ನಿಲ್ಲುತ್ತಿಲ್ಲ ಯುದ್ಧೋನ್ಮಾದ

Team Udayavani, Sep 7, 2019, 5:32 AM IST

v-31

ಶ್ರೀನಗರದ ನಿರ್ಜನ ರಸ್ತೆಯೊಂದರಲ್ಲಿ ಶುಕ್ರವಾರ ಗಸ್ತು ತಿರುಗಿದ ಕಾಶ್ಮೀರ ಪೊಲೀಸರು

ನವದೆಹಲಿ/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ಭಾರತವನ್ನು ಪ್ರಚೋದಿಸುವ ಕೆಲಸವನ್ನು ಪಾಕ್‌ ಮುಂದುವರಿಸಿದೆ. ಭಾರತದ ಜತೆ ಯುದ್ಧದ ಪ್ರಶ್ನೆಯೇ ಇಲ್ಲ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿಕೆ ನೀಡಿದ ಬೆನ್ನಲ್ಲೇ, ಅಲ್ಲಿನ ಸೇನಾ ಮುಖ್ಯಸ್ಥರು ಮತ್ತೆ ಯುದ್ಧದ ಮಾತುಗಳನ್ನಾಡಿದ್ದಾರೆ.

ಶುಕ್ರವಾರ ಇಸ್ಲಾಮಾಬಾದ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸೇನಾ ಮುಖ್ಯಸ್ಥ ಖಮರ್‌ ಬಾಜ್ವಾ, ‘ಕಾಶ್ಮೀರವು ನಮಗೆ ಇನ್ನೂ ಪೂರ್ಣಗೊಳ್ಳದಂಥ ಅಜೆಂಡಾವಾಗಿದೆ’ ಎಂದಿದ್ದಾರೆ. ಅಷ್ಟೇ ಅಲ್ಲ, ಯುದ್ಧದ ಕಾರ್ಮೋಡ ಆವರಿಸಿದೆ ಎಂದೂ ಹೇಳುವ ಮೂಲಕ ಭಾರತವನ್ನು ಪ್ರಚೋದಿಸುವ ಕೆಲಸಕ್ಕೆ ಕೈಹಾಕಿದ್ದಾರೆ.

‘ಕಾಶ್ಮೀರಿಗರನ್ನು ನಾವು ಕೈಬಿಡುವುದಿಲ್ಲ ಎಂದು ನಾನು ಹೇಳಲಿಚ್ಛಿಸುತ್ತೇನೆ. ಪಾಕಿಸ್ತಾನೀಯರು ಮತ್ತು ಕಾಶ್ಮೀರಿಗರ ಹೃದಯ ಒಟ್ಟಿಗೇ ಬಡಿಯುತ್ತದೆ. ಕಾಶ್ಮೀರದ ಜನರಿಗಾಗಿ ಯಾವುದೇ ರೀತಿಯ ತ್ಯಾಗಕ್ಕೂ ಪಾಕ್‌ ಸೇನೆ ಸಿದ್ಧವಿದೆ. ಅಲ್ಲಿ ಸಂಭಾವ್ಯ ಸಂಘರ್ಷದ ಸುಳಿವು ಸಿಗುತ್ತಿದೆ. ಯುದ್ಧದ ಕಾರ್ಮೋಡ ಆವರಿಸುತ್ತಿದೆ’ ಎಂದು ಬಾಜ್ವಾ ಹೇಳಿದ್ದಾರೆ.

ಕಂಠಾಭಿದಮನಿ ಇದ್ದಂತೆ: ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ‘ಕಾಶ್ಮೀರವು ಪಾಕಿಸ್ತಾನದ ಜೀವನಾಡಿ ಇದ್ದಂತೆ. ಅದಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವುದು, ಪಾಕಿಸ್ತಾನದ ಭದ್ರತೆ ಮತ್ತು ಸಮಗ್ರತೆಗೆ ಸವಾಲೆಸೆದಂತೆ’ ಎಂದು ಹೇಳಿದ್ದಾರೆ. ಅಲ್ಲದೆ, ಭಾರತದ ಅಣ್ವಸ್ತ್ರಗಳ ಸುರಕ್ಷತೆ ಮತ್ತು ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುವಂತೆ ನಾವು ಅಂತಾರಾಷ್ಟ್ರೀಯ ಸಮುದಾಯವನ್ನು ಕೇಳಿಕೊಂಡಿದ್ದೇನೆ. ಒಂದು ವೇಳೆ ಈ ಕುರಿತು ನಿರ್ಲಕ್ಷ್ಯ ವಹಿಸಿದರೆ, ನಂತರ ಆಗುವ ಅನಾಹುತಗಳಿಗೆ ಜಾಗತಿಕ ಸಮುದಾಯವೇ ಹೊಣೆಯಾಗುತ್ತದೆ ಎಂದೂ ಖಾನ್‌ ಎಚ್ಚರಿಸಿದ್ದಾರೆ.

