ಸಕಲೇಶಪುರ: ಹಾಲಿ, ಮಾಜಿ ಶಾಸಕರ ಶೀತಲ ಸಮರ
Team Udayavani, Sep 9, 2019, 11:56 AM IST
ಸಕಲೇಶಪುರ: ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಆಡಳಿತ ಅಂತ್ಯಗೊಂಡ ನಂತರ ನೂತನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರ ನಡುವೆ ಶೀತಲ ಸಮರ ಆರಂಭವಾಗಿದ್ದು, ಇದು ಮುಂದುವರಿಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.
ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನ ಕಾರ್ಯ ಕ್ರಮದಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿತು. ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರು ಕಾರ್ಯಕ್ರಮ ಆರಂಭವಾಗುವ ಮೊದಲೇ ತಮ್ಮ ಪತ್ನಿ ಜಿಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ ಜೊತೆ ಸ್ಥಳಕ್ಕೆ ಆಗಮಿಸಿ ಮಂತ್ರಿಗಳ ಕೈಕುಲುಕಿ ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕ್ರಮದ ನೆಪ ಹೇಳಿ ತೆರಳಿದರು.
ನಂತರ ನಡೆದ ಕಾರ್ಯಕ್ರಮದಲ್ಲಿ ಕಾನೂನು ಹಾಗೂ ಸಂಸದೀಯ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ, ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಜೊತೆಗೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡ ಜಾತಹಳ್ಳಿ ಪುಟ್ಟಸ್ವಾಮಿ ಮಾತ್ರ ವೇದಿಕೆಯನ್ನು ಹಂಚಿಕೊಂಡಿದ್ದರು. ಜೆಡಿಎಸ್ ಜಿಪಂ ಸದಸ್ಯರಾದ ಸುಪ್ರದೀಪ್ತ್ ಯಜಮಾನ್ ಗೈರುಹಾಜ ರಾಗಿದ್ದರು. ಜಿಪಂ ಸದಸ್ಯೆ ಉಜ್ಮಾರುಜ್ವಿ ಸಹ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಹಿಂತಿರುಗಿದ್ದು ಹಲವು ಅನುಮಾನ ಗಳಿಗೆ ಕಾರಣವಾಗಿದೆ.
ಜೆಡಿಎಸ್ ಮುಖಂಡರ ಗೈರು: ಸಾಮಾನ್ಯವಾಗಿ ಯಾವುದೇ ಸರ್ಕಾರ ಕಾರ್ಯಕ್ರಮವಿರಲಿ ಜೆಡಿಎಸ್‌ನ ಮುಖಂಡರೇ ಹೆಚ್ಚಾಗಿ ಕಾಣುತ್ತಿದ್ದರು. ಆದರೆ ಶಿಕ್ಷಕರ ದಿನಾಚರಣೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕ್ರಮದಿಂದ ದೂರ ಉಳಿದಿದ್ದರು.
ಈ ಹಿಂದೆ ವಿಶ್ವನಾಥ್ ಸಕಲೇಶಪುರ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಕ್ಷೇತ್ರ ಮೀಸಲಾತಿಯಾದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಮೊದಲ ಅವಧಿಯಲ್ಲಿ ಕ್ಷೇತ್ರದಲ್ಲಿ ಶಾಸಕರಾಗಿದ್ದಾಗ ಬೆಂಬಲಿಸಿದ್ದರು.
ಕುಮಾರಸ್ವಾಮಿಗೆ ವಿಶ್ವನಾಥ್ ವಿರೋಧ: ಎರಡನೇ ಅವಧಿಯಲ್ಲಿ ಶಾಸಕ ಎಚ್.ಕೆ.ಕುಮಾರಸ್ವಾಮಿ ಸ್ಪರ್ಧಿಸಿದಾಗ ವಿಶ್ವನಾಥ್ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಜೆಡಿಎಸ್ ತೊರೆದು ಕೆಜೆಪಿ ಸೇರ್ಪಡೆಯಾಗಿದ್ದರು. ನಂತರ ರಾಜ್ಯದಲ್ಲಿ ಬಿಜೆಪಿ ಯೊಂದಿಗೆ ವಿಲೀನವಾದಾಗ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸಿದ ಸಂದರ್ಭದಲ್ಲಿ ಯೂ ವಿಶ್ವನಾಥ್ ಕ್ಷೇತ್ರದಲ್ಲಿ ಅಷ್ಟಾಗಿ ಪ್ರಾಬಲ್ಯ ಹೊಂದಲು ಮುಂದಾಗಿರಲಿಲ್ಲ. ಕಳೆದ ಬಾರಿ ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ತಾಲೂಕಿನಲ್ಲಿ ಶಾಸಕರ ಮಾತೇ ಬಹುತೇಕ ಅಂತಿಮವಾಗುತ್ತಿತ್ತು.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಖುದ್ದಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಅವರ ಮನೆಗೆ ಬಂದು ಬೆಂಬಲ ಕೋರಿದ್ದರೂ ವಿಶ್ವನಾಥ್ ಪ್ರಜ್ವಲ್ ರೇವಣ್ಣ ಉಮೇದುವಾರಿಕೆಯನ್ನು ವಿರೋಧಿಸಿ ಬಿಜೆಪಿ ಸೇರ್ಪಡೆಯಾಗಿ ಎ.ಮಂಜು ಅವರನ್ನು ಬೆಂಬಲಿಸಿದ್ದರು. ಆದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರಿಂದ ತಾಲೂಕು ರಾಜಕೀಯದಲ್ಲಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದೇ ರಾಜ್ಯ ಮಟ್ಟದಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿದ್ದರು. ಆದರೆ ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರುವುದರ ಹಿನ್ನೆಲೆ ಯಲ್ಲಿ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಅಧಿ ಕಾರಿಗಳನ್ನು ಹಿಡಿತದಲ್ಲಿ ಇಟ್ಟಿಕೊಳ್ಳಲು ಯತ್ನಿಸುತ್ತಿ ರುವುದು ಗೋಚರವಾಗುತ್ತಿದೆ.
ಸಚಿವರಿಂದ ಶಾಸಕರ ನಿರ್ಲಕ್ಷ್ಯ- ಆರೋಪ: ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಶಾಸಕರನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ದಾರೆನ್ನಲಾಗಿದೆ. ಜೊತೆಗೆ ಕಾರ್ಯಕ್ರಮಕ್ಕೆ ಸಚಿವ ಮಾಧುಸ್ವಾಮಿ ಬರುವ ಕುರಿತು ಖುದ್ದು ಶಾಸಕರಿಗೆ ಯಾವುದೇ ರೀತಿಯಲ್ಲಿ ಸರಿಯಾದ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.
ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ತಮ್ಮಣ್ಣಶೆಟ್ಟಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡದೇ ಅಮಾನತುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯ ಕ್ರಮದ ನೆಪ ಹೇಳಿ ಕಾರ್ಯಕ್ರಮಕ್ಕೆ ಕಾಟಾಚಾರದ ಭೇಟಿ ನೀಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೇ ತಾಲೂಕಿನ ಅಧಿಕಾರಿಗಳು ಶಾಸಕರ ಮಾತು ಕೇಳುತ್ತಿರಲಿಲ್ಲ. ಈಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಅಧಿಕಾರಿಗಳ ನಿರ್ಲಕ್ಷ್ಯ ಮಿತಿ ಮೀರಿದೆ ಎನ್ನಲಾಗುತ್ತಿದೆ.
● ಸುಧೀರ್ ಎಸ್.ಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.