ಶಿಕ್ಷಕರ ವರ್ಗಾವಣೆ ಆದೇಶ ನೀಡಿಲ್ಲ : ಸರಕಾರ
Team Udayavani, Sep 12, 2019, 5:59 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಮಾತ್ರ ನಡೆಸಲಾಗಿದೆ. ಆದರೆ ಯಾರಿಗೂ ವರ್ಗಾವಣೆ ಜಾರಿ ಅಥವಾ ಸ್ಥಳ ನಿಯೋಜನೆ ಆದೇಶ ನೀಡಿಲ್ಲ ಎಂದು ರಾಜ್ಯ ಸರಕಾರ ಬುಧವಾರ ಹೈಕೋರ್ಟ್ಗೆ ತಿಳಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪ್ರಕ್ರಿಯೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ – ಪ್ರೌಢಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪಿ.ಕೆ.ಚಂದ್ರ ಕಾಂತ್ ಸಲ್ಲಿಸಿದ್ದ ಅರ್ಜಿ ವಿಚಾ ರಣೆ ನಡೆಸಿದ ನ್ಯಾ| ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ| ಆರ್. ದೇವದಾಸ್ರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ. ಸರಕಾರದ ಪರ ವಕೀಲರು ಸಲ್ಲಿ ಸಿದ ಈ ಮಾಹಿತಿ ದಾಖಲು ಮಾಡಿ ಕೊಂಡ ನ್ಯಾಯಪೀಠ, ಅರ್ಜಿ ವಿಲೇವಾರಿ ಗೊಳಿಸಲು ಆದೇಶಿಸಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.