ಅಮಾನಿಕೆರೆ ಅಭಿವೃದ್ಧಿ ಪರಿಶೀಲನೆ
Team Udayavani, Sep 8, 2019, 12:38 PM IST
ತುಮಕೂರು: ದಶಕದ ಹಿಂದೆ ಹೂಳು ತುಂಬಿ ಹಾಳಾಗಿದ್ದ ಅಮಾನಿಕೆರೆ ಅಭಿವೃದ್ಧಿ ಕಾಮಗಾರಿ ಸ್ಮಾರ್ಟ್ ಸಿಟಿ ಯೋಜನೆಯಡಿ ಭರದಿಂದ ಸಾಗಿದ್ದು, ಸ್ಮಾರ್ಟ್‌ಸಿಟಿ ತಾಂತ್ರಿಕ ಅಧಿಕಾರಿಗಳ ತಂಡ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ವಾರಾಂತ್ಯದ ಸಂಗೀತ ಕಾರಂಜಿ: ಕಾಮಗಾರಿ ವೀಕ್ಷಿಸಿ ಮಾತನಾಡಿದ ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ಅಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ತುಮಕೂರಿನ ಹೆಮ್ಮೆ ಎಂದೇ ಬಿಂಬಿತವಾಗಿರುವ ಅಮಾನಿಕೆರೆ ಅಭಿವೃದ್ಧಿಗೆ ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್ ಯೋಜನೆ ರೂಪಿಸಿದೆ. ಯೋಜನೆಯಡಿ ಬೋಟಿಂಗ್ ಅಭಿವೃದ್ಧಿ, ಸೈಕಲ್ ಟ್ರ್ಯಾಕ್, ಪುಟ್ಪಾತ್ ಮತ್ತು ಮೋನೋರೈಲ್, ಕಾರ್ ಪಾತ್‌ವೇ ಅಭಿವೃದ್ಧಿ, ವಾಕಿಂಗ್ ಪಾತ್, ವಾರಾಂತ್ಯದ ಸಂಗೀತ ಕಾರಂಜಿ, ಮಕ್ಕಳ ಆಟಿಕೆ ಜಾಗ, ಮಕ್ಕಳಿಗೆ ಉದ್ಯಾನವನ, ಯೋಗಕೇಂದ್ರ, ಉದ್ಯಾನವನಕ್ಕೆ ಬಂದ ಪ್ರವಾಸಿಗರು ದೂರದಲ್ಲೇ ನಿಂತು ಪಕ್ಷಿಗಳ ಕಲರವ ಕೇಳಲು, ಪಕ್ಷಿಗಳಿಗೆ ಉತ್ತಮ ವಾಸಸ್ಥಾನ ಕಲ್ಪಿಸುವುದು ಹಾಗೂ ಅವುಗಳ ಸಂತಾನಾಭಿವೃದ್ಧಿ ಮಾಡಲು ದ್ವೀಪಗಳ ಅಭಿವೃದ್ಧಿ ಸೇರಿ ಸುಂದರ ಉದ್ಯಾನವನವಾಗಿ ಮಾಡಲು ಉದ್ದೇಶಿಸಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹೇಮಾವತಿ ನೀರು ತುಂಬಿಸಲು ಅನುಕೂಲ: ತುಮಕೂರು ಅಮಾನಿಕೆರೆ ಸುಮಾರು 504 ಎಕೆರೆ ಪ್ರದೇಶದಲ್ಲಿರುವ ಅತಿದೊಡ್ಡ ಕೆರೆ. ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗಿದಲ್ಲಿ ಹೇಮಾವತಿ ನೀರು ತುಂಬಿಸಲು ಅನುಕೂಲವಾಗುತ್ತದೆ ಎಂದರು.
ಕೆರೆ ಸುತ್ತ ವಿವಿಧ ತರಹದ ಹೂಬಿಡುವ ಸಸಿ ನೆಡುವ ಕುರಿತು ತೋಟಗಾರಿಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆರೆ ಕಾಮಗಾರಿಯ ಪ್ರಗತಿ ಪರಿಶೀಲಿಸಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ನಂತರ ನಗರದ ಹೊರಪೇಟೆ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್‌ರೋಡ್ ಕಾಮಗಾರಿ ವೀಕ್ಷಿಸಿದರು. ಬೆಸ್ಕಾಂ ಮತ್ತು ಬಿಎಸ್‌ಎಲ್ಎಲ್ನ ಕೇಬಲ್ ಕಾಮಗಾರಿ ಬೇಗನೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಮಾರಿಯಮ್ಮ ನಗರದಲ್ಲಿ ನಡೆಯುತ್ತಿರುವ ಬಡ ನಗರವಾಸಿಗಳ ವಸತಿ ಸಮುಚ್ಛಯ ಕಾಮಗಾರಿ ಪರಿಶೀಲಿಸಿ ತಾಂತ್ರಿಕ ಅಧಿಕಾರಿಗಳಿಂದ ಕಾಮಗಾರಿ ಪೂರ್ಣ ಮಾಡುವುದರ ಬಗ್ಗೆ ಮಾಹಿತಿ ಪಡೆದರು. ಆ ನಂತರ ಟೌನ್‌ಹಾಲ್ ಬಳಿ ಇರುವ ಸಾರ್ವಜನಿಕ ಗ್ರಂಥಾಲಯ ಕಾಮಗಾರಿ ವೀಕ್ಷಿಸಿದರು.
ಇಂಟಿಗ್ರೇಟೆಡ್ ಕಮ್ಯಾಂಡ್ ಮ್ಯಾನೇಜ್‌ಮೆಂಟ್ ಕಂಟ್ರೋಲ್ (ಐಸಿಟಿಸಿ) ಗೆ ಭೇಟಿ ನೀಡಿ, ನಗರದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ಹಾಗೂ ಟ್ರಾಫಿಕ್ ಸಿಗ್ನಲ್ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದ ಅವರು ಕೆಲವು ಸಲಹೆ-ಸೂಚನೆ ನೀಡಿದರು.
ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ. ಭೂಬಾಲನ್, ತುಮಕೂರು ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್, ತುಮಕೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಯೋಗಾನಂದ, ತೋಟಗಾರಿಕೆ ಇಲಾಖೆ ಅಧಿಕಾರಿ ರಘು, ಸ್ಮಾರ್ಟ್‌ಸಿಟಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲೆrನ್ಸಿಯ ಅಧಿಕಾರಿಗಳು ಹಾಗೂ ತಾಂತ್ರಿಕ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.