ದೇಶದ್ರೋಹ ಕೇಸ್‌: ಇದೇ ವೇಳೆ, ಕಾಶ್ಮೀರ ಕುರಿತು ಟ್ವೀಟ್ ಮಾಡಿದ್ದ ಜಮ್ಮು -ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ನಾಯಕಿ ಶೆಹ್ಲಾ ರಶೀದ್‌ ವಿರುದ್ಧ ದೇಶದ್ರೋಹದ ಕೇಸು ದಾಖಲಾಗಿದೆ. ಕಣಿವೆ ರಾಜ್ಯದಲ್ಲಿ ಸಶಸ್ತ್ರ ಪಡೆಗಳು ಮನೆಗಳಿಗೆ ನುಗ್ಗಿ ದಾಂದಲೆ ನಡೆಸುತ್ತಿದ್ದು, ನಾಗರಿಕರಿಗೆ ಚಿತ್ರಹಿಂಸೆ ನೀಡುತ್ತಿದೆ ಎಂದು ಆರೋಪಿಸಿ ಶೆಹ್ಲಾ ಆ.17ರಂದು ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ನ ವಕೀಲ ಅಲಾಖ್‌ ಅಲೋಕ್‌ ಶ್ರೀವಾಸ್ತವ ಎಂಬವರು ಆಕೆಯ ವಿರುದ್ಧ ದೂರು ನೀಡಿದ್ದಾರೆ. ಸುಳ್ಳು ಟ್ವೀಟ್ ಮಾಡುವ ಮೂಲಕ ಸೇನೆಯ ವರ್ಚಸ್ಸಿಗೆ ಧಕ್ಕೆ ತರುವ ಮತ್ತು ದೇಶದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಕೆಲಸವನ್ನು ಶೆಹ್ಲಾ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದಾಳಿ ನಡೆದರೆ, ನಾವೇನೂ ಸುಮ್ಮನಿರಲ್ಲ: ನಾಯ್ಡು
‘ಪಾಕಿಸ್ತಾನವು ಗಂಭೀರ ಪ್ರಚೋದನೆ ನೀಡುತ್ತಿದ್ದರೂ ಭಾರತ ಸಹನೆ ಕಳೆದುಕೊಂಡಿಲ್ಲ. ಒಂದು ವೇಳೆ, ದಾಳಿ ನಡೆದಿದ್ದೇ ಆದಲ್ಲಿ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ನಾವು ಸನ್ನದ್ಧರಾಗಿದ್ದೇವೆ.’ ಹೀಗೆಂದು ಪಾಕಿಸ್ತಾನಕ್ಕೆ ಖಡಕ್‌ ಸಂದೇಶ ರವಾನಿಸಿರುವುದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು. ನವದೆಹಲಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಾಯ್ಡು, ‘ಭಾರತ ಯಾವತ್ತೂ ಶಾಂತಿ ಮತ್ತು ಸಹಕಾರದ ಮೌಲ್ಯವನ್ನು ಗೌರವಿಸುತ್ತಾ ಬಂದಿದೆ. ಇತಿಹಾಸವನ್ನು ನೋಡಿದರೆ ತಿಳಿಯುತ್ತದೆ, ಭಾರತ ಎಂದೂ ಯಾವ ದೇಶದ ಮೇಲೂ ಆಕ್ರಮಣ ನಡೆಸಿಲ್ಲ. ಅನೇಕರು ಭಾರತದ ಮೇಲೆ ಆಕ್ರಮಣ ಮಾಡಿದರು, ನಮ್ಮನ್ನು ಆಳಿದರು, ದೇಶವನ್ನು ಹಾಳು ಮಾಡಿದರು, ವಂಚಿಸಿದರು… ಆದರೆ ನಾವು ಸಹನೆ ಕಾಯ್ದುಕೊಂಡಿದ್ದೆವು. ಆದರೆ, ಈಗ ಕೆಲವರು ನಮ್ಮನ್ನು ಪ್ರಚೋದಿಸುತ್ತಿದ್ದಾರೆ. ನಮ್ಮನ್ನೇನಾದರೂ ಕೆಣಕಲು ಬಂದರೆ, ಅವರು ಜೀವಮಾನದಲ್ಲೇ ಮರೆಯಲಾಗದಂಥ ಪ್ರತ್ಯುತ್ತರವನ್ನು ನಾವು ನೀಡುತ್ತೇವೆ’ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.