ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತದಿಂದ ತಕ್ಕ ಪ್ರತ್ಯುತ್ತರ
Team Udayavani, Sep 8, 2019, 1:11 PM IST
ಶ್ರೀನಗರ: ಪಾಕಿಸ್ತಾನ ಸೇನೆ ಭಾನುವಾರ ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿದ್ದು ರಜೌರಿ ಜಿಲ್ಲೆಯ ನೌಶಾರಿ ಮತ್ತು ಸುಂದರ್ ಬಾನಿ ಜಿಲ್ಲೆಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಗಡಿ ನಿಯಂತ್ರಣ ರೇಖೆಯ (ಎಲ್ಓಸಿ) ಬಳಿ ಭಾರಿ ಶಸ್ತ್ರಾಸ್ತ್ರ ಹಾಗೂ ಶೆಲ್ ಗಳ ಮೂಲಕ ಪಾಕ್ ಸೇನೆ ದಾಳಿ ನಡೆಸುತ್ತಿದ್ದು ಭಾರತ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಸೆಪ್ಟೆಂಬರ್ 2 ರಂದು ಪೂಂಚ್ ಜಿಲ್ಲೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತ ಸೇನೆಯ ಯೋಧ ಹೇಮರಾಜ್ ಜಾಟ್ ಹುತಾತ್ಮರಾಗಿದ್ದರು. ನಿರಂತರ ಗುಂಡಿನ ದಾಳಿಯಿಂದಾಗಿ ಗಡಿಭಾಗದ ಜನರು ಆತಂಕಕ್ಕೆ ಒಳಗಾಗಿದ್ದು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.