ಶ್ರೀರಾಮ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಕ್ರಮ

Team Udayavani, Sep 12, 2019, 3:00 AM IST

shrirama

ಕೆ.ಆರ್‌.ನಗರ: ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರ³ ಬಳಿ ಚರ್ಚಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ಪಟ್ಟಣದ ಹಾಸನ-ಮೈಸೂರು ರಸ್ತೆಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ ಬುಧುವಾರ ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಏಳು ವರ್ಷಗಳಿಂದ ಕಾರ್ಖಾನೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿರುವ ಬಗ್ಗೆ ಪಕ್ಷದ ಮುಖಂಡರು ನನ್ನ ಗಮನಕ್ಕೆ ತಂದಿದ್ದು, ಈ ವಿಚಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸಭೆ: ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನರಾರಂಭಕ್ಕೆ ಸರ್ಕಾರ ಈಗಾಗಲೇ ಅಧಿಕಾರಿಗಳು ಮತ್ತು ಆ ಭಾಗದ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಸಿದ್ದು, ಆ ಮಾದರಿಯಲ್ಲಿ ಶೀಘ್ರದಲ್ಲಿಯೇ ಚುಂಚನಕಟ್ಟೆ ಕಾರ್ಖಾನೆಯ ಕಾರ್ಯಾರಂಭಕ್ಕೂ ಸಭೆ ನಡೆಸಲಾಗುವುದು. ದಸರಾ ಮುಗಿದ ನಂತರ ಮತ್ತೆ ಕೆ.ಆರ್‌.ನಗರಕ್ಕೆ ಭೇಟಿ ನೀಡಿ ಪೂರ್ಣ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದರು.

ಅರ್ಹರಿಗೆ ಸವಲತ್ತು ತಲುಪಿಸಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಪಕ್ಷದ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಿ ಸರ್ಕಾರದ ಸವಲತ್ತುಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು. ಪರಸ್ಪರ ಕೆಸರೆರಚಿಕೊಳ್ಳದೇ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದರ ಜತೆಗೆ ಪಕ್ಷವೂ ಬೆಳೆಯುತ್ತದೆ ಎಂದು ಕಿವಿಮಾತು ಹೇಳಿದರು.

ಬೆಂಬಲ: ಬಿಜೆಪಿ ತಾಲೂಕು ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌ ಮಾತನಾಡಿ, ಗ್ರಾಮೀಣ ದಸರಾ ಆಚರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸುತ್ತಿರುವುದು ಶ್ಲಾಘನೀಯ.ಇಂತಹ ಉತ್ತಮ ಕೆಲಸ ಮಾಡುತ್ತಿರುವ ಸಚಿವರಿಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಕೆ.ಆರ್‌.ನಗರಕ್ಕೆ ಪ್ರಥಮ ಬಾರಿಗೆ ಆಗಮಿಸಿದ ವಿ.ಸೋಮಣ್ಣ ಅವರನ್ನು ತಾಲೂಕು ಬಿಜೆಪಿ ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ಉಪಾಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ವಕ್ತಾರ ಎಚ್‌.ಪಿ.ಗೋಪಾಲ್‌, ರಾಜ್ಯ ಪರಿಷತ್‌ ಸದಸ್ಯ ಎಚ್‌.ಡಿ.ಪ್ರಭಾಕರ್‌ ಜೈನ್‌, ತಾಲೂಕು ಉಪಾಧ್ಯಕ್ಷ ಜತ್ತಿ ಬಸವರಾಜು,

ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ಪುರಸಭಾ ಸದಸ್ಯೆ ವೀಣಾ ವೃಷಭೇಂದ್ರ, ಮಾಜಿ ಸದಸ್ಯ ಪಿ.ಶಂಕರ್‌, ಬಿಜೆಪಿ ಮುಖಂಡರಾದ ಗೋಪಾಲರಾಜು, ಕಗ್ಗುಂಡಿಕುಮಾರ್‌, ಕುಪ್ಪೆ ಪ್ರಕಾಶ್‌, ಉಮಾಶಂಕರ್‌, ಮಾರ್ಕಂಡೇಯಸ್ವಾಮಿ, ತಮ್ಮಣ್ಣ, ತಿಲಕ್‌, ಚಿರಾಗ್‌ಪಟೇಲ್‌, ಆನಂದ, ಚಲುವರಾಜು, ಮಹದೇವ, ರಾಚಯ್ಯ, ಚಂದಗಾಲು ಸೋಮಶೇಖರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.