ರಕ್ತಹೀನತೆ ಸಮಸ್ಯೆ ನಿವಾರಣೆಗೆ ಶ್ರಮಿಸಿ
ಆರೋಗ್ಯ ಕೇಂದ್ರಗಳಲ್ಲಿ ಹೆಣ್ಣುಮಕ್ಕಳು ಹಾಗೂ ಚಿಕ್ಕ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯಲಿ: ನಾಗರಾಜ್
Team Udayavani, Sep 11, 2019, 5:45 PM IST
ಮೊಳಕಾಲ್ಮೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಮೊಳಕಾಲ್ಮೂರು: ತಾಲೂಕಿನಲ್ಲಿ ಮಕ್ಕಳು ಮತ್ತು ಹೆಣ್ಣುಮಕ್ಕಳಲ್ಲಿ ಕಂಡುಬರುವ ರಕ್ತಹೀನತೆಯನ್ನು ಹೋಗಲಾಡಿಸಲು ಶ್ರಮಿಸಬೇಕಿದೆ ಎಂದು ಶಿರಸ್ತೇದಾರ ಟಿ. ನಾಗರಾಜ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಅಂತರ್ ಇಲಾಖಾ ಸಮನ್ವಯ ಸಮಿತಿ ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಮತ್ತು ಮಹಿಳೆಯರಲ್ಲಿ ರಕ್ತಹೀನತೆಯನ್ನು ತಡೆಗಟ್ಟುವುದು ಅಭಿಯಾನದ ಮುಖ್ಯ ಉದ್ದೇಶ. 6 ವರ್ಷದೊಳಗಿನ ಮಕ್ಕಳು, ಹದಿಹರೆಯದ ಹೆಣ್ಣುಮಕ್ಕಳು ಹಾಗೂ 15 ರಿಂದ 49 ವರ್ಷದ ಮಹಿಳೆಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ನೀಡಿ ರಕ್ತಹೀನತೆ ಸಮಸ್ಯೆ ಇಲ್ಲದಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಹೆಣ್ಣುಮಕ್ಕಳು ಮತ್ತು ಮಕ್ಕಳಿಗೆ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ತಾಲೂಕಿನ ಎಲ್ಲಾ ಗ್ರಾಮಗಳ ಆರೋಗ್ಯ ಕೇಂದ್ರಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರು ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ದಿನಾಚರಣೆಗಳಲ್ಲಿ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಜಾಗೃತಿ ಮೂಡಿಸಿ ಅತಿಸಾರ ಭೇದಿಯನ್ನು ತಡೆಗಟ್ಟಬೇಕಾಗಿದೆ. ಮಕ್ಕಳು ಕೈತೊಳೆಯುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಅತಿಸಾರ ಭೇದಿಯಾಗುತ್ತಿರುವ ಮಕ್ಕಳಿಗೆ ಒಆರ್‌ಎಸ್ ಮತ್ತು ಜಿಂಕ್ ನೀಡುವಿಕೆ ಬಗ್ಗೆ ಅರಿವು ಮೂಡಿಸಲಾಗುವುದು. ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು ನವಜಾತ ಶಿಶುವಿನ ಆರೈಕೆಗಾಗಿ ಮನೆ ಮನೆಗೆ ಭೇಟಿ ನೀಡಿ ಬಾಣಂತಿ ಮತ್ತು ನವಜಾತು ಶಿಶುವಿನ ಬಗ್ಗೆ ಮಾಹಿತಿ ನೀಡಬೇಕು. ಆಗ ರಕ್ತಹೀನತೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಕೊಳಚೆ ಪ್ರದೇಶ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಪೂರ್ಣ ಪ್ರಮಾಣದ ಲಸಿಕೆ ನೀಡಲಾಗುವುದೆಂದು ತಿಳಿಸಿದರು.
ಬಿಇಒ ಎನ್. ಸೋಮಶೇಖರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೋಪಾಲಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಟಿ. ಗುರುಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಖರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ವ್ಯವಸ್ಥಾಪಕ ಪ್ರೇಮನಾಥ, ಡಾ| ಮಧುಕುಮಾರ್, ಡಾ| ಗೋವಿಂದರಾಜು, ಡಾ| ಟಿ.ಕೆ. ರಾಘವೇಂದ್ರಬಾಬು, ಬಿಪಿಎಂನ ನವೀನ್, ಆಶಾ ಮೇಲ್ವಿಚಾರಕಿ ಉಷಾ, ಸಿಬ್ಬಂದಿಗಳಾದ ಶಿವಮ್ಮ, ಸವಿತಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.