ಜಾಧವ್ ಎರಡನೇ ಬಾರಿ ಕಾನ್ಸುಲರ್ ಭೇಟಿಗೆ ಅವಕಾಶವಿಲ್ಲ; ಭಾರತಕ್ಕೆ ಪಾಕ್
Team Udayavani, Sep 12, 2019, 6:42 PM IST
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗಕ್ಕೀಡಾಗಿರುವ ಪಾಕಿಸ್ತಾನ ಇದೀಗ ಗೂಢಚಾರದ ಆರೋಪದಡಿ ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತಕ್ಕೆ ಎರಡನೇ ಬಾರಿ ರಾಜತಾಂತ್ರಿಕ ನೆರವಿನ ಅವಕಾಶ ನೀಡುವುದಿಲ್ಲ ಎಂದು ಗುರುವಾರ ತಿಳಿಸಿದೆ.
ಗೂಢಚಾರದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಆದರೆ ಪ್ರಕರಣ ಅಂತಾರಾಷ್ಟ್ರೀಯ ಕೋರ್ಟ್ ಮೆಟ್ಟಿಲೇರಿದ್ದರಿಂದ ಗಲ್ಲುಶಿಕ್ಷೆಯನ್ನು ತಡೆಹಿಡಿಯುವಂತೆ ಸೂಚಿಸಿ, ರಾಜತಾಂತ್ರಿಕ ನೆರವು ಕಲ್ಪಿಸಿಕೊಡುವಂತೆ ತೀರ್ಪು ನೀಡಿತ್ತು.
ಜಾಧವ್ ಗೆ 2ನೇ ಬಾರಿ ರಾಜತಾಂತ್ರಿಕ ನೆರವು ಕಲ್ಪಿಸಿಕೊಡುವುದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ವಿಯೆನ್ನಾ ಒಪ್ಪಂದದ ಪ್ರಕಾರ ಗಲ್ಲುಶಿಕ್ಷೆಗೊಳಗಾಗಿರುವ ಕುಲಭೂಷಣ್ ಜಾಧವ್ ಗೆ ಎರಡನೇ ಬಾರಿ ರಾಜತಾಂತ್ರಿಕ ನೆರವಿನ ಅವಕಾಶ ಕೊಡುವುದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನ ಮತ್ತೆ ತನ್ನ ಹಳೆ ನೀತಿಯನ್ನೇ ಮುಂದುವರಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.