ಮರ್ಡರ್‌ ಮಿಸ್ಟ್ರಿ ಹೇಳೋಕೆ ಅಕ್ಷರಾ ಗೌಡ ರೆಡಿ

ಹೇಮಂತ್‌ ಹೆಗ್ಡೆ ನಿರ್ದೇಶನದ ಚಿತ್ರ

Team Udayavani, Sep 10, 2019, 3:05 AM IST

Akshara-Gowda

ಯೋಗರಾಜ್‌ ಭಟ್ಟರ “ಪಂಚತಂತ್ರ’ ಚಿತ್ರದ ಮೂಲಕ ಕನ್ನಡ ಸಿನಿಪ್ರಿಯರಿಗೆ ಹತ್ತಿರವಾಗಿದ್ದ ನಟಿ ಅಕ್ಷರಾ ಗೌಡ ಶೀಘ್ರದಲ್ಲಿಯೇ ಮರ್ಡರ್‌ ಮಿಸ್ಟ್ರಿಯೊಂದಿಗೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಬೋಲ್ಡ್‌ ಬೆಡಗಿ ಅಕ್ಷರಾ ಗೌಡ, ಹೇಮಂತ್‌ ಹೆಗ್ಡೆ ನಿರ್ದೇಶನದ ಹೊಸಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಗುರುನಂದನ್‌ ನಾಯಕನಾಗಿದ್ದು, ಅವರಿಗೆ ಜೋಡಿಯಾಗಿ ಅಕ್ಷರಾ ಗೌಡ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಇನ್ನು ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ತಿಂಗಳ ಅಂತ್ಯಕ್ಕೆ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಚಿತ್ರತಂಡದ ಮೂಲಗಳ ಪ್ರಕಾರ ಅಕ್ಟೋಬರ್‌ ಎರಡನೇ ವಾರದಿಂದ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಚಿತ್ರದ ಬಹುಭಾಗ ಚಿತ್ರೀಕರಣ ಬೆಂಗಳೂರು, ನಾರ್ವೆ ಸುತ್ತಮುತ್ತ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಹೇಮಂತ್‌ ಹೆಗ್ಡೆ, ಇದೊಂದು ಸಸ್ಪೆನ್ಸ್‌-ಮರ್ಡರ್‌ ಮಿಸ್ಟ್ರಿ ಚಿತ್ರ. ಇದರಲ್ಲಿ ಕಾಮಿಡಿ, ಥ್ರಿಲ್ಲರ್‌ ಹೀಗೆ ಹಲವು ಅಂಶಗಳು ಇರಲಿವೆ. ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮುಟ್ಟದ ಎಲಿಮೆಂಟ್‌ ಒಂದನ್ನು ಇದರಲ್ಲಿ ಹೇಳಲು ಹೊರಟಿದ್ದೇವೆ. ಅದೇನು ಅನ್ನೋದನ್ನ ಚಿತ್ರದಲ್ಲೇ ನೋಡಬೇಕು. ಪದ್ಮಲತಾ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, ಸದ್ಯ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಅಂತಿಮ ಆಯ್ಕೆ ನಡೆಯುತ್ತಿದೆ.

ಶೀಘ್ರದಲ್ಲಿ ಚಿತ್ರತಂಡದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎನ್ನುತ್ತಾರೆ. ಇನ್ನು ಕನ್ನಡದಲ್ಲಿ ಇತ್ತೀಚೆಗೆ ಹೊಸತರದ ಚಿತ್ರಗಳು ಮತ್ತು ಪಾತ್ರಗಳು ತಮ್ಮನ್ನು ಹುಡುಕಿಕೊಂಡು ಬರುತ್ತಿರುವುದರ ಬಗ್ಗೆ ನಟಿ ಅಕ್ಷರಾ ಗೌಡ ಕೂಡ ಫ‌ುಲ್‌ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಅಕ್ಷರಾ ಗೌಡ “ಸದ್ಯ ಕನ್ನಡದಲ್ಲಿ ಹೊಸ ಸಬ್ಜೆಕ್ಟ್ ಚಿತ್ರಗಳಿಗೆ ಒಳ್ಳೆಯ ಆಫ‌ರ್ ಬರುತ್ತಿವೆ. ಈಗಾಗಲೇ ಹಲವು ಕಥೆಗಳನ್ನು ಕೇಳಿದ್ದೇನೆ.

ಅದರಲ್ಲಿ ಕೆಲವು ಕಥೆಗಳು ಇಷ್ಟವಾಗಿದ್ದು, ಅದರ ಬಗ್ಗೆ ಇನ್ನಷ್ಟೇ ನಿರ್ಧರಿಸಬೇಕಾಗಿದೆ. ಇನ್ನು ಹೇಮಂತ್‌ ಹೆಗ್ಡೆ ಅವರನ್ನು ನಾನು ಇಲ್ಲಿಯವರೆಗೆ ನಟನಾಗಿ ನೋಡಿದೆ. ಈಗ ಅವರ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಈಗಲೇ ಅವರ ಜೊತೆಗಿನ ಹೊಸ ಚಿತ್ರದ ಬಗ್ಗೆ ಹೆಚ್ಚೇನು ಮಾಹಿತಿ ಹೇಳಲಾರೆ. ಆದ್ರೆ ಚಿತ್ರದ ಕಥೆ ಮತ್ತು ನನ್ನ ಪಾತ್ರ ಎರಡೂ ತುಂಬ ವಿಭಿನ್ನವಾಗಿದೆ ಎಂದಷ್ಟೇ ಹೇಳಬಲ್ಲೆ’ ಎನ್ನುತ್ತಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.