ವರ್ಷದಿಂದ ನಡೆದಿಲ್ಲ ಕೆಡಿಪಿ ಸಭೆ!
2018, ಸೆ.12ರ ನಂತರ ಕೆಡಿಪಿಗೆ ಕೂಡಿ ಬಂದಿಲ್ಲ ಮುಹೂರ್ತ
Team Udayavani, Sep 12, 2019, 11:03 AM IST
ಹಣಮಂತರಾವ ಭೈರಾಮಡಗಿ
ಕಲಬುರಗಿ: ಕನಿಷ್ಠ ಮೂರು ತಿಂಗಳಿಗೊಮ್ಮೆ ಆದರೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ಕಳೆದೊಂದು ವರ್ಷದಿಂದ ನಡೆದಿಲ್ಲ.
2018ರ ಸೆಪ್ಟೆಂಬರ್ 12ರಂದು ಆಗ ಸಮಾಜ ಕಲ್ಯಾಣ ಇಲಾಖೆ ಜತೆಗೆ ಉಸ್ತುವಾರಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಕೆಪಿಡಿ ಸಭೆ ನಂತರ ಇಂದಿನವರೆಗೂ ಕೆಡಿಪಿ ಸಭೆ ನಡೆದೇ ಇಲ್ಲ.
ಪ್ರಿಯಾಂಕ್ ಖರ್ಗೆ ಅವರು 2019ರ ಮಾರ್ಚ್ ಅಂತ್ಯದವರೆಗೆ ಕನಿಷ್ಠ ಮೂರು ಕೆಡಿಪಿ ಸಭೆಗಳನ್ನಾದರೂ ನಡೆಸಬೇಕಿತ್ತು. ಆದರೆ ಸಚಿವರು ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ಮಾಡುವ ಗೋಜಿಗೆ ಹೋಗಲೇ ಇಲ್ಲ. ಲೋಕಸಭೆ ಚುನಾವಣೆಗೆಂದು ಎರಡೂವರೆ ತಿಂಗಳು ಕಳೆಯಿತು. ಚುನಾವಣೆ ಬಳಿಕ ಜೂನ್ ಇಲ್ಲವೇ ಜುಲೈ ತಿಂಗಳಲ್ಲೂ ಕೆಡಿಪಿ ಸಭೆಗೆ ಉಸ್ತುವಾರಿ ಸಚಿವರು ಮುಂದಾಗಲಿಲ್ಲ. ಕೊನೆಗೆ ಜುಲೈ ಕೊನೆ ವಾರದಲ್ಲಿ ಮಾಜಿ ಸಚಿವರಾದರು. ಜುಲೈ ಕೊನೆ ವಾರದಲ್ಲಿ ನೂತನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಸಂಪುಟ ವಿಸ್ತರಣೆಗೆ ತಿಂಗಳ ಸಮಯ ತೆಗೆದುಕೊಳ್ಳಲಾಯಿತು. ಸಚಿವ ಸಂಪುಟ ವಿಸ್ತರಣೆಯಾಗಿ 17 ನೂತನ ಸಚಿವರಾದರೂ ಇಂದಿನವರೆಗೂ ಉಸ್ತುವಾರಿ ಸಚಿವರ ನೇಮಕವೇ ಆಗಿಲ್ಲ.
ಸಭೆಯಿಂದ ಸಂಸದರೂ ದೂರ: ಲೋಕಸಭೆ ಸದಸ್ಯರು ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳ ದಿಶಾ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸುತ್ತಾರೆ. ಆದರೆ ಸಂಸದ ಡಾ| ಉಮೇಶ ಜಾಧವ ಅವರು ತಮ್ಮ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ಇಂದಿನವರೆಗೂ ಮುಂದಾಗಿಲ್ಲ. ಆಗಸ್ಟ್ 15ರೊಳಗೆ ಉಸ್ತುವಾರಿ ಸಚಿವರ ನೇಮಕ ಆಗಬಹುದೆಂದು ನಿರೀಕ್ಷಿಸಲಾಗಿತ್ತು. ಅದೂ ಕೈಗೂಡಲಿಲ್ಲ. ಈಗ ಉಸ್ತುವಾರಿ ಸಚಿವರು ನೇಮಕವಾಗಿ ಕೆಡಿಪಿ ಸಭೆ ಯಾವಾಗ ನಡೆಯುತ್ತದೆ ಎಂದು ತಿಳಿಯದಂತಾಗಿದೆ.
ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯದೇ ಇರುವುದರಿಂದ ಅಭಿವೃದ್ಧಿ ಮೇಲೆ ಪರಿಣಾಮ ಬೀರಿದೆ. ವಿವಿಧ ಇಲಾಖೆಗಳಡಿ 12 ಕೋಟಿ ರೂ.ಗೂ ಹೆಚ್ಚು ಅನುದಾನ ಬಳಕೆಯಾಗದೇ ಸರ್ಕಾರಕ್ಕೆ ವಾಪಸ್ ಹೋಗಿದೆ. ಅಲ್ಲದೇ ಇಲಾಖಾ ಅಧಿಕಾರಿಗಳೇ ಮಾಡಿದ್ದೇ ಕೆಲಸ ಎನ್ನುವಂತಾಗಿದೆ. ಕಳೆದ ವರ್ಷ ಬೆಳೆ ಹಾನಿ ನಿಖರವಾಗಿ ವರದಿ ಮಾಡದಿದ್ದಕ್ಕೆ ಕಲಬುರಗಿ ಜಿಲ್ಲೆಗೆ ಕೇವಲ 10 ಕೋಟಿ ರೂ. ಮಾತ್ರ ಬೆಳೆವಿಮೆ ಬಂದಿದೆ. ಪಕ್ಕದ ಜಿಲ್ಲೆಗೆ ನೂರಾರು ಕೋಟಿ ರೂ. ಬೆಳೆವಿಮೆ ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಿಲ್ಲೆಗೆ ಬರಬೇಕಿದ್ದ 451 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಇಂದಿನವರೆಗೂ ಬಂದಿಲ್ಲ. ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ.
ಸೆ.17ರಂದು ಹೈದ್ರಾಬಾದ ಕರ್ನಾಟಕ ವಿಮೋಚನಾ (ಈಗ ಕಲ್ಯಾಣ ಕರ್ನಾಟಕವಾಗಿದೆ) ದಿನಾಚರಣೆ ನಡೆಯಲಿದ್ದು, ‘ಕಲ್ಯಾಣ ಕರ್ನಾಟಕ’ದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರುಗಳೇ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎನ್ನಲಾಗುತ್ತಿದೆ. ಉಳಿದ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸುವರು ಯಾರು ಎನ್ನುವ ಪರಿಸ್ಥಿತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.