ಇಂದು ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆ
Team Udayavani, Sep 12, 2019, 3:06 AM IST
ಬೆಂಗಳೂರು: ಬೇರೆ, ಬೇರೆ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿರುವ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಗುರುವಾರ ಇ.ಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಡಿಕೆಶಿ ಅವರು ತಮ್ಮ ಪುತ್ರಿ ಹೆಸರಿನಲ್ಲಿ ಬೇರೆ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿದ್ದು, ಅವರ ಅಜ್ಜಿಯಿಂದ ಸಾಲ ಪಡೆದಿರುವ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡುವಂತೆ ನೋಟಿಸ್ ನೀಡಿರುವುದ ರಿಂದ ಗುರುವಾರ ಹಾಜರಾಗಲಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಕಾನೂನಿಗೆ ತಲೆ ಬಾಗಿ ವಿಚಾರಣೆ ಎದುರಿಸುವು ದಾಗಿ ಐಶ್ವರ್ಯಾ ಹೇಳಿದ್ದಾಳೆ. ಅವಳು ತುಂಬ ವಿಶ್ವಾಸದಲ್ಲಿ ದ್ದಾಳೆ. ವಿಚಾರಣೆ ಎದುರಿಸುವ ಧೈರ್ಯ ಅವಳಿಗಿದೆ. ತಂದೆ, ಮಗಳಿಗೆ, ಮಗನಿಗೆ, ಗಂಡ, ಹೆಂಡತಿಗೆ ಸಹಾಯ ಮಾಡುವುದು ಭಾರತೀಯ ಸಂಸ್ಕೃತಿ. ಮಗಳಿಗೆ ಯಾಕೆ ಸಹಾಯ ಮಾಡಿದ್ದೀರಿ ಎಂದು ಕೇಳಿದರೆ ಏನು ಹೇಳುವುದು?
ತಂದೆಯಾಗಿ ಶಿವಕುಮಾರ್ ಮಗಳ ವ್ಯವಹಾರಕ್ಕೆ ಸಹಾಯ ಮಾಡಿದ್ದಾರೆ ಎಂದು ಹೇಳಿದರು. ಟಿ.ವಿ.ರಿಪೋರ್ಟರ್ ಈಗ ಮಾಲೀಕರಾಗಿದ್ದಾರೆ. ಏನೂ ಇಲ್ಲದ ಅಮಿತ್ ಶಾ ಮಗ 1 ಸಾವಿರ ಕೋಟಿ ರೂ.ಒಡೆಯನಾಗುತ್ತಾನೆ. ಅದಾನಿ ಸೇರಿದಂತೆ ಕಂಪನಿಗಳು 5 ಸಾವಿರ ಕೋಟಿಯಿಂದ ಲಕ್ಷ ಕೋಟಿ ಆಗುತ್ತವೆ. ಆದರೆ, ಇವುಗಳ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರ ಎಲ್ಲ ಆಸ್ತಿಯೂ ತನಿಖೆಯಾಗಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.