ಗಿರಿಗಿಟ್ ಚಿತ್ರಕ್ಕೆ ತಡೆಯಾಜ್ಞೆ: ಸಾಮಾಜಿಕ ತಾಣದ ಅವಾಚ್ಯ ನಿಂದನೆ ವಿರುದ್ಧ ವಕೀಲರ ದೂರು
Team Udayavani, Sep 13, 2019, 8:56 AM IST
ಸುರತ್ಕಲ್: ‘ಗಿರಿಗಿಟ್’ ತುಳು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ಕುರಿತು ವಕೀಲರ ಸಂಘದ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಅಶ್ಲೀಲ ಮತ್ತು ಅವಾಚ್ಯ ಪದಗಳಿಂದ ಅವಹೇಳನಕಾರಿಯಾಗಿ ನಿಂದಿಸಿದ ಬಗ್ಗೆ ವಕೀಲರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರಿಗೆ ವಕೀಲರ ಸಂಘದ ನಿಯೋಗ ಮನವಿ ಮಾಡಿದೆ.
ಮಂಗಳೂರು ಬಂದರು ಪೊಲೀಸ್ ಠಾಣೆಗೆ ಈ ಬಗ್ಗೆ ಗುರುವಾರ ಸಂಜೆ ಲಿಖಿತ ದೂರು ನೀಡಿದ್ದು, ಅವಾಚ್ಯ ಟೀಕೆಗಳನ್ನು ಬರೆದು ಸಾಮಾಜಿಕ ಸ್ವಾಸ್ಥ್ಯ ಕದಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ವಕೀಲರ ಸಂಘದ ಬಗ್ಗೆ ಮತ್ತು ತಡೆಯಾಜ್ಞೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಸಹಿತ ಗಣ್ಯರ ಬಗ್ಗೆ ಅವಾಚ್ಯ ನಿಂದನೆ ಮಾಡಿರುವ ಕೆಲವು ಸ್ಕ್ರೀನ್ ಶಾಟ್‌ಗಳನ್ನು ವಕೀಲರು ಪೊಲೀಸರಿಗೆ ನೀಡಿದ್ದಾರೆ.
ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಸಂದೇಶಗಳನ್ನು ಹಾಕಿದವರನ್ನು, ಅದನ್ನು ಫಾರ್ವರ್ಡ್ ಮಾಡಿದವರನ್ನು ಮತ್ತು ಅದಕ್ಕೆ ಬೆಂಬಲಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಹರ್ಷ ಮತ್ತು ಬಂದರು ಪೊಲೀಸರು ವಕೀಲರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಈ ದೂರಿನ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆ ಹಚ್ಚಿ ತಕ್ಷಣ ಅವರನ್ನು ವಶಕ್ಕೆ ಪಡೆಯುವ ಕಾರ್ಯ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಕೀಲರ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಹಿನ್ನೆಲೆಯಲ್ಲಿ ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲರ ಸಮುದಾಯದ ಅವಹೇಳನ ನಡೆದಿದೆ ಎಂದು ಆರೋಪಿಸಿ ಮಂಗಳೂರು ವಕೀಲರ ಸಂಘ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರು ಈ ಚಿತ್ರದ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.