ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ ಕಾರ್ಯಾರಂಭ

Team Udayavani, Sep 7, 2019, 12:21 PM IST

rn-tdy-1

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವಿನ ವಾಹನ ಸಂಚಾರ ದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ (275)ನ್ನು 10 ಮಾರ್ಗಗಳಿಗೆ ವಿಸ್ತರಿಸುವ ಯೋಜನೆ ಯನ್ನು ಹಮ್ಮಿಕೊಂಡಿದೆ. ಬೆಂಗಳೂರಿನಿಂದ ಮದ್ದೂರಿನ ನಿಡಘಟ್ಟ ಗ್ರಾಮದವರೆಗೆ ಶೇ.10ರಷ್ಟು ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಟ್ಟಣೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರು ಮತ್ತು ಮೈಸೂರು ನಡುವಿನ ರಸ್ತೆಯನ್ನು ನಾಲ್ಕು ಪಥಗಳ ಹೆದ್ದಾರಿ ರಸ್ತೆಯನ್ನಾಗಿ ಪರಿವರ್ತಿಸಲಾಗಿತ್ತು. ಮಂಗಳೂರಿನ ಬಂಟ್ವಾಳದವರೆಗೂ, ರಸ್ತೆ ಅಭಿವೃದ್ಧಿಯಾಗಿ ವಾಹನ ದಟ್ಟಣೆ ಕೂಡ ಗಣನೀಯವಾಗಿ ಏರಿಕೆಯಾಯಿತು. 2014ರಲ್ಲಿ ಕೇಂದ್ರ ಸರ್ಕಾರ ಈ ರಸ್ತೆಯನ್ನು 8 ಪಥದ ರಸ್ತೆ ನಿರ್ಮಿಸಲು ಮುಂದಾಗಿ ನಂತರದ ದಿನಗಳಲ್ಲಿ 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಯಿತು. ಇದೀಗ ಬೆಂಗಳೂರು ನಗರದಿಂದ 18 ಕಿಮೀ ದೂರ ಇರುವ ನೈಸ್‌ ಜಂಕ್ಷನ್‌ ಬಳಿಯಿಂದ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ.

ಎಲ್ಲಿಂದ ಎಲ್ಲಿಯವರೆಗೆ ವಿಸ್ತರಣೆ: ಬೆಂಗಳೂರಿನ ಕೆಂಗೇರಿ ಹೊರ ವಲಯದ ನೈಸ್‌ ಜಂಕ್ಷನ್‌ ಬಳಿಯ ಪಂಚಮುಖೀ ದೇವಾಲಯದಿಂದ ಬೆಂಗಳೂರು ದಕ್ಷಿಣ ತಾಲೂಕು ಕುಂಬಳಗೂಡು, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದ ಮೂಲಕ ಮೈಸೂರು ಹೊರ ವಲಯದ ಕೊಲಂಬಿಯಾ ಏಷಿಯಾ ಆಸ್ಪತ್ರೆಯವರೆಗೆ 117.30 ಕಿ.ಮೀ ರಸ್ತೆಯನ್ನು 10 ಪಥಗಳ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ.

ರಸ್ತೆ ವಿಸ್ತರಣೆ ಕಾರ್ಯ ಎರಡು ಹಂತಗಳು ನಿಡಘಟ್ಟ ಪ್ಯಾಕೇಜ್‌ 1 ಮತ್ತು ಮೈಸೂರು ಪ್ಯಾಕೇಜ್‌ 2 ಹೆಸರಿನಲ್ಲಿ ಕಾಮಗಾರಿಗಳು ನಡೆಯಬೇಕಾಗಿದೆ. ನಿಡಘಟ್ಟ ಪ್ಯಾಕೇಜ್‌ 1ರಲ್ಲಿ ಕಾಮಗಾರಿ ಆರಂಭವಾಗಿದ್ದು, ಸುಮಾರು ಶೇ.10ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಪ್ಯಾಕೇಜ್‌ 2ರ ಕಾಮಗಾರಿ ಇನ್ನೊಂದು ತಿಂಗಳಲ್ಲಿ ಆರಂಭವಾಗಬೇಕಾಗಿದೆ.

49 ಅಂಡರ್‌ಪಾಸ್‌ 13 ಓವರ್‌ ಪಾಸ್‌ಗಳು: ರಾಷ್ಟ್ರೀಯ ಹೆದ್ದಾರಿ 475 ವಿಸ್ತರಣೆಯ ನಂತರ ವಾಹನ ಸಂಚಾರ ಸುಗಮವಾಗಿ ಸಾಗಲಿದೆ. ರಸ್ತೆಯ ಎರಡೂ ಕಡೆ ಬ್ಯಾರಿಕೇಡ್‌ಗಳು ಇರಲಿವೆ. ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ನಗರಗಳಿಗೆ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದ್ದು, ಹಾಗೂ ಹೆದ್ದಾರಿ ರಸ್ತೆಯಲ್ಲಿ ಬರುವ ಗ್ರಾಮ, ಪಟ್ಟಣ, ನಗರಗಳ ವ್ಯಾಪ್ತಿಯಲ್ಲಿ ಸರ್ವಿಸ್‌ ರಸ್ತೆ ಇರುತ್ತದೆ. ಅಲ್ಲದೇ ಪ್ರತಿ ಗ್ರಾಮಕ್ಕೂ ಅಂಡರ್‌ಪಾಸ್‌ ಅಥವಾ ಓವರ್‌ ಪಾಸ್‌ಗಳು ಇರುವುದರಿಂದ ಅಲ್ಲಿನ ನಾಗರಿಕರಿಗೆ ತೊಂದರೆ ಆಗುವುದಿಲ್ಲ. 49 ಅಂಡರ್‌ ಪಾಸ್‌ ಗಳು ಮತ್ತು 13 ಕಡೆ ಓವರ್‌ ಪಾಸ್‌ಗಳು ನಿರ್ಮಾಣವಾಗುವುದರಿಂದ ಹೆದ್ದಾರಿ ಹಾಗೂ ಗ್ರಾಮೀಣ ವಾಹನಗಳ ಸಂಚಾರಕ್ಕೆ ತೊಂದರೆ ಆಗುವುದಿಲ್ಲ. ಹೆದ್ದಾರಿ ರಸ್ತೆಯಲ್ಲಿ 69 (ಪ್ಯಾಕೇಜ್‌ 1ರಲ್ಲಿ 27, ಪ್ಯಾಕೇಜ್‌ 2ರಲ್ಲಿ 42) ಬಸ್‌ ಶೆಲ್ಟರ್‌ಗಳು ಹಾಗೂ 56ನೇ ಕಿಮಿ ಬಳಿ ಒಂದು ಕಡೆ ವಿಶ್ರಾಂತಿ ಪ್ರದೇಶ (ರೆಸ್ಟ್‌ ಏರಿಯಾ) ನಿರ್ಮಾಣವಾಗಲಿದೆ.

ಸೇತುವೆಗಳು ಎಷ್ಟು?: ಶ್ರೀರಂಗಪಟ್ಟಣದಲ್ಲಿ ಎಲಿವೇಟೆಡ್‌ ರಸ್ತೆಯನ್ನು ನಿರ್ಮಿಸುವ ಉದ್ದೇಶವಿದ್ದು, ಇದು ಸುಮಾರು 8 ಕಿಮೀ ಉದ್ದವಿರಲಿದೆ. ಬೆಂಗಳೂರು ಮತ್ತು ನಿಡಘಟ್ಟ ನಡುವೆ 4 ಪ್ರಮುಖ (ಮೇಜರ್‌) ಸೇತುವೆಗಳು ಮತ್ತು 11 ಸಣ್ಣ ಸೇತುವೆಗಳು (ಮೈನರ್‌) ಮತ್ತು ರೈಲು ರಸ್ತೆಯ ಮೇಲೆ 2 ಕಡೆ ಮೇಲ್ಸೆತುವೆಗಳು ನಿರ್ಮಾಣವಾಗಲಿದೆ.

ಪ್ಯಾಕೇಜ್‌ 2 ಮೈಸೂರು ಮತ್ತು ನಿಡಘಟ್ಟ ನಡುವೆ 5 ಪ್ರಮುಖ ಸೇತುವೆಗಳು (ಮದ್ದೂರು ಬಳಿಯ ಕೆರೆ, ಮಂಡ್ಯ ಬಳಿ ಕೆನಾಲ್, ಲೋಕಪಾವನಿ ನದಿ, ಉತ್ತರ ಕಾವೇರಿ ನದಿ ಮತ್ತು ದಕ್ಷಿಣ ಕಾವೇರಿ ನದಿ) ಮತ್ತು 11 ಕಿರಿಯ ಸೇತುವೆಗಳನ್ನು ನಿರ್ಮಿಸಬೇಕಾಗಿದೆ.

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.