ಕೊಪ್ಪಳ : 4 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ
Team Udayavani, Sep 13, 2019, 10:22 PM IST
ಕೊಪ್ಪಳ: ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಸಮೀಪದ ಕಾಲಸಾ ಬಾಲ ಪಂಜಾಬ್ ಡಾಬಾದಲ್ಲಿ ಮಾದಕ ವಸ್ತುಗಳು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ 4 ಲಕ್ಷ ರೂ. ಮೌಲ್ಯದ ವಸ್ತುಗಳ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ 2 ಕೆ.ಜಿ ಓಪಿಯಂ ಮಾದಕ ಪುಡಿ, 3.6 ಕೆ.ಜಿ ಓಪಿಯಂ ಹಸ್ಕ್ (ಓಪಿಯಂ ಸಿಪ್ಪೆ), 40 ಗ್ರಾಂ ಓಪಿಯಂ ಪೇಸ್ಟ್, ಬೆಂಗಳೂರು ಮಾಲ್ಟ್ ವಿಸ್ಕಿಯ 180 ಎಂಎಲ್ನ 25 ಮದ್ಯ ತುಂಬಿದ ಟೆಟ್ರಾ ಪ್ಯಾಕ್,
ಬ್ಲೆಂಡರ್ಸ್ ಪ್ರೈಡ್ ವಿಸ್ಕಿಯ 750 ಎಂ.ಎಲ್ನ 1 ಮದ್ಯ ತುಂಬಿದ ಬಾಟಲಿ ಸೇರಿದಂತೆ ಒಂದು ಮಹೀಂದ್ರಾ ಜೈಲೊ ವಾಹನ ವಶಕ್ಕೆ ಪಡೆದಿದ್ದಾರೆ. ಈ ಮಾದಕ ವಸ್ತುಗಳ ಅಂದಾಜು ಮೌಲ್ಯ 4,14,600 ರೂ. ಆಗಿದ್ದು, ವಾಹನದ ಮೌಲ್ಯ 10 ಲಕ್ಷ ರೂ.ಗಳಾಗಿತ್ತದೆ. ಡಾಬಾದ ಮಾಲೀಕ ಕುಲವಿಂದರ್ ಸಿಂಗ್ ತಂ. ಅಚ್ಚರ್ ಸಿಂಗ್ನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಪ್ಪಳ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಕುಷ್ಟಗಿ ವಲಯ ಅಬಕಾರಿ ನಿರೀಕ್ಷಕರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.