ಮಾನವೀಯ ನೆಲೆಗಟ್ಟಿನಡಿ ಪರಿಹಾರ: ಜೆಡಿಎಸ್ ಆಗ್ರಹ
Team Udayavani, Sep 12, 2019, 5:35 AM IST
ಮಡಿಕೇರಿ: ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಜಿಲ್ಲಾ ಜೆಡಿಎಸ್ ವತಿಯಿಂದ ಕಾಂಡನಕೊಲ್ಲಿಯ ನಿರಾ]ತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಂದರ್ಭ ಅವರು ಮಾತನಾಡಿದರು.
ಪ್ರವಾಹ ಮತ್ತು ಭೂಕುಸಿತದಿಂದ ಕೊಡಗಿನ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕುಟುಂಬಗಳು ವಾಸದ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಪರಿಹಾರವನ್ನು ಸಕಾಲ ದಲ್ಲಿ ಒದಗಿಸದೆ ದಾಖಲೆಗಳನ್ನೇ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಗಣೇಶ್ ಟೀಕಿಸಿದರು.
ಕಾಂಡನಕೊಲ್ಲಿಯ ಬಾವುಕ ಮತ್ತು ಬೀಪಾತು ಎಂಬುವವರು ಅಣ್ಣ ತಂಗಿಯರಾಗಿದ್ದು, ಕಳೆದ 45 ವರ್ಷಗಳಿಂದ ವಾಸವಿದ್ದ ಮನೆಯನ್ನು ಮಹಾಮಳೆಯಿಂದ ಕಳೆದುಕೊಂಡಿದ್ದಾರೆ. ಇವರ ಮನೆಗೆ ಹಕ್ಕುಪತ್ರ ದೊರೆಯದೆ ಇದ್ದ ಕಾರಣವನ್ನೇ ನೆಪ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ನೀಡದೆ ವಂಚಿಸಲಾಗಿದೆ.
ವಾರಸುದಾರರು ಯಾರೂ ಇಲ್ಲದೆ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿರುವ ಇವರಿಬ್ಬರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ದಾಖಲೆಗಳನ್ನು ಕಡ್ಡಾಗೊಳಿಸದೆ ಪ್ರತ್ಯಕ್ಷವಾಗಿ ಕಾಣುತ್ತಿರುವ ನಷ್ಟವನ್ನು ತುಂಬಿಕೊಡಬೇಕೆಂದು ಗಣೇಶ್ ಒತ್ತಾಯಿಸಿದರು.
ಅನೇಕ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ಸರಕಾರ ಸೂಕ್ತ ನಿರ್ದೇಶ ನೀಡಿ ಪರಿಹಾರದ ಮೊತ್ತವನ್ನು ಹಂಚಿಕೆ ಮಾಡಬೇಕೆಂದು ಅವರು ಹೇಳಿದರು. ಮನೆ ಕಳೆದುಕೊಂಡಿರುವ ಅಣ್ಣ, ತಂಗಿಗೆ ಜೆಡಿಎಸ್ ವತಿಯಿಂದ ಆರ್ಥಿಕ ನೆರವನ್ನು ವಿತರಿಸಲಾಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಸುನೀಲ್, ಡೆನ್ನಿ ಬರೋಸ್, ಷರೀಫ್, ಅಬ್ದುಲ್ಲ, ಯೂಸುಫ್. ಹನೀಫ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.