ಉಪ್ಪಿ-ಚಂದ್ರು ಹೊಸ ಚಿತ್ರ
ಮತ್ತೆ ಒಂದಾದ ಹಿಟ್ ಜೋಡಿ- ಏಳು ಭಾಷೆಗಳಲ್ಲಿ ಚಿತ್ರ ಬಿಡುಗಡೆ
Team Udayavani, Sep 11, 2019, 3:05 AM IST
ಈ ವರ್ಷದ ಹಿಟ್ ಸಿನಿಮಾಗಳ ಸಾಲಿನಲ್ಲಿ ಉಪೇಂದ್ರ ನಾಯಕರಾಗಿರುವ “ಐ ಲವ್ ಯು’ ಚಿತ್ರ ಕೂಡಾ ಸೇರುತ್ತದೆ. ಆರ್.ಚಂದ್ರು, ನಿರ್ಮಿಸಿ, ನಿರ್ದೇಶಿಸಿದ ಈ ಚಿತ್ರ ಉಪೇಂದ್ರ ಅಭಿಮಾನಿಗಳಿಗೆ ಇಷ್ಟವಾಗುವ ಮೂಲಕ ಹಿಟ್‌ಲಿಸ್ಟ್ ಸೇರಿತ್ತು. ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರ ಬಿಝಿನೆಸ್ ವಿಷಯದಲ್ಲೂ ನಿರ್ಮಾಪಕರಿಗೆ ದೊಡ್ಡ ಲಾಭವನ್ನೇ ತಂದುಕೊಟ್ಟಿದೆ. ದೊಡ್ಡ ಗ್ಯಾಪ್‌ನ ಬಳಿಕ ಬಂದ ಉಪೇಂದ್ರ ಅವರಿಗೂ “ಐ ಲವ್ ಯು’ ಯಶಸ್ಸಿನ ಖುಷಿ ಕೊಟ್ಟಿದ್ದು ಸುಳ್ಳಲ್ಲ.
ಈಗ ಈ ಚಿತ್ರ ನೂರರ ಸಂಭ್ರಮದಲ್ಲಿದೆ. ಈಗ ಯಾಕೆ ಈ ವಿಚಾರ ಎಂದು ನೀವು ಕೇಳಬಹುದು. “ಐ ಲವ್ ಯು’ ನಂತಹ ಹಿಟ್ ಸಿನಿಮಾ ಕೊಟ್ಟ ಆರ್.ಚಂದ್ರು ಹಾಗೂ ಉಪೇಂದ್ರ ಈಗ ಮತ್ತೆ ಒಂದಾಗಿದ್ದಾರೆ. ಅದು ಹೊಸ ಸಿನಿಮಾಕ್ಕಾಗಿ. ಹೌದು, ಆರ್.ಚಂದ್ರು ಹಾಗೂ ಉಪೇಂದ್ರ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ. ಈ ಮೂಲಕ ಹಿಟ್ ಜೋಡಿ ಮತ್ತೂಮ್ಮೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಚಂದ್ರು ಹಾಗೂ ಉಪೇಂದ್ರ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಮೂರನೇ ಸಿನಿಮಾವಿದು.
ಈ ಹಿಂದೆ “ಬ್ರಹ್ಮ’ ಚಿತ್ರವನ್ನು ಜೊತೆಯಾಗಿ ಮಾಡಿದ್ದರು. “ಐ ಲವ್ ಯು’ ಚಿತ್ರದಲ್ಲಿ ಲವ್‌ಸ್ಟೋರಿ ಹೇಳಿದ್ದ ಚಂದ್ರು ಈ ಬಾರಿ ಉಪೇಂದ್ರ ಅವರನ್ನು ಹೊಸ ಅವತಾರದಲ್ಲಿ ತೋರಿಸಲುಯ ಮುಂದಾಗಿದ್ದಾರೆ. ಅದು ಆ್ಯಕ್ಷನ್ ಮೂಲಕ. ಚಂದ್ರು, ಉಪೇಂದ್ರ ಅವರನ್ನು ಗಮನದಲ್ಲಿಟ್ಟುಕೊಂಡು ಔಟ್ ಅಂಡ್ ಔಟ್ ಆ್ಯಕ್ಷನ್ ಕಥೆಯೊಂದನ್ನು ಸಿದ್ಧಪಡಿಸಿದ್ದಾರೆ. ರೆಗ್ಯುಲರ್ ಆ್ಯಕ್ಷನ್ ಸಿನಿಮಾಗಳಿಗಿಂತ ಭಿನ್ನವಾಗಿರುವ ಕಥೆ ಇದಾಗಿದ್ದು, ಅಂಡರ್‌ವರ್ಲ್ಡ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.
ಈ ಹಿಂದೆ “ಐ ಲವ್ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ, ಮರಾಠಿ ಭಾಷೆಗಳಲ್ಲಿ ಈ ಚಿತ್ರವನ್ನು ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಮೂಲಕ ಚಂದ್ರು ಪ್ಯಾನ್ ಇಂಡಿಯಾದತ್ತ ಮುಖ ಮಾಡಿದ್ದಾರೆ. ಎಲ್ಲಾ ಓಕೆ, ಚಂದ್ರು ಹೊಸ ಚಿತ್ರ ಯಾವಾಗ ಲಾಂಚ್ ಎಂದು ಕೇಳಬಹುದು.
ಸೆ.14 ರಂದು “ಐ ಲವ್ ಯು’ ಚಿತ್ರದ ನೂರನೇ ದಿನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆ ದಿನ ತಮ್ಮ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಲಿದ್ದಾರೆ ಚಂದ್ರು. ಈ ಚಿತ್ರವನ್ನೂ ಯಾರು ನಿರ್ಮಿಸುತ್ತಾರೆಂಬುದನ್ನು ಚಂದ್ರು ಗೌಪ್ಯವಾಗಿಯೇ ಇಟ್ಟಿದ್ದಾರೆ. ಚಿತ್ರದ ಇತರ ತಾರಾಬಳಗ ಅಂತಿಮವಾಬೇಕಿದೆ. ಚಿತ್ರಕ್ಕೆ ಪಕ್ಕಾ ಮಾಸ್ ಟೈಟಲ್ ಇಡಲಾಗಿದ್ದು, ಅದನ್ನು ಲಾಂಚ್ ದಿನವೇ ನೋಡಿ ಎಂದು ಸಸ್ಪೆನ್ಸ್ ಕಾಯ್ದಿರಿಸುತ್ತಾರೆ ಚಂದ್ರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.