ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Sep 13, 2019, 10:43 AM IST
ಕಲಘಟಗಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ವಿದ್ಯಾರ್ಥಿಗಳ ಮನವೊಲಿಸಿದ ಪೊಲೀಸ್ ಸಿಬ್ಬಂದಿ.
ಕಲಘಟಗಿ: ಪಟ್ಟಣದಿಂದ ಧಾರವಾಡಕ್ಕೆ ದಿನಂಪ್ರತಿ ಹೊರಡುವ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದಿರುವುದನ್ನು ಖಂಡಿಸಿ ಬಸ್ ನಿಲ್ದಾಣದ ಎದುರು ಧಾರವಾಡ ಮಾರ್ಗವಾಗಿ ತೆರಳುವ ಎಲ್ಲ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವರ್ಷದಿಂದ ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದು, ಮುನ್ಸೂಚನೆ ಇಲ್ಲದೇ ಏಕಾಏಕಿ ಬಸ್‌ಗಳನ್ನು ರದ್ದು ಗೊಳಿಸುವಿಕೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೆಲ್ಲರೂ ರೋಸಿ ಹೋಗಿದ್ದರು. ಸಮಸ್ಯೆಗಳ ಪರಿಹಾರಕ್ಕೆ ಹತ್ತಾರು ಬಾರಿ ಲಿಖೀತ ಮನವಿ ಸಲ್ಲಿಸಿದ್ದರೂ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಸ್ ತಡೆದು ಆಕ್ರೋಶ ಹೊರಹಾಕಿದರು.
ಪ್ರತಿನಿತ್ಯವೂ ಶಾಲೆ-ಕಾಲೇಜುಗಳಿಗೆ ತಡವಾಗಿ ಹೋಗುವುದರಿಂದ ವಿದ್ಯಾರ್ಜನೆಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಬೆಳಗಿನ ಸಮಯದಲ್ಲಿ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ಒಂದೊಂದು ಬಸ್ಸಿನಲ್ಲಿ ಮೂರು ಬಸ್ಸಿನಷ್ಟು ಪ್ರಯಾಣಿಕರು ಸಂಚರಿಸುವಂತಾಗಿದೆ. ಅನಿರೀಕ್ಷಿತ ಹೋರಾಟ ಮಾಡಿದಾಗ ಕಾನೂನು ಕ್ರಮ ಜರುಗಿಸುವ ಪೊಲೀಸರ ಎಚ್ಚರಿಕೆಯ ಭಯವೂ ಇದೆ ಎಂದು ವಿದ್ಯಾರ್ಥಿಗಳು ಮಾಧ್ಯಮದೆದುರು ಅಳಲು ತೋಡಿಕೊಂಡರು.
ತತ್‌ಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಆದರೆ, ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಶನಿವಾರ (ಸೆ.14) ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.