ದೆಹಲಿಗೆ ತೆರಳಿದ ಸಿದ್ದು, ದಿನೇಶ್ ಗುಂಡೂರಾವ್
Team Udayavani, Sep 12, 2019, 3:06 AM IST
ಬೆಂಗಳೂರು: ಪ್ರತಿಪಕ್ಷದ ನಾಯಕನ ಆಯ್ಕೆ ಹಾಗೂ ಪಕ್ಷದ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ದೆಹಲಿಗೆ ತೆರಳಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ ವರ್ಷಾಚರಣೆಯನ್ನು ಕಾಂಗ್ರೆಸ್ ವತಿಯಿಂದ ಆಚರಿಸುವ ಕುರಿತಂತೆ ಗುರುವಾರ ದೆಹಲಿಯಲ್ಲಿ ಚರ್ಚಿಸಲು ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಕೆಪಿಸಿಸಿ ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ.
ಹೀಗಾಗಿ ಪಕ್ಷದ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಲು ಇಬ್ಬರು ನಾಯಕರೂ ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಪ್ರತಿಪಕ್ಷದ ನಾಯಕನ ಆಯ್ಕೆ, ಪದಾಧಿಕಾರಿಗಳ ನೇಮಕ ಕುರಿತಂತೆ ಚರ್ಚೆ ನಡೆಸಲು ಇಬ್ಬರೂ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಹೈಕಮಾಂಡ್ ಎಲ್ಲಾ ನಾಯಕರ ಅಭಿಪ್ರಾಯ ಪಡೆದು ತೀರ್ಮಾನಿಸುವ ಸಾಧ್ಯತೆಯಿದೆ. ಗುರುವಾರ ಈ ಕುರಿತು ಯಾವುದೇ ತೀರ್ಮಾನವಾಗುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಜೊತೆಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರ ಹೆಸರು ಕೇಳಿ ಬರುತ್ತಿದ್ದು, ಮೂಲ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಎಂ.ವೀರಪ್ಪ ಮೊಯ್ಲಿ, ಬಿ.ಕೆ.ಹರಿಪ್ರಸಾದ್ ಸೇರಿ ಹಿರಿಯ ನಾಯಕರು ಎಚ್.ಕೆ.ಪಾಟೀಲ್ ಪರ ಹೈಕಮಾಂಡ್ ಮುಂದೆ ವಾದ ಮಂಡಿಸಿದ್ದಾರೆ. ಇನ್ನೊಂದೆಡೆ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷದ ನಾಯಕರನ್ನಾಗಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.