ಸರಕಾರಿ ವೈದ್ಯರು ಖಾಸಗಿ ಸೇವೆ ಮಾಡಿದರೆ ವಜಾ: ಶ್ರೀರಾಮುಲು
Team Udayavani, Sep 10, 2019, 6:15 AM IST
ಬೆಂಗಳೂರು: ಸರಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಂ ಮತ್ತು ಕ್ಲಿನಿಕ್ಗಳಲ್ಲಿ ಸೇವೆ ಮಾಡಿದರೆ ಅವರನ್ನು ವಜಾಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ನಾನು ಬಡವರ ಪರ ವಾಗಿರುವವನು. ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸುವುದರಿಂದ ಬಡ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್ ತೆರೆಯುವುದು ಮತ್ತು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಸೇವೆ ಸಲ್ಲಿಸಿದರೆ ವಜಾಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ವಾಸ್ತವ್ಯ
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಸೂಕ್ತ ಮೂಲ ಸೌಕರ್ಯ ಇದೆಯೇ ಇಲ್ಲವೇ ಎನ್ನುವುದನ್ನು ಪರಿಶೀಲಿಸಲು ಪ್ರಾಥ ಮಿಕ ಆರೋಗ್ಯ ಕೇಂದ್ರ ಗಳಲ್ಲಿಯೇ ವಾಸ್ತವ್ಯ ಹೂಡಲು ತೀರ್ಮಾನಿಸಿದ್ದೇನೆ. ಕೆಲವು ಆಸ್ಪತ್ರೆಗಳನ್ನು ಪಟ್ಟಿ ಮಾಡಲಾಗಿದ್ದು, ಅಲ್ಲಿನ ಸ್ಥಿತಿಗತಿ, ಸಿಬಂದಿ ಕೊರತೆ, ರೋಗಿಗಳ ಸಮಸ್ಯೆ ಗಳನ್ನು ಆಲಿಸುತ್ತೇನೆ. ಶಾಸಕರೂ ಜತೆ ಸೇರುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿ ಕ್ರಿಯಿಸಿದ ಅವರು, ಸರಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆಯಿಲ್ಲ. ನೆರೆ ಸಂತ್ರಸ್ತರಿಗೆ ಸರಕಾರ ಸೂಕ್ತ ಪರಿಹಾರ ನೀಡುತ್ತಿದೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಆ ಮನುಷ್ಯ ಅಧಿಕಾರ ಕಳೆದುಕೊಂಡು ಹಪಾ ಹಪಿಯಿಂದ ಆ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅವರಿಗೆ ಸಹಿಸ ಲಾಗುತ್ತಿಲ್ಲ ಹೀಗಾಗಿ ಆರೋಪ ಮಾಡುತ್ತಿದ್ದಾರೆ ಎಂದರು. ಕುಮಾರಸ್ವಾಮಿ ಎರಡು ಬಾರಿ ಮುಖ್ಯ ಮಂತ್ರಿ ಯಾದರೂ ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲಿಲ್ಲ. ಅವರ ಹೇಳಿಕೆಗಳಿಗೆ ಸಿಡಿದೆದ್ದು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ ಅವರು ಹತಾಶರಾಗಿದ್ದಾರೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.