ಜನರು ಆತಂಕ ಪಡುವುದು ಬೇಡ: ಶಾಸಕ ಯಾದವಾಡ
Team Udayavani, Sep 8, 2019, 10:13 AM IST
ರಾಮದುರ್ಗ: ಉಜ್ಜಿನಕೊಪ್ಪ ಗ್ರಾಮದ ಹತ್ತಿರ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆ ದುರಸ್ತಿ ಕಾಮಗಾರಿಯನ್ನು ಶಾಸಕ ಮಹಾದೇವಪ್ಪ ಯಾದವಾಡ ವೀಕ್ಷಿಸಿದರು.
ರಾಮದುರ್ಗ: ಖಾನಾಪುರ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದಾ ನದಿ ಪಾತ್ರದ ಜನತೆ ಮತ್ತೋಮ್ಮೆ ಪ್ರವಾಹದ ಭೀತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಬಂದಿದ್ದು, ಜನತೆ ಆತಂಕ ಪಡುವುದು ಬೇಡ ಎಂದು ಶಾಸಕ ಮಹಾದೇವಪ್ಪ ಯಾದವಾಡ ಧೈರ್ಯ ಹೇಳಿದರು.
ಮಲಪ್ರಭಾ ನದಿಗೆ 18 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರು ಹರಿಬಿಟ್ಟ ಕಾರಣ ಮತ್ತೆ ಪ್ರವಾಹ ಪರಿಸ್ಥಿತಿ ಉದ್ಭವಗೊಂಡ ಹಿನ್ನೆಲೆಯಲ್ಲಿ ಹಲಗತ್ತಿ, ಸುನ್ನಾಳ, ಹಾಲೋಳ್ಳಿ ಹಾಗೂ ಹಳೆತೋರಗಲ್ಲ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿದರು. ನದಿ ಪಾತ್ರದಲ್ಲಿರುವ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ತಾತ್ಕಾಲಿಕ ಜೀವನ ನಡೆಸಲು ಬೇಕಾದ ಅವಶ್ಯಕ ಸೌಲಭ್ಯಗಳನ್ನು ಒದಗಿಸಲು ತಾಲೂಕಿನ ಅಧಿಕಾರಿಗಳಗೆ ಸೂಚನೆ ನೀಡಲಾಗಿದೆ. ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಖಾನಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.
ರವಿವಾರ ಸುಮಾರು 20 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿರುವ ಜನತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಮಾರುತಿ ತುಪ್ಪದ, ಬಿಜೆಪಿ ತಾಲೂಕಾಧ್ಯಕ್ಷ ಜಿ.ಜಿ. ಪಾಟೀಲ, ಮಹಾದೇವ ಚಿನ್ನಾಕಟ್ಟಿ, ಎಲ್.ಬಿ.ಕಿತ್ತೂರ ಸೇರಿದಂತೆ ಇದ್ದರು.
ಉಜ್ಜಿನಕೊಪ್ಪ ಗ್ರಾಮದ ಹತ್ತಿರದ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆಯ ದುರಸ್ತಿ ಕಾಮಗಾರಿಯನ್ನು ಶಾಸಕ ಮಹಾದೇವಪ್ಪ ಯಾದವಾಡ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಭೆೇಟಿ ನೀಡಿ ಪರಿಶೀಲಿಸಿದರು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.