ಎಲ್ಲ ಭಾಷೆಯನ್ನೂ ಪ್ರೀತಿಯಿಂದ ಕಾಣುವ ಗುಣ ಇರಲಿ
Team Udayavani, Sep 9, 2019, 1:16 PM IST
ತುಮಕೂರು: ಯಾವುದೇ ಭಾಷೆಯ ಬಗ್ಗೆ ಸಂಕುಚಿತ ಮನೋಭಾವ ಹೊಂದದೆ ಪ್ರೀತಿಯಿಂದ ಕಾಣುವ ಮೂಲಕ ಭಾಷೆ ಉಳಿಸಬೇಕು ಎಂದು ಪಿಎಚ್‌ಡಿ ಪದವೀಧರರಿಗೆ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಸಲಹೆ ನೀಡಿದರು.
ಕನ್ನಡ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಿದ್ದ ಕನ್ನಡ ಮಾಧ್ಯಮದಲ್ಲಿ ಪಿಎಚ್‌ಡಿ ಪಡೆದಿರುವ 24 ಮಂದಿಗೆ ಅಭಿನಂದನೆ ಹಾಗೂ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸೌಮ್ಯ ಭಾಷೆ: ಭಾಷೆ ಮುಂದಕ್ಕೆ ಕೊಂಡೊಯ್ಯುವ ಕೆಲಸ ಎಲ್ಲರಿಂದಲೂ ಆಗಬೇಕಿದೆ. ಭಾಷೆ ಬಗ್ಗೆ ಯಾರೂ ಸಂಕುಚಿತ ಮನೋಭಾವ ಹೊಂದಬಾರದು. ಇತರೆ ಭಾಷೆಗಳನ್ನೂ ಪ್ರೀತಿಸಿ, ತಾನೂ ಬೆಳೆಯಬೇಕಿದೆ. ಇತರೆ ಭಾಷೆಗಳಿಗೆ ಹೋಲಿಸಿದಾಗ ಕನ್ನಡ ಸೌಮ್ಯ ಭಾಷೆ. ಮಾತೃಭಾಷೆಯಲ್ಲಿ ಮಾತನಾಡುವುದು ಎಷ್ಟು ಇಷ್ಟ ಎಂಬುದನ್ನು ಲೋಕಸಭೆ ಹಾಗೂ ವಿಶ್ವಸಂಸ್ಥೆಯಲ್ಲಿಯೂ ಕಂಡುಕೊಂಡಿದ್ದೇನೆ. ಬೇರೆಯವರಿಗೆ ಕನ್ನಡ ಭಾಷೆ ಅರ್ಥವಾಗದ ಕಾರಣ ಇಂಗ್ಲಿಷ್‌ನಲ್ಲಿ ಮಾತನಾಡಿದ್ದೇನೆ. ಕನ್ನಡವನ್ನು ಇತರರಿಗೂ ಪರಿಚಯಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ಬಿ. ರಮೇಶ್, ಪಿಎಚ್‌ಡಿ ಮಾಡಿಕೊಂಡವರಲ್ಲಿ ನಿರಂತರ ಸಂಶೋಧನಾ ಗುಣ ಇರಬೇಕು. ವಿಶ್ಲೇಷಣೆ ಮತ್ತು ಸತ್ಯಾಂಶ ಹೊರತೆಗೆಯುವ ಪ್ರಯತ್ನ ಆಗಬೇಕು ಎಂದರು.
ಸಮಾಜದ ಆರೋಗ್ಯ ಕೆಡುತ್ತಿದೆ: ಕಾರ್ಯದರ್ಶಿ ಸಾ.ಚಿ. ರಾಜಕುಮಾರ ಮಾತನಾಡಿ, ವಿಶ್ವಸಂಸ್ಥೆ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿಸಿ ಚಿಂತನಾ ಮನೋಭಾವ ಉಂಟು ಮಾಡುವ ನಿಟ್ಟಿನಲ್ಲಿ ಸಾಕ್ಷರತಾ ಚಳವಳಿ ಹುಟ್ಟು ಹಾಕಿತು. ಆದರೂ ಸಾಮಾಜಿಕ ಸಮಸ್ಯೆಗಳು ಹಾಗೆಯೇ ಉಳಿದಿವೆ. ಶಿಕ್ಷಣ ಪಡೆದವರು ಸಾಮಾಜಿಕ ಅಭಿವೃದ್ಧಿ ಕಡೆಗೆ ಗಮನಹರಿಸಬೇಕು. ಆದರೆ ಇಂದು ಎಲ್ಲರ ಕೈಗಳಲ್ಲಿಯೂ ಮೊಬೈಲ ಬಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ತಮಗಿಷ್ಟ ಬಂದಂತೆ ಬಳಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಬರವಣಿಗೆ ಅಪಾಯ ತಂದೊಡ್ಡುತ್ತಿವೆ. ಆರೋಗ್ಯಕರ ಮಾಹಿತಿ ನೀಡುವ ಬದಲು ಸಮಾಜದ ಆರೋಗ್ಯ ಕೆಡಿಸುತ್ತಿರುವುದು ಅಪಾಯಕಾರಿ ಎಂದು ಹೇಳಿದರು.
ಆರ್ಥಿಕ ಸಂಕಷ್ಟದ ಈ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ, ಜಲ ಬಿಕ್ಕಟ್ಟು, ಕೌಟುಂಬಿಕ ಸಮಸ್ಯೆ ತೀವ್ರಗೊಳ್ಳುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಣ ಉದ್ಯೋಗ ದೊರಕಿಸುವ, ಸಾಮಾಜಿಕ ಸ್ವಾಸ್ಥ ್ಯ ಕಾಪಾಡುವ ನೆಲೆಗಟ್ಟಿನಲ್ಲಿ ವಿಸ್ತಾರಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಬರಹಗಾರರು ಎಚ್ಚರಿಕೆ ವಹಿಸಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಮಾತನಾಡಿ, ಅಕ್ಷರವಂತರಾದವರು ರಾಕ್ಷಸರಾಗುತ್ತಿದ್ದಾರೆ. ಸಾಮಾಜಿಕ ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ಹೊಣೆಗಾರಿಕೆ ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಕಸಾಪ ತಾಲೂಕು ಅಧ್ಯಕ್ಷೆ ಶೈಲಾ ನಾಗರಾಜ್, ರಾಕ್‌ಲೈನ್ ರವಿಕುಮಾರ್, ಪದಾಧಿಕಾರಿಗಳಾದ ಸಿ.ಎ.ಇಂದಿರಾ, ಮಲ್ಲಿಕಾ ಬಸವರಾಜು, ಅರುಂಧತಿ, ರಾಣಿ ಚಂದ್ರಶೇಖರ್, ಮೆಳೆಹಳ್ಳಿ ದೇವರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.