ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ದೀಕ್ಷಿತ್‌ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದು, ಈ ಇಬ್ಬರೂ ಅಡಿಕೆ ಸುಲಿಯುವ ವೃತ್ತಿ ಮಾಡುತ್ತ ತಮ್ಮ ವಿದ್ಯಾಭ್ಯಾಸದ ಖರ್ಚಿಗೆ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು. ಯಾರ ತಂಟೆಗೂ ಹೋಗದೆ ಎಲ್ಲರ ಮೆಚ್ಚುಗೆ ಗಳಿಸಿದ್ದ.

ಗೌತಮ್‌ನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.