ಉಡುಪಿ ಜಿಲ್ಲೆ: 3 ದಿನಗಳಲ್ಲಿ 1.75 ಲ.ರೂ. ದಂಡ ವಸೂಲಿ
ಸಂಚಾರ ನಿಯಮ ಉಲ್ಲಂಘನೆ- ಪರಿಷ್ಕೃತ ಕಾಯಿದೆ
Team Udayavani, Sep 8, 2019, 4:48 AM IST
ಉಡುಪಿ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಹೆಚ್ಚಳ ಆದೇಶ ಉಡುಪಿ ಜಿಲ್ಲೆಯಲ್ಲಿ ಸೆ.5ರಂದು ಜಾರಿಗೆ ಬಂದಿದ್ದು, ಇದುವರೆಗೆ 1,75,800 ರೂ. ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗಿದೆ.
ಶನಿವಾರ ಒಂದೇ ದಿನ 1,12,500 ರೂ. ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ 66 ಸೀಟ್ ಬೆಲ್ಟ್ ಹಾಕದಿರುವುದು, 72 ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಚಾಲನೆ ಪ್ರಕರಣಗಳು ಸೇರಿವೆ. ಇತರ ಕೆಲವು ಪ್ರಕರಣಗಳಿಗೆ ಕೋರ್ಟ್ ನೋಟೀಸು ನೀಡಲಾಗಿದೆ.
3 ದಿನಗಳಲ್ಲಿ ಒಟ್ಟು 300 ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲಿ ದಂಡ ವಸೂಲಿ ಮಾಡಿರುವ ಜತೆಗೆ ಕೆಲವು ಪ್ರಕರಣಗಳಿಗೆ ಕೋರ್ಟ್ ನೋಟಿಸ್ ನೀಡಲಾಗಿದೆ.
ವಿದ್ಯಾರ್ಥಿಗಳಿಗೂ ದಂಡ ಬಿಸಿ
ಶನಿವಾರ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಹತ್ತಕ್ಕೂ ಅಧಿಕ ತೆರೆದ ವಾಹನಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಮೆರವಣಿಗೆ ನಡೆಯಿತು. ಇದರಲ್ಲಿ ಇತರ ವಾಹನಗಳೂ ಪಾಲ್ಗೊಂಡಿದ್ದವು.
ಮೆರವಣಿಗೆಗೆ ಪೊಲೀಸರು ಭದ್ರತೆ ಒದಗಿಸಿದ್ದರು. ಆದರೆ ಮೆರವಣಿಗೆ ಸಂಜೆ ಎಂಜಿಎಂ ಕಾಲೇಜು ಬಳಿ ತೆರಳಿ ಅನಂತರ ಕೆಲವು ವಿದ್ಯಾರ್ಥಿಗಳು ಎಂಜಿಎಂ ಮೈದಾನ ಪ್ರವೇಶಿಸಲು ಯತ್ನಿಸಿದರು. ಇದನ್ನು ಪೊಲೀಸರು ತಡೆದರು. ಅನಂತರ ದಾಖಲೆ ಸಮರ್ಪಕ ಇಲ್ಲದಿರುವುದು ಸೇರಿದಂತೆ ವಿವಿಧ ಸಂಚಾರ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದರು.
ಮಂಗಳೂರಿನಲ್ಲಿ ನೂತನ ದಂಡ ವಸೂಲಿ ಆದೇಶ ಇನ್ನೂ ಜಾರಿಗೆ ಬಂದಿಲ್ಲ. ಸಾಫ್ಟ್‌ವೇರ್ ಅಪ್‌ಡೇಟ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ ಎಂದು ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಶುಕ್ರವಾರ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.