ಸಂತ್ರಸ್ತರಿಗೆ ಮತ್ತೆ ಪ್ರವಾಹ ಭೀತಿ

Team Udayavani, Sep 11, 2019, 12:13 PM IST

11-Sepctember–6

ನಿಡಗುಂದಿ: ಹೊಳೆಮಸೂತಿ ಗ್ರಾಮದ ಜಮೀನಿನಲ್ಲಿ ಕಂಡ ಹಾವು.

ನಿಡಗುಂದಿ: ಕಳೆದ ಆಗಸ್ಟ್‌ ತಿಂಗಳಲ್ಲಿ ಕೃಷ್ಣಾ ನದಿ ಪ್ರವಾಹ ಆವರಿಸಿ ಜನರ ನೆಮ್ಮದಿ ಕಿತ್ತುಕೊಂಡಿದ್ದು ಮರೆಯುವ ಮುನ್ನವೇ ಮತ್ತೆ ನದಿ ಉಕ್ಕೇರಿತ್ತಿರುವ ಪರಿಣಾಮ ಸಂತ್ರಸ್ತರು ಆತಂಕಕ್ಕೀಡಾಗಿದ್ದಾರೆ.

ಮಹಾರಾಷ್ಟ್ರದ ನದಿ ಜಲಾನಯನ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಅಬ್ಬರದಿಂದಾಗಿ ಕೊಯ್ನಾ ಸೇರಿದಂತೆ ನಾನಾ ಜಲಾಶಯ ಸೇರಿ ಕೃಷ್ಣಾ ನದಿ ಪಾತ್ರದ ಕೆಲ ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ನದಿಗೆ ಲಕ್ಷಾಂತರ ಕ್ಯೂಸೆಕ್‌ ನೀರನ್ನು ಹರಿಸಲಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬರುತ್ತಿದೆ. ಮುಂಜಾಗೃತಾ ಕ್ರಮವಾಗಿ ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ.

ಆಲಮಟ್ಟಿ ಜಲಾಶಯದ ಮುಂಭಾಗ ಹಾಗೂ ನಾರಾಯಣಪುರ ಜಲಾಶಯ ಹಿನ್ನೀರು ಪ್ರದೇಶಗಳಾದ ನಿಡಗುಂದಿ ಮತ್ತು ಮುದ್ದೇಬಿಹಾಳ ತಾಲೂಕಿನ ಅನೇಕ ಗ್ರಾಮಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಕೃಷ್ಣೆ ಉಗಮ ಸ್ಥಾನ ಮಹಾರಾಷ್ಟದ ಮಹಾಬಲೇಶ್ವರ, ರತ್ನಗಿರಿ, ಕರಾಡ, ಸಾಂಗ್ಲಿ, ಸಾತಾರ ಜಿಲ್ಲೆಗಳು ಹಾಗೂ ಬೆಳಗಾವಿ ಜಿಲ್ಲೆ ಸೇರಿದಂತೆ ಕೃಷ್ಣಾ ಜಲಾನಯನ‌ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಗರಿಷ್ಠ 519.60 ಮೀ. ಎತ್ತರದ ಗರಿಷ್ಠ 123.081 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಮಂಗಳವಾರ 518.16 ಮೀ. ಎತ್ತರದಲ್ಲಿ 100.051 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 1,41,000 ಕ್ಯೂಸೆಕ್‌ ಒಳಹರಿವಿದ್ದು ಸಂಜೆ ವೇಳೆಗೆ 45,000 ಕ್ಯೂಸೆಕ್‌ ಹೊರ ಹರಿವಿತ್ತು.

ಪ್ರವಾಹದ‌ ಮುನ್ಸೂಚನೆಗಳು ಮತ್ತೆ ಮರುಕಳುಹಿಸುತ್ತಿದೆ. ಕಳೆದ ತಿಂಗಳಷ್ಟೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿರುವ ಕೃಷ್ಣಾ ತೀರದ ಗ್ರಾಮಸ್ಥರು ಗಣೇಶೋತ್ಸವ ಮುಗಿಯುತ್ತಿದ್ದಂತೆ ಮತ್ತೆ ಪ್ರವಾಹದ ಆತಂಕ ಉಂಟಾಗಿದೆ.

ಹಾವುಗಳ ಭೀತಿ: ನದಿ ಪಾತ್ರದ ಹೊಳೆಮಸೂತಿ ಸೇರಿದಂತೆ ಕೆಲ ಗ್ರಾಮಗಳ ಜಮೀನಿನಲ್ಲಿ ನೀರು ಆವರಿಸುತ್ತಿದೆ. ನೀರಿನಲ್ಲಿ ಹಾವುಗಳು ಹರಿದು ಬರುತ್ತಿವೆ. ಇದರಿಂದ ಜಮೀನಿಗೆ ಹೋಗಲು ಭಯ ಆವರಿಸಿದೆ. ನೀರು ಇಳಿಕೆಯಾಗಿದ್ದು ಇನ್ನೂ ಕೃಷಿ ಚಟುವಟಿಕೆ ನಡೆಸಬೇಕೆಂದರೆ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ ಎನ್ನುತ್ತಾರೆ ಹೊಳೆಮಸೂತಿ ಗ್ರಾಮಸ್ಥರು.

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.