ಮಹಾರಾಷ್ಟ್ರ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಸಿಎಂ ಹುದ್ದೆ: ಲಕ್ಷ್ಮಣ್ ಸವದಿ
Team Udayavani, Sep 8, 2019, 3:45 PM IST
ಮೈಸೂರು: ಮಹಾರಾಷ್ಟ್ರ ಚುನಾವಣೆ ಗಮನದಲ್ಲಿಟ್ಟುಕೊಂಡು ತನಗೆ ಸಚಿವ ಸ್ಥಾನ ಮತ್ತು ಡಿಸಿಎಂ ಹುದ್ದೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನಗೆ ಮಹಾರಾಷ್ಟ್ರ ಚುನಾವಣೆ ಜವಾಬ್ದಾರಿ ವಹಿಸಿದ್ದಾರೆ. ಪೂರ್ವ ಮಹಾರಾಷ್ಟ್ರದ ಜವಾಬ್ದಾರಿ ನೀಡಿದ್ದಾರೆ. ಈಗಾಗಲೇ ಆ ಕೆಲಸಗಳನ್ನು ಮಾಡುತ್ತಿದ್ದೇನೆ. ಪೂರ್ವ ಮಹಾರಾಷ್ಟ್ರದ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕಿದೆ. ಪಕ್ಷ ವಹಿಸಿದ ಕೆಲಸ ಮಾಡುತ್ತೇನೆ ಎಂದರು.
ನನಗೆ ಯಾವ ಕಾರಣಕ್ಕಾಗಿ ಅಧಿಕಾರ ನೀಡಲಾಗಿದೆ ಎಂಬುದು ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ. ನನಗೆ ಅಧಿಕಾರ ನೀಡಿದ ಕಾರಣಕ್ಕಾಗಿ ಯಾರಿಗೂ ಅಸಮಾಧಾನ ಆಗಿಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂದರು.
ರಾಜ್ಯಕ್ಕೆ ಬರಲಿವೆ ಬ್ಯಾಟರಿ ಚಾಲಿತ ಬಸ್
ಸಾರಿಗೆ ಇಲಾಖೆಗೆ ಹೊಸ ರೂಪ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ರಾಜ್ಯದಲ್ಲಿ ಬ್ಯಾಟರಿ ಚಾಲಿತ ಬಸ್ ಬಳಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಶೀರ್ಘದಲ್ಲೇ ಅಸ್ಸಾಂ ರಾಜ್ಯದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಮೈಸೂರಿನಲ್ಲಿ ಸಾರಿಗೆ ಸಚಿವ ಲಕ್ಷಣ ಸವದಿ ಹೇಳಿಕೆ ನೀಡಿದ್ದಾರೆ.
ವಿದೇಶಿ ಮಾದರಿಯಲ್ಲಿ ಬ್ಯಾಟರಿ ಚಾಲಿತ ಸಾರಿಗೆ ಬಸ್‌ಗಳನ್ನು ಬಳಸಲು ನಿರ್ಧರಿಸಲಾಗಿದೆ.. ಈ ಸಂಬಂಧ ಬಸ್‌ಗಳನ್ನು ಸರಬರಾಜು ಮಾಡುಲು ವಿದೇಶಿ ಕಂಪನಿಗಳು ಮುಂದೆ ಬಂದಿವೆ.. ಅಸ್ಸಾಂ ರಾಜ್ಯದಲ್ಲಿ ಬ್ಯಾಟರಿ ಚಾಲಿತ ಬಸ್ ಗಳು ಸಂಚಾರ ಆರಂಭಿಸಿವೆ. ಅವುಗಳನ್ನು ರಾಜ್ಯಕ್ಕೂ ತರಿಸಿಕೊಳ್ಳುವ ಸಂಬಂಧ ಸಿಎಂ ಜೊತೆ ಚರ್ಚೆ ಮಾಡಿದ್ದೆನೆ. ಹೊಸ ಬಸ್ ಗಳು,ಅದರ ಚಾರ್ಜಿಂಗ್, ಅದರ ನಿರ್ವಹಣೆ, ಎಲ್ಲವನ್ನೂ ಆ ಕಂಪನಿಗಳೇ ಮಾಡಿಕೊಳ್ಳಲಿವೆ. ಸಾರಿಗೆ ಇಲಾಖೆಯಲ್ಲಿ ಇರುವ ಚಾಲಕರು ನಿರ್ವಹಕರಿಗೆ ತರಬೇತಿ ನೀಡಿ ಅವರನ್ನೆ ಬಳಸಿಕೊಳ್ಳುವುದು. ಶೇ. 40-60ರ ಲಾಭಾಂಶದಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷಣ ಸವದಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.