ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸಹಜ ಸ್ಥಿತಿಗೆ
Team Udayavani, Sep 7, 2019, 11:48 AM IST
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟಿ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಬಂಡೆಯೊಂದು ರಸ್ತೆಯ ಬದಿಯಲ್ಲಿರುವುದು.
ಸಕಲೇಶಪುರ: ಶಿರಾಡಿಘಾಟಿಯಲ್ಲಿ ಭೂ ಕುಸಿತವಾಗಿದೆ ಎಂಬ ಸುಳ್ಳು ಸುದ್ದಿ ಹರಡಿದ್ದರಿಂದ ಕೆಲ ಸಮಯ ಸಾರ್ವಜನಿಕರಲ್ಲಿ ಗೊಂದಲ ಉಂಟಾದ ಘಟನೆ ಶುಕ್ರವಾರ ನಡೆಯಿತು.
ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಮಾರನಹಳ್ಳಿ ಸಮೀಪ ಕೆಲವು ಬಂಡೆಗಳು ರಸ್ತೆ ಪಕ್ಕದಲ್ಲಿ ಈ ಹಿಂದೆ ಬಿದ್ದಿದ್ದು ಇನ್ನೊಂದು ಬಂಡೆ 20 ಅಡಿ ಎತ್ತರದಿಂದ ಬೀಳುವ ಸಾಧ್ಯತೆಯಿದ್ದು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಡಿದ್ದರಿಂದ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದರು.
ಅಂತಿಮವಾಗಿ ಸ್ಥಳದಲ್ಲಿ ಯಾವುದೇ ಅಪಾಯ ಕಂಡು ಬಾರದಿದ್ದರಿಂದ ವಾಹನಗಳ ಸಂಚಾರ ರದ್ದುಗೊಳಿಸದೆ ಯಥಾ ಸ್ಥಿತಿಯಲ್ಲಿ ಮುಂದುವರಿಸಲಾಯಿತು.
ಕುಂಟುತ್ತಿರುವ ಚತುಷ್ಟಥ ರಸ್ತೆ ಕಾಮಗಾರಿ: ಹಾಸನದಿಂದ ಮಾರನಹಳ್ಳಿವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಾರಂಭವಾಗಿ ಸುಮಾರು 3 ವರ್ಷಗಳಾಗುತ್ತಿದ್ದರೂ ಕಾಮಗಾರಿ ಶೇ.30 ಮುಗಿದಿಲ್ಲ.ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಗುಂಡಿಮಯವಾದ ಈ ರಸ್ತೆಯಲ್ಲಿ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಲೇ ಅಪಾಯಕಾರಿ ರಸ್ತೆಯಲ್ಲಿ ಸಂಚರಿಸುವುದು ಅನಿರ್ವಾಯ. ಚಾರ್ಮುಡಿ ಘಾಟಿ ಸಹ ಆಗಾಗ ಬಂದ್ ಆಗುವುದರಿಂದ ಅಲ್ಲಿ ಸಂಚರಿಸುವ ವಾಹನಗಳು ಈ ರಸ್ತೆಯನ್ನೇ ಆಶ್ರಯಿಸುವುದರಿಂದ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಮತ್ತಷ್ಟು ಹೆಚ್ಚಾಗಿ ತೊಂದರೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